ಬೆಳಗಾವಿ: ಕೆಎಸ್​​ಆರ್​ಟಿಸಿ ಬಸ್ ಪಲ್ಟಿ, ವಿದ್ಯಾರ್ಥಿಗಳು ಸೇರಿ 20 ಪ್ರಯಾಣಿಕರಿಗೆ ಗಾಯ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದ ಬಳಿ ಕೆಎಸ್ಆರ್​ಟಿಸಿ ಬಸ್​ ಪಲ್ಟಿಯಾಗಿದೆ. ಘಟನೆಯಲ್ಲಿ ವಿದ್ಯಾರ್ಥಿಗಳು ಸೇರಿ 20 ಜನ ಪ್ರಯಾಣಿಕರಿಗೆ ಗಾಯಗಳಾಗಿವೆ. ಇನ್ನೊಂದೆಡೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ MB ಅಯ್ಯನಹಳ್ಳಿ ಬಳಿ ಖಾಸಗಿ ಬಸ್ ಪಲ್ಟಿಯಾಗಿದೆ. ಈ ಎರಡು ಸುದ್ದಿ ವಿವರ ಇಲ್ಲಿದೆ.

ಬೆಳಗಾವಿ: ಕೆಎಸ್​​ಆರ್​ಟಿಸಿ ಬಸ್ ಪಲ್ಟಿ, ವಿದ್ಯಾರ್ಥಿಗಳು ಸೇರಿ 20 ಪ್ರಯಾಣಿಕರಿಗೆ ಗಾಯ
ಕೆಎಸ್​ಆರ್​ಟಿಸಿ ಬಸ್ ಪಲ್ಟಿ
Follow us
Sahadev Mane
| Updated By: ರಮೇಶ್ ಬಿ. ಜವಳಗೇರಾ

Updated on: Sep 26, 2023 | 10:37 AM

ಬೆಳಗಾವಿ, (ಸೆಪ್ಟೆಂಬರ್ 26): ಬೆಳಗಾವಿ(Belagavi) ಜಿಲ್ಲೆಯ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದ ಬಳಿ ಕೆಎಸ್ಆರ್​ಟಿಸಿ ಬಸ್​ (KSRTC Bus) ಪಲ್ಟಿಯಾಗಿದೆ. ಘಟನೆಯಲ್ಲಿ ವಿದ್ಯಾರ್ಥಿಗಳು(Students)  ಸೇರಿ 20 ಜನ ಪ್ರಯಾಣಿಕರಿಗೆ ಗಾಯಗಳಾಗಿವೆ. ಇಂದು (ಸೆಪ್ಟೆಂಬರ್ 26) ಹುಲಕುಂದ ಗ್ರಾಮದಿಂದ ರಾಮದುರ್ಗ ಕಡೆಗೆ ಹೊರಟ್ಟಿದ್ದ 50ಕ್ಕೂ ಅಧಿಕ ಪ್ರಯಾಣಿಕರಿದ್ದ ಬಸ್, ಫಾಟಾ ಕಟ್ ಆಗಿ ಮರಕ್ಕೆ ಡಿಕ್ಕಿ ಹೊಡೆದು ಬಳಿ ಫಲ್ಟಿಯಾಗಿದೆ. ಘಟನೆಯಲ್ಲಿ 20 ಜನ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಕೂಡಲೇ ಗಯಾಳುಗಳನ್ನು ರಾಮದುರ್ಗ ಸರ್ಕಾರಿ ಆಸ್ಪತ್ರೆ ಸಾಗಿಸಲಾಗಿದೆ. ಅದೃಷ್ಟವಶಾತ್, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಇದನ್ನೂ ಓದಿ: ತುಮಕೂರು ಬಳಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು, ಕಾರು ನಜ್ಜುಗುಜ್ಜು

ಖಾಸಗಿ ಬಸ್ ಪಲ್ಟಿ

ಇನ್ನೊಂದೆಡೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ MB ಅಯ್ಯನಹಳ್ಳಿ ಬಳಿ ಇಂದು (ಸೆ.26) ಖಾಸಗಿ ಬಸ್ ಪಲ್ಟಿಯಾಗಿದೆ. 10 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಇನ್ನು ಬಸ್​ ಚಾಲಕನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ ಬಸ್, MB ಅಯ್ಯನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ