ರಾಜ್ಯದಲ್ಲಿ ಡಾಪ್ಲರ್​ ರಾಡಾರ್ ಸ್ಥಾಪನೆಗೆ ಕೇಂದ್ರ ಸರ್ಕಾರಕ್ಕೆ ಸಂಸದ ಈರಣ್ಣ ಕಡಾಡಿ ಪತ್ರ

ಕರ್ನಾಟಕವು ಕೃಷಿ-ಸಮೃದ್ಧ ರಾಜ್ಯವಾಗಿದ್ದು, ವೈವಿಧ್ಯಮಯ ಭೌಗೋಳಿಕ ವಲಯಗಳನ್ನು ಹೊಂದಿದೆ. ಇದು ಅನಿರೀಕ್ಷಿತ ಹವಾಮಾನ ಮಾದರಿಗಳಿಗೆ ಒಳಗಾಗುತ್ತದೆ. ದೇಶದಲ್ಲಿ ಎರಡನೇ ಅತಿ ಹೆಚ್ಚು ಮಳೆ ಬೀಳುವ ತಾಣವಾಗಿದ್ದರೂ, ನಮ್ಮ ರಾಜ್ಯದಲ್ಲಿ ಪ್ರಸ್ತುತ ನಿಖರವಾದ ಹವಾಮಾನ ಮೇಲ್ವಿಚಾರಣೆ ಮತ್ತು ಮುನ್ಸೂಚನೆಯನ್ನು ಖಾತ್ರಿಪಡಿಸುವ ನಿರ್ಣಾಯಕ ಸಾಧನ (ಡಾಪ್ಲರ್ ಹವಾಮಾನ ರಾಡಾರ್ -DWR) ಕೊರತೆಯಿದೆ.

ರಾಜ್ಯದಲ್ಲಿ ಡಾಪ್ಲರ್​ ರಾಡಾರ್ ಸ್ಥಾಪನೆಗೆ ಕೇಂದ್ರ ಸರ್ಕಾರಕ್ಕೆ ಸಂಸದ ಈರಣ್ಣ ಕಡಾಡಿ ಪತ್ರ
ಡಾಪ್ಲರ್​ ರಾಡಾರ್
Follow us
ವಿವೇಕ ಬಿರಾದಾರ
|

Updated on:Oct 09, 2023 | 10:06 AM

ಬೆಳಗಾವಿ ಅ.09: ಕರ್ನಾಟಕದಲ್ಲಿ ನಿಖರವಾದ ಹವಾಮಾನ ಮೇಲ್ವಿಚಾರಣೆ ಮತ್ತು ಮುನ್ಸೂಚನೆ ನೀಡುವ ಡಾಪ್ಲರ್ ಹವಾಮಾನ ರಾಡಾರ್ (DWR) ವ್ಯವಸ್ಥೆಯ ಅಗತ್ಯವನ್ನು ಮನಗಂಡು ಬೆಳಗಾವಿಯ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಈರಣ್ಣ ಕಡಾಡಿ (Iranna Kadadi) ಅವರು ಇತ್ತೀಚೆಗೆ ನವದೆಹಲಿಯಲ್ಲಿ ಕೇಂದ್ರ ಭೂ ವಿಜ್ಞಾನ ಸಚಿವ ಕಿರಣ್ ರಿಜಿಜು (Kiran Rijiju) ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಕರ್ನಾಟಕವು ಕೃಷಿ-ಸಮೃದ್ಧ ರಾಜ್ಯವಾಗಿದ್ದು, ವೈವಿಧ್ಯಮಯ ಭೌಗೋಳಿಕ ವಲಯಗಳನ್ನು ಹೊಂದಿದೆ. ಇದು ಅನಿರೀಕ್ಷಿತ ಹವಾಮಾನ ಮಾದರಿಗಳಿಗೆ ಒಳಗಾಗುತ್ತದೆ. ದೇಶದಲ್ಲಿ ಎರಡನೇ ಅತಿ ಹೆಚ್ಚು ಮಳೆ ಬೀಳುವ ತಾಣವಾಗಿದ್ದರೂ, ನಮ್ಮ ರಾಜ್ಯದಲ್ಲಿ ಪ್ರಸ್ತುತ ನಿಖರವಾದ ಹವಾಮಾನ ಮೇಲ್ವಿಚಾರಣೆ ಮತ್ತು ಮುನ್ಸೂಚನೆಯನ್ನು ಖಾತ್ರಿಪಡಿಸುವ ನಿರ್ಣಾಯಕ ಸಾಧನ (ಡಾಪ್ಲರ್ ಹವಾಮಾನ ರಾಡಾರ್ -DWR) ಕೊರತೆಯಿದೆ. ಪ್ರಸ್ತುತ, ಕರ್ನಾಟಕದಾದ್ಯಂತ ಒಂದೇ ಒಂದು ಡಿಡಬ್ಲ್ಯೂಆರ್ ವ್ಯವಸ್ಥೆ ಇಲ್ಲ ಎಂದು ಕೇಂದ್ರ ಸಚಿವರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಜಿ20- ಶೃಂಗಸಭೆ: ಹಸಿರು ಹವಾಮಾನ ನಿಧಿಗೆ 2 ಬಿಲಿಯನ್ ಡಾಲರ್ ಸಹಾಯ ಘೋಷಿಸಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್

ಕರ್ನಾಟಕಕ್ಕೆ ಹತ್ತಿರದ ಡಾಪ್ಲರ್ ಗೋವಾದಲ್ಲಿದೆ. ಸಕಾಲಿಕ ಹವಾಮಾನ ಮಾಹಿತಿಗಾಗಿ ನಾವು ನೆರೆಯ ರಾಜ್ಯದ ಮೇಲೆ ಹೆಚ್ಚು ಅವಲಂಬಿತರಾಗಿದ್ದೇವೆ. ಕುಂದಾಪುರ, ಬೆಳಗಾವಿ, ರಾಯಚೂರು ಮತ್ತು ಬೆಂಗಳೂರಿನಲ್ಲಿ ಡಾಪ್ಲರ್ ರೇಡಾರ್​ಗಳನ್ನು ಸ್ಥಾಪಸಿಬೇಕೆಂದು ಮನವಿ ಮಾಡಿದರು.

ಪ್ರಧಾನಿ ನರೇಂದ್ರ ಮೋದಿಯವರ ‘ಆತ್ಮ ನಿರ್ಭರ್ ಭಾರತ್’ ಉಪಕ್ರಮದ ಅಡಿಯಲ್ಲಿ ಭಾರತದಲ್ಲಿ ಡಾಪ್ಲರ್ ರೇಡಾರ್​​ಗಳನ್ನು ತಯಾರಿಸಲಾಗುತ್ತಿದೆ. ಮತ್ತು ರಿಜಿಜು ಅವರು ಪತ್ರಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ಈರಣ್ಣ ಕಡಾಡಿ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:05 am, Mon, 9 October 23

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ