ಬೆಳಗಾವಿ: ಭಾರೀ ಮಳೆಯಿಂದ (Rain) ಮನೆ ಗೋಡೆ ಕುಸಿದು ತಾಯಿ, ಮಗ ಸಾವನ್ನಪಿರುವ ಘಟನೆ ಯರಗಟ್ಟಿ ತಾಲೂಕಿನ ಮಾಡಗೇರಿ ಗ್ರಾಮದಲ್ಲಿ ನಡೆದಿದೆ. ಯಲ್ಲವ್ವ(40), ಪುತ್ರ ಪ್ರಜ್ವಲ್(5) ಮೃತ ದುರ್ದೈವಿಗಳು. 2 ದಿನದಿಂದ ನಿರಂತರ ಮಳೆಯಿಂದ ಮನೆಯ ಗೋಡೆ ಕುಸಿತಗೊಂಡಿದೆ. ಘಟನೆಯಲ್ಲಿ ಮತ್ತಿಬ್ಬರಿಗೆ ಗಾಯವಾಗಿದ್ದು, ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೇಬು ತುಂಬಿದ್ದ ಟ್ರಕ್ ಕಾರಿನ ಮೇಲೆ ಪಲ್ಟಿ, 3 ಜನ ಸಾವು
ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ಛರಾಬ್ರಾ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ಸೇಬು ತುಂಬಿದ್ದ ಟ್ರಕ್ ಕಾರಿನ ಮೇಲೆ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ.
ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:45 pm, Sat, 1 October 22