AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಹೃದಯ ಭಾಗವಾದ ಬಾಪಟ್​ ಗಲ್ಲಿಯಲ್ಲಿ ಮಲ್ಟಿ ಲೆವಲ್​ ಕಾರ್​ ಪಾರ್ಕಿಂಗ್​ ವ್ಯವಸ್ಥೆ

ಮಹಾನಗರ ಪಾಲಿಕೆ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ಈ ಮಲ್ಟಿ ಲೇವಲ್​ ಪಾರ್ಕಿಂಗ್​ ನಿರ್ಮಾಣ ಮಾಡಲಾಗುತ್ತಿದ್ದು, ಇದು ಆರು ಮಹಡಿಗಳನ್ನು ಹೊಂದಿರಲಿದೆ. ಈ ಕಟ್ಟಡದಲ್ಲಿ 120 ಕಾರುಗಳನ್ನು ಪಾರ್ಕ್​ ಮಾಡಬಹುದಾಗಿದೆ.

ಬೆಳಗಾವಿ ಹೃದಯ ಭಾಗವಾದ ಬಾಪಟ್​ ಗಲ್ಲಿಯಲ್ಲಿ ಮಲ್ಟಿ ಲೆವಲ್​ ಕಾರ್​ ಪಾರ್ಕಿಂಗ್​ ವ್ಯವಸ್ಥೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 12, 2023 | 9:20 AM

Share

ಬೆಳಗಾವಿ ಸೆ.12: ಚೆನ್ನಮ್ಮನ ನಾಡು ಬೆಳಗಾವಿ (Belagavi) ಮಹಾನಗರದಲ್ಲಿ ಪಾರ್ಕಿಂಗ್​ ಸಮಸ್ಯೆ ಹೆಚ್ಚಾಗುತ್ತಿದೆ. ಈ ಸಮಸ್ಯೆ ನಿವಾರಣೆಗೆ ನಗರದಲ್ಲಿನ ಹೃದಯ ಭಾಗವಾದ ಬಾಪಟ್​ ಗಲ್ಲಿಯಲ್ಲಿ ಮಲ್ಟಿ ಲೆವಲ್​ ಕಾರ್​ ಪಾರ್ಕಿಂಗ್ (Multi level Car Parking) ಕಟ್ಟಡ ನಿರ್ಮಾಣ ಕಾಮಗಾರಿಗೆ ಸೋಮವಾರ ಬೆಳಗಾವಿ ಕ್ಷೇತ್ರದ ಶಾಸಕ ಆಸಿಫ್ (ರಾಜು) ಸೇಟ್ (Asif Raju Sait) ಅವರು ಶಂಕು ಸ್ಥಾಪನೆ ನೆರವೇರಿಸಿದರು.

ಮಹಾನಗರ ಪಾಲಿಕೆ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ಈ ಮಲ್ಟಿ ಲೇವಲ್​ ಪಾರ್ಕಿಂಗ್​ ನಿರ್ಮಾಣ ಮಾಡಲಾಗುತ್ತಿದ್ದು, ಇದು ಆರು ಮಹಡಿಗಳನ್ನು ಹೊಂದಿರಲಿದೆ. ಈ ಕಟ್ಟಡದಲ್ಲಿ 120 ಕಾರುಗಳನ್ನು ಪಾರ್ಕ್​ ಮಾಡಬಹುದಾಗಿದೆ. ಬಾಪಟ್​​ ಗಲ್ಲಿಯಲ್ಲಿ ಈ ಹಿಂದೆ ಹಲವು ಬಾರಿ ಮಲ್ಟಿ ಲೇವಲ್​ ಪಾರ್ಕಿಂಗ್​ ಕಟ್ಟಡ ನಿರ್ಮಿಸಲು ಭೂಮಿ ಪೂಜೆ ನೆರವೇರಿಸಲಾಗಿತ್ತು. ಇದೀಗ ಶಂಕುಸ್ಥಾಪನೆ ನೆರವೇರಿದೆ.

ಇದನ್ನೂ ಓದಿ: IndiGo flight: ಬೆಳಗಾವಿ, ದೆಹಲಿ ನಡುವೆ ಅಕ್ಟೋಬರ್ 5ರಿಂದ ಆರಂಭವಾಗಲಿದೆ ಇಂಡಿಗೋ ವಿಮಾನ ಹಾರಾಟ

6.5 ಕೋಟಿ ರೂ. ವೆಚ್ಚದಲ್ಲಿ ಐದು ಅಂತಸ್ತಿನ ಕಟ್ಟಡವನ್ನು ಪಿಪಿಪಿ ಮತ್ತು ಬಿವಿಜಿ ಕಂಪನಿಯ ಸಹಭಾಗಿತ್ವದಲ್ಲಿ ಈ ಕಟ್ಟಡ ನಿರ್ಮಿಸಲಾಗುತ್ತಿದೆ. ಒಂದು ಅಂತಸ್ತಿನಲ್ಲಿ 30 ಕಾರುಗಳನ್ನು ಪಾರ್ಕ್ ಮಾಡಬಹುದಾಗಿದೆ. ಐದು ಅಂತಸ್ತುಗಳಲ್ಲಿ ಒಟ್ಟು 120 ಕಾರುಗಳನ್ನು ಪಾರ್ಕಿಂಗ್ ಮಾಡಬಹುದು. 2006 ರಲ್ಲಿ ರಾಜ್ಯ ಸರ್ಕಾರದ ನೂರು ಕೋಟಿ ರೂ. ವಿಶೇಷ ಅನುದಾನದಲ್ಲಿ ಇದನ್ನು ನಿರ್ಮಿಸಲು ಟೆಂಡರ್ ಕರೆಯಲಾಗಿತ್ತು. ಆದರೆ ಜಿಎಸ್​ಟಿ ಜಾರಿಯಾಗಿದ್ದರಿಂದ ಗುತ್ತಿಗೆದಾರ ಕಾಮಗಾರಿ ಆರಂಭಿಸಲು ಹಿಂದೇಟು ಹಾಕಿದ್ದನು ಹೀಗಾಗಿ ಕಾಮಗಾರಿ ನೆನೆಗುದಿಗೆ ಬಿದ್ದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!