ಬೆಳಗಾವಿ: ಗೋಕಾಕ್​ ಪಟ್ಟಣದಲ್ಲಿ ಯುವಕನ ಬರ್ಬರ ಹತ್ಯೆ, ಆರೋಪಿಗಳ ಮನೆ ಮೇಲೆ ಕಲ್ಲು ತೂರಾಟ

ಪೆಟ್ರೋಲ್ ಬಂಕ್​ನಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ನಡೆದಿದೆ. ಅದೇ ಕಾಲೋನಿಯ ಯುವಕರಿಂದ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿ ಮನೆಗಳ ಮೇಲೆ ಮೃತನ ಕುಟುಂಬಸ್ಥರು ಕಲ್ಲು ತೂರಿ ಆಕ್ರೋಶ ಹೊರಹಾಕಿದ್ದಾರೆ.

ಬೆಳಗಾವಿ: ಗೋಕಾಕ್​ ಪಟ್ಟಣದಲ್ಲಿ ಯುವಕನ ಬರ್ಬರ ಹತ್ಯೆ, ಆರೋಪಿಗಳ ಮನೆ ಮೇಲೆ ಕಲ್ಲು ತೂರಾಟ
ಬೆಳಗಾವಿ ಜಿಲ್ಲೆಯ ಗೋಕಾಕ್​ ಪಟ್ಟಣದಲ್ಲಿ ಯುವಕನ ಬರ್ಬರ ಹತ್ಯೆ
Follow us
TV9 Web
| Updated By: Rakesh Nayak Manchi

Updated on:Nov 12, 2023 | 11:01 PM

ಬೆಳಗಾವಿ, ನ.12: ಪೆಟ್ರೋಲ್ ಬಂಕ್​ನಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ (Murder) ಮಾಡಿದ ಘಟನೆ ಬೆಳಗಾವಿ (Belagavi) ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ನಡೆದಿದೆ. ಅದೇ ಕಾಲೋನಿಯ ಯುವಕರಿಂದ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿ ಮನೆಗಳ ಮೇಲೆ ಮೃತನ ಕುಟುಂಬಸ್ಥರು ಕಲ್ಲು ತೂರಿ ಆಕ್ರೋಶ ಹೊರಹಾಕಿದ್ದಾರೆ.

ಶಾನೂರ್ ಅಲಿಯಾಸ್ ಸಂತೋಷ ಪೂಜಾರಿ(25) ಹತ್ಯೆಯಾದ ಯುವಕ. ಐದಾರು ಮಂದಿ ದುಷ್ಕರ್ಮಿಗಳು ಶಾನೂರ್ ಮೇಲೆ ದಾಳಿ ನಡೆಸಿ ಹತ್ಯೆಗೈದಿದ್ದಾರೆ. ಇದರಿಂದ ಕೆರಳಿದ ಶಾನೂರ್ ಕುಟುಂಬಸ್ಥರು, ಆರೋಪಿಗಳ ಮನೆ ಮೇಲೆ ಕಲ್ಲು ತೂರಿದ್ದು, ಸ್ಥಳದಲ್ಲಿ ಬಿಗುವಿಣ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ: ದೊಡ್ಡಬಳ್ಳಾಪುರ: ಫೋಟೋಶೂಟ್ ಮಾಡುತ್ತಿದ್ದ ಯುವಕನನ್ನು ಕೊಲೆ ಮಾಡಿದ ದುಷ್ಕರ್ಮಿಗಳು

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಗೋಕಾಕ್ ಶಹರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದು, ಸ್ಥಳದಲ್ಲಿ ಮೂರು ಡಿಆರ್​ ತುಕಡಿ, ನಾಲ್ಕು ಮಂದಿ ಸಿಪಿಐ ನೇತೃತ್ವದಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:00 pm, Sun, 12 November 23