ಬೆಳಗಾವಿ, ಮೇ.22: ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದ ಬೀರೇಶ್ವರ, ಕರೆಮ್ಮ ಜಾತ್ರೆಯಲ್ಲಿ ಪ್ರಸಾದ (Prasadam) ಸೇವಿಸಿದ್ದ 46 ಜನ ಭಕ್ತರು ಅಸ್ವಸ್ಥಗೊಂಡಿದ್ದು ಐವರ ಸ್ಥಿತಿ ಗಂಭೀರವಾಗಿದೆ. ಪ್ರಸಾದ, ಮನೆಯಲ್ಲಿ ಮಾವಿನ ಹಣ್ಣಿನ ಶಿಖರಣಿ ಸೇವಿಸಿದ್ದವರಲ್ಲಿ ಏಕಾಏಕಿ ವಾಂತಿ-ಭೇದಿ ಕಾಣಿಸಿಕೊಂಡಿದ್ದು ಅಸ್ವಸ್ಥಗೊಂಡಿದ್ದಾರೆ. ಸದ್ಯ ಅಸ್ತವ್ಯಸ್ಥಗೊಂಡವರನ್ನು ಸವದತ್ತಿ ಸಾರ್ವಜನಿಕ ಆಸ್ಪತ್ರೆ ಹಾಗೂ ಬೆಳಗಾವಿ (Belagavi) ಜಿಲ್ಲಾಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಗ್ರಾಮದಲ್ಲಿನ ಪರಿಸ್ಥಿತಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮದಲ್ಲಿಯೇ ಬೀಡುಬಿಟ್ಟಿದ್ದಾರೆ. ತೀವ್ರ ಅಸ್ವಸ್ಥಗೊಂಡ ಐವರನ್ನ ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ತಾಲೂಕು ವೈದ್ಯರು ಅಹಿತಕರ ಘಟನೆ ಆಗದಂತೆ ಗ್ರಾಮದಲ್ಲಿ ಕ್ಯಾಂಪ್ ತೆರೆದು ಪ್ರತಿಯೊಬ್ಬರ ಆರೋಗ್ಯ ತಪಾಸಣೆ ಮಾಡುತ್ತಿದ್ದಾರೆ. ಮಾಹಿತಿ ಸಿಗುತ್ತಿದ್ದಂತೆ ಸ್ಥಳೀಯ ಶಾಸಕ ವಿಶ್ವಾಸ್ ವೈದ್ಯ ಆಸ್ಪತ್ರೆಗೆ ದೌಡಾಯಿಸಿ ಅಗತ್ಯ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಮನೆಯಲ್ಲಿ ಯಾರು ಇಲ್ಲದಿದ್ದಾಗ ಅಣ್ಣ-ತಂಗಿ ಲೈಂಗಿಕ ಕ್ರಿಯೆ: ಗರ್ಭಿಣಿಯಾದ ಸಹೋದರಿ!
ಅಂಜನಾದ್ರಿ ದೇವಸ್ಥಾನದ ಹುಂಡಿಯಲ್ಲಿ ಪಾಕಿಸ್ತಾನದ ನಾಣ್ಯ ಪತ್ತೆಯಾಗಿದೆ. ನಿನ್ನೆ ಕೊಪ್ಪಳದ ಎಸಿ ಕ್ಯಾಪ್ಟನ್ ಮಹೇಶ್ ನೇತೃತ್ವದಲ್ಲಿ ನಿನ್ನೆ ಹುಂಡಿ ಎಣಿಕೆ ಕಾರ್ಯ ನಡೆಯಿತ್ತು. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ದೇವಸ್ಥಾನದಲ್ಲಿ ಪಾಕಿಸ್ತಾನದ 5 ರೂಪಾಯಿ ಮುಖಬೆಲೆಯ ನಾಣ್ಯ ಸಂಗ್ರಹವಾಗಿದೆ. ಇದ್ರ ಜೊತೆಗೆ ಅಮೆರಿಕ ಸೇರಿ ಐದು ವಿದೇಶಿ ನಾಣ್ಯಗಳು ಹುಂಡಿಯಲ್ಲಿ ಸಂಗ್ರಹವಾಗಿವೆ. ಕಳೆದ 2ತಿಂಗಳಲ್ಲಿ ಹುಂಡಿಯಲ್ಲಿ 30 ಲಕ್ಷದ 21 ಸಾವಿರದ 252 ರೂಪಾಯಿ ಸಂಗ್ರಹವಾಗಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 6:51 am, Wed, 22 May 24