Belagavi Flood: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣಾ ನದಿ; 30ಕ್ಕೂ ಹೆಚ್ಚು ಗ್ರಾಮಗಳು ಮುಳುಗಡೆ, ನೀರಿನಲ್ಲಿ ತೇಲಿ ಹೋದ ಜಾನುವಾರುಗಳು

ಕೃಷ್ಣಾ ನದಿಯಲ್ಲಿ ಕ್ಷಣ ಕ್ಷಣಕ್ಕೂ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ನದಿಯ ಪ್ರವಾಹಕ್ಕೆ ಅಥಣಿ ತಾಲೂಕಿನ ದರೂರ ಸೇತುವೆ ಮುಳುಗಡೆಯಾಗಿದ್ದು, 20ಕ್ಕೂ ಹೆಚ್ಚು ಗ್ರಾಮಗಳಿಗೆ ಸಂಪರ್ಕ ಕಡಿತವಾಗಿದೆ.

Belagavi Flood: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣಾ ನದಿ; 30ಕ್ಕೂ ಹೆಚ್ಚು ಗ್ರಾಮಗಳು ಮುಳುಗಡೆ, ನೀರಿನಲ್ಲಿ ತೇಲಿ ಹೋದ ಜಾನುವಾರುಗಳು
ಜಲಾವೃತವಾದ ಸೇತುವೆ
Follow us
TV9 Web
| Updated By: sandhya thejappa

Updated on:Jul 26, 2021 | 10:29 AM

ಬೆಳಗಾವಿ: ಕೃಷ್ಣಾ ನದಿ (Krishna River) ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ನೀರು ನುಗ್ಗಿ 30ಕ್ಕೂ ಹೆಚ್ಚು ಗ್ರಾಮಗಳು ಮುಳುಗಡೆಯಾಗಿವೆ. ಜಿಲ್ಲೆಯ ರಾಯಬಾಗ ತಾಲೂಕಿನ ಮೊಳವಾಡ ಮತ್ತು ಕುಸಲಾಳ ಸೇರಿ 30ಕ್ಕೂ ಹೆಚ್ಚು ಗ್ರಾಮಗಳು ಮುಳುಗಡೆಯಾಗಿವೆ. ಊರು ಮುಳುಗಡೆಯಾದ ಹಿನ್ನೆಲೆ ಪಿಕ್ಅಪ್ ವಾಹನ ಜಾನುವಾರುಗಳನ್ನು ಹೊತ್ತು ತರುತ್ತಿತ್ತು. ಈ ವೇಳೆ ನೀರಿನ ರಭಸಕ್ಕೆ ವಾಹನ ಪಲ್ಟಿಯಾಗಿದೆ. ವಾಹನದಲ್ಲಿದ್ದ ಎರಡು ಎಮ್ಮೆ ಒಂದು ಎತ್ತು ವಾಹನದಲ್ಲೇ ಒದ್ದಾಡಿ ಜೀವ ಬಿಟ್ಟಿವೆ. ಸ್ಥಳೀಯರು ಜೆಸಿಬಿಯಿಂದ ವಾಹನವನ್ನು ಹೊರತೆಗೆದಿದ್ದಾರೆ. ಆದರೆ ಮೃತಪಟ್ಟ ಜಾನುವಾರುಗಳು ಕೃಷ್ಣಾ ನದಿಯಲ್ಲಿ ತೇಲಿ ಹೋಗಿವೆ.

ಕೃಷ್ಣಾ ನದಿಯಲ್ಲಿ ಕ್ಷಣ ಕ್ಷಣಕ್ಕೂ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ನದಿಯ ಪ್ರವಾಹಕ್ಕೆ ಅಥಣಿ ತಾಲೂಕಿನ ದರೂರ ಸೇತುವೆ ಮುಳುಗಡೆಯಾಗಿದ್ದು, 20ಕ್ಕೂ ಹೆಚ್ಚು ಗ್ರಾಮಗಳಿಗೆ ಸಂಪರ್ಕ ಕಡಿತವಾಗಿದೆ. ಸೇತುವೆ ಮುಳುಗಡೆಯಿಂದ ಮಹಾರಾಷ್ಟ್ರದ ಜತ್ತ, ಜಾಂಬೋಟಿ ಸಂಪರ್ಕ ಕೂಡ ಕಟ್ ಆಗಿದೆ. ನದಿಯ ಹೊರ ಹರಿವು 4 ಲಕ್ಷದ 10 ಸಾವಿರ ಕ್ಯೂಸೆಕ್ ಇದೆ.

ಹಿರಣ್ಯಕೇಶಿ ನದಿಯಲ್ಲಿ ಹೆಚ್ಚಾದ ನೀರಿನ ಹರಿವು ಹಿರಣ್ಯಕೇಶಿ ನದಿ ನೀರು ನುಗ್ಗಿ ಹುಕ್ಕೇರಿ ತಾಲೂಕಿನ ಬಡಕುಂದ್ರಿ ಗ್ರಾಮ ಮುಳುಗಡೆಯಾಗಿದೆ. ಕಾಳಜಿ ಕೇಂದ್ರಕ್ಕೆ ಬಡಕುಂದ್ರಿ ಗ್ರಾಮಸ್ಥರನ್ನು ಸ್ಥಳಾಂತರ ಮಾಡಲಾಗಿದೆ. ಗ್ರಾಮದಲ್ಲಿರುವ ಎಲ್ಲಾ ಮನೆಗಳು ಮುಳುಗಡೆಯಾದ ಹಿನ್ನೆಲೆ ರಾತ್ರೋರಾತ್ರಿ ಊರು ಬಿಟ್ಟು ಗ್ರಾಮಸ್ಥರು ಕಾಳಜಿ ಕೇಂದ್ರಕ್ಕೆ ಹೋಗಿದ್ದಾರೆ. ಗ್ರಾಮದಲ್ಲಿರುವ ಪ್ರಸಿದ್ಧ ಹೊಳೆಮ್ಮಾ ದೇವಸ್ಥಾನ ಭಾಗಶಃ ಮುಳುಗಡೆಯಾಗಿದೆ.

ರೋಗಿಗಳ ರಕ್ಷಣೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮಕ್ಕೆ ಕೃಷ್ಣಾ ನದಿಯ ನೀರು ನುಗ್ಗಿದೆ. ಗ್ರಾಮದ ಖಾಸಗಿ ಆಸ್ಪತ್ರೆಯಲ್ಲಿದ್ದ ರೋಗಿಗಳನ್ನು ರಕ್ಷಣೆ ಮಾಡಲಾಗಿದೆ. ಸ್ಥಳೀಯ ಯುವಕರು‌ ರೋಗಿಗಳನ್ನ ಹೆಗಲ ಮೇಲೆ ಹೊತ್ತು ತಂದು ಬೇರೊಂದು ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ.

ಇದನ್ನೂ ಓದಿ

Karnataka Dams Water Level: ಮಳೆನಾಡು ಕರ್ನಾಟಕ, ಶೇ 20ರಷ್ಟು ಅಧಿಕ ಮಳೆ, 12 ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ

ಬಿಳಿ ನೊರೆಯ ಹಾಲಿನಂತೆ ಧುಮ್ಮಿಕ್ಕುತ್ತಿದ್ದಾಳೆ ಕಾವೇರಿ, ಪ್ರವಾಸಿಗರನ್ನು ಮೋಡಿ ಮಾಡುತ್ತಿದೆ ಭರಚುಕ್ಕಿ

(More than 30 villages have been inundated by water from the Krishna River at Belagavi)

Published On - 8:40 am, Mon, 26 July 21

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ