ಹೃದಯ ವಿದ್ರಾವಕ ಘಟನೆ: ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಪ್ರತ್ಯೇಕ ಘಟನೆ: ಕೌಟುಂಬಿಕ ಕಲಹ ಹಿನ್ನಲೆಚಿಕ್ಕೋಡಿ ತಾಲೂಕಿನ ಮಾಂಗನೂರ ಗ್ರಾಮದಲ್ಲಿ ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತ ಕುಂದಾಪುರ ತಾಲೂಕಿನ ಕೋಟೇಶ್ವರ-ಹಾಲಾಡಿ ರಸ್ತೆಯ ಕಾಗೇರಿ ಪ್ರದೇಶದಲ್ಲಿ ಫುಟ್​ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿ ಮೇಲೆ ಲಾರಿ ಹರಿದು ಕೊನೆಯುಸಿರೆಳೆದಿದ್ದಾರೆ.

ಹೃದಯ ವಿದ್ರಾವಕ ಘಟನೆ: ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ
ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 01, 2024 | 4:37 PM

ಬೆಳಗಾವಿ, ಅ.01: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಗನೂರ ಗ್ರಾಮದಲ್ಲಿ 17 ತಿಂಗಳ ಮಗುವಿನೊಂದಿಗೆ ತಾಯಿ ಬಾವಿಗೆ ಹಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಾಯತ್ರಿ ವಾಗಮೋರೆ(26), ಮಗು ಕುಶಾಲ್ ಮೃತರು. ಕೌಟುಂಬಿಕ ಕಲಹ ಹಿನ್ನಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗು ಹಾಗೂ ತಾಯಿ ಶವವನ್ನು ಹೊರ ತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಲಾರಿ ಹರಿದು ಪ್ರಥಮ ಬಿಎಸ್​ಸಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಉಡುಪಿ: ಕಾಲೇಜು ಮುಗಿಸಿ ಸ್ನೇಹಿತರೊಂದಿಗೆ ತೆರಳುತ್ತಿದ್ದ ಪ್ರಥಮ ಬಿಎಸ್​ಸಿ ವಿದ್ಯಾರ್ಥಿ ಮೇಲೆ ಟಿಪ್ಪರ್ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರ-ಹಾಲಾಡಿ ರಸ್ತೆಯ ಕಾಗೇರಿ ಪ್ರದೇಶದಲ್ಲಿ ನಡೆದಿದೆ. ವಿದ್ಯಾರ್ಥಿ ಧನುಷ್(19) ಸ್ಥಳದಲ್ಲೇ ಕೊನೆಯುಸಿರೆಳದ ವಿದ್ಯಾರ್ಥಿ. ಇತ ಕೋಟೇಶ್ವರದ ವರದರಾಜ ಶೆಟ್ಟಿ ಸರ್ಕಾರಿ ಕಾಲೇಜಿನಲ್ಲಿ ಓದುತ್ತಿದ್ದ.

ಇದನ್ನೂ ಓದಿ:ಬೆಂಗಳೂರಿನ ಮಹಾಲಕ್ಷ್ಮೀಯನ್ನು 50ಕ್ಕೂ ಹೆಚ್ಚು ಪೀಸ್ ಪೀಸ್ ಮಾಡಿದ್ದ ಹಂತಕ ಆತ್ಮಹತ್ಯೆ

ಪ್ರತಿದಿನದಂತೆ ಇಂದು ಕೂಡ ಕಾಲೇಜು ಮುಗಿಸಿ ಸ್ನೇಹಿತರ ಜೊತೆ ತೆರಳುತ್ತಿದ್ದ ಧನುಷ್, ಫುಟ್​ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ. ಈ ವೇಳೆ ಎದುರಿನಿಂದ ಬರುತ್ತಿದ್ದ ಕಾರನ್ನು ತಪ್ಪಿಸಲು ಹೋದ ಲಾರಿ ಚಾಲಕ, ಧನುಷ್​ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಧನುಷ್ ಸ್ಥಳದಲ್ಲೇ ಜೀವಬಿಟ್ಟಿದ್ದಾನೆ. ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

ವಿದ್ಯುತ್ ಪ್ರವಹಿಸಿ 11 ಕುರಿ, ಒಂದು ಶ್ವಾನ ಬಲಿ

ಗದಗ: ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯುತ್ ಪ್ರವಹಿಸಿ 11 ಕುರಿ ಹಾಗೂ 1 ಶ್ವಾನ ಬಲಿಯಾದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಹೊರವಲಯದಲ್ಲಿ ನಡೆದಿದೆ. ಜಮೀನೊಂದರಲ್ಲಿ ವಿದ್ಯುತ್ ಕಂಬ ನೆಲಕ್ಕುರುಳಿ ಕರೆಂಟ್ ಶಾಕ್ ಹೊಡೆದಿದ್ದು, ವಿದ್ಯುತ್ ನಿಷ್ಕ್ರೀಯಗೊಳಿಸದೇ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ತೋರಿದ್ದಾರೆ. ಇದರಿಂದ ದುರ್ಘಟನೆ ನಡೆದಿದೆ ಎನ್ನಲಾಗಿದೆ.

ಇನ್ನು ಬೆಳಗಾವಿ ಜಿಲ್ಲೆಯ ನವಲಪ್ಪ ಹೆಗಡೆ ಎನ್ನುವ ಕುರಿಗಾಹಿಗೆ ಸೇರಿದ ಕುರಿಗಳಾಗಿದ್ದು, ನರೇಗಲ್‌ ಗ್ರಾಮದ ಜಮೀನೊಂದರಲ್ಲಿ 300 ಕುರಿಗಳ ಹಿಂಡಿನೊಂದಿಗೆ ಕುರಿ ಮೇಯಿಸುತ್ತಿದ್ದರು. ತಕ್ಷಣ ಎಚ್ಚೆತ್ತ ಕುರಿಗಾಹಿಯಿಂದ ಹೆಚ್ಚಿನ ಕುರಿಗಳು ಅಪಾಯದಿಂದ ಬಚಾವ್​ ಆಗಿದೆ. ಓರ್ವ ಕುರಿಗಾಹಿಗೆ ವಿದ್ಯುತ್ ಶಾಕ್, ಹೆಚ್ಚಿನ‌ ಹಾನಿ ಸಂಭವಿಸಿಲ್ಲ. ಈ ಘಟನೆ ಗಜೇಂದ್ರಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..
ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಲೈವ್; ಇಂದಾದರೂ ದಾಸನಿಗೆ ಸಿಗುತ್ತಾ ಬೇಲ್?
ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಲೈವ್; ಇಂದಾದರೂ ದಾಸನಿಗೆ ಸಿಗುತ್ತಾ ಬೇಲ್?
ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿರೋದು ಶಿವಕುಮಾರ್​​ಗೆ ಗೊತ್ತಿಲ್ಲ
ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿರೋದು ಶಿವಕುಮಾರ್​​ಗೆ ಗೊತ್ತಿಲ್ಲ
ಮೈಸೂರು ಕಾರ್ಯಕರ್ತನ ಮನೆಯಲ್ಲಿ ಸ್ಪೆಷಲ್ ದೋಸೆ ಸವಿದ ಸತೀಶ್ ಜಾರಕಿಹೊಳಿ!
ಮೈಸೂರು ಕಾರ್ಯಕರ್ತನ ಮನೆಯಲ್ಲಿ ಸ್ಪೆಷಲ್ ದೋಸೆ ಸವಿದ ಸತೀಶ್ ಜಾರಕಿಹೊಳಿ!
ಸಿಎಂ ಬದಲಾಯಿಸುವ ಸನ್ನಿವೇಶ ರಾಜ್ಯದಲ್ಲಿ ಸೃಷ್ಟಿಯಾಗಿಲ್ಲ: ಜಿ ಪರಮೇಶ್ವರ್
ಸಿಎಂ ಬದಲಾಯಿಸುವ ಸನ್ನಿವೇಶ ರಾಜ್ಯದಲ್ಲಿ ಸೃಷ್ಟಿಯಾಗಿಲ್ಲ: ಜಿ ಪರಮೇಶ್ವರ್
IND vs BAN: ಡೋಲು ಬಜಾನದೊಂದಿಗೆ ಟೀಮ್ ಇಂಡಿಯಾಗೆ ಭರ್ಜರಿ ಸ್ವಾಗತ
IND vs BAN: ಡೋಲು ಬಜಾನದೊಂದಿಗೆ ಟೀಮ್ ಇಂಡಿಯಾಗೆ ಭರ್ಜರಿ ಸ್ವಾಗತ
ಚಡ್ಡಿ ಗ್ಯಾಂಗ್ ಕಳ್ಳರ ಹಾವಳಿ ಪುನಃ ಶುರು, ಬೆಂಗಳೂರು ನಿವಾಸಿಗಳೇ ಎಚ್ಚರ!
ಚಡ್ಡಿ ಗ್ಯಾಂಗ್ ಕಳ್ಳರ ಹಾವಳಿ ಪುನಃ ಶುರು, ಬೆಂಗಳೂರು ನಿವಾಸಿಗಳೇ ಎಚ್ಚರ!
ಲೋಕಾಯುಕ್ತ ದಾಳಿ, ಹುಮ್ನಾಬಾದ್ ಸಾರಿಗೆ ತನಿಖಾ ಕಚೇರಿ ಸಿಬ್ಬಂದಿಗೆ ಶಾಕ್!
ಲೋಕಾಯುಕ್ತ ದಾಳಿ, ಹುಮ್ನಾಬಾದ್ ಸಾರಿಗೆ ತನಿಖಾ ಕಚೇರಿ ಸಿಬ್ಬಂದಿಗೆ ಶಾಕ್!
ಬಿಗ್ ಬಾಸ್​ನಲ್ಲಿ ದರ್ಶನ್ ವಿಚಾರ ಏಕೆ ಬರಲಿಲ್ಲ?
ಬಿಗ್ ಬಾಸ್​ನಲ್ಲಿ ದರ್ಶನ್ ವಿಚಾರ ಏಕೆ ಬರಲಿಲ್ಲ?
ಕ್ಯಾಪ್ಟನ್​ಗೆ ಲೈನ್ ಹಾಕೋಕೆ ಆರಂಭಿಸಿದ ಜಗದೀಶ್
ಕ್ಯಾಪ್ಟನ್​ಗೆ ಲೈನ್ ಹಾಕೋಕೆ ಆರಂಭಿಸಿದ ಜಗದೀಶ್