ಹುಲಿ ಉಗುರು ವಿವಾದ: ನನ್ನ ಪುತ್ರ ಮೃಣಾಲ್ ಹೆಬ್ಬಾಳ್ಕರ್​ ಧರಿಸಿರುವುದು ​​ಪ್ಲಾಸ್ಟಿಕ್ ಹುಲಿ ಉಗುರು; ಲಕ್ಷ್ಮಿ ಹೆಬ್ಬಾಳ್ಕರ್​

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ, ಕಾಂಗ್ರೆಸ್ ಯುವ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ಹುಲಿ ಉಗುರಿನ ಪೆಂಡೆಂಟ್​ ಧರಿಸಿರುವ​ ಫೋಟೋ ವೈರಲ್​​ ಆಗಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯ ಕುವೆಂಪು ನಗರದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನೆಗೆ ಅರಣ್ಯಾಧಿಕಾರಿಗಳು ತೆರಳಿದ್ದು, ಪರಿಶೀಲನೆ ನಡೆಸಿದ್ದಾರೆ.

ಹುಲಿ ಉಗುರು ವಿವಾದ: ನನ್ನ ಪುತ್ರ ಮೃಣಾಲ್ ಹೆಬ್ಬಾಳ್ಕರ್​ ಧರಿಸಿರುವುದು ​​ಪ್ಲಾಸ್ಟಿಕ್ ಹುಲಿ ಉಗುರು; ಲಕ್ಷ್ಮಿ ಹೆಬ್ಬಾಳ್ಕರ್​
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​
Follow us
Sahadev Mane
| Updated By: ವಿವೇಕ ಬಿರಾದಾರ

Updated on:Oct 27, 2023 | 11:39 AM

ಬೆಳಗಾವಿ ಅ.27: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar)​​ ಪುತ್ರ, ಕಾಂಗ್ರೆಸ್ (Congress) ಯುವ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ಹುಲಿ ಉಗುರಿನ ಪೆಂಡೆಂಟ್ (Tiger Claw Locket Row)​ ಧರಿಸಿರುವ​ ಫೋಟೋ ವೈರಲ್​​ ಆಗಿದೆ. ಈ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಮಾತನಾಡಿ ನನ್ನ ಪುತ್ರ ಮೃಣಾಲ್ ಹೆಬ್ಬಾಳ್ಕರ್​ ಧರಿಸಿರುವುದು ​​ಪ್ಲಾಸ್ಟಿಕ್ ಪೆಂಡೆಂಟ್. ಮದುವೆ ಸಮಯದಲ್ಲಿ ಯಾರೋ ನನ್ನ ಪುತ್ರನಿಗೆ ಗಿಫ್ಟ್​​ ಕೊಟ್ಟಿದ್ದರು. ಅದು ಒರಿಜಿನಲ್ ಪೆಂಡೆಂಟ್ ಅಲ್ಲ ಎಂದು ಹೇಳಿದರು.

ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ನಾನು ಸಸ್ಯಾಹಾರಿ, ಹುಲಿ, ಜಿಂಕೆ, ಕೋಳಿ ಬಲಿಯನ್ನು ಇಷ್ಟಪಡಲ್ಲ. ನಮ್ಮ ಸಂಬಂಧಿಕರು ಬಂದಿದ್ದಾರೆ ಅವರನ್ನು ಬೀಳ್ಕೊಟ್ಟು ಬರುತ್ತೇನೆ. ಬಳಿಕ ಅಧಿಕಾರಿಗಳು ಕೇಳುವ ಎಲ್ಲಾ ಪ್ರಶ್ನೆಗೂ ಉತ್ತರ ಕೊಡುತ್ತೇನೆ ಎಂದು ಹೋರಟರು.

ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ ತೆರಳಿದ ಅರಣ್ಯಾಧಿಕಾರಿಗಳು

ಬೆಳಗಾವಿಯ ಕುವೆಂಪು ನಗರದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನೆಗೆ ಅರಣ್ಯಾಧಿಕಾರಿಗಳು ತೆರಳಿದ್ದು, ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿ ಡಿಸಿಎಫ್ ಶಂಕರ್ ಕಲ್ಲೋಳಕರ್ ನೇತೃತ್ವದಲ್ಲಿ ಮೂರು ಜನ ಎಸಿಎಫ್, ಆರ್‌ಎಫ್‌ಒ ಮೂರು ಜನ, ಹದಿನೈದು ಜನ ಸಿಬ್ಬಂದಿ, ಓರ್ವ ವೆಟನರಿ ವೈದ್ಯ ಸೇರಿದಂತೆ 24 ಜನರ ತಂಡ ಪರಿಶೀಲನೆ ನಡೆಸಿದೆ.

ಇದನ್ನೂ ಓದಿ: ಹುಲಿ ಉಗುರು ವಿವಾದ: ಈಗ ಅರಣ್ಯಾಧಿಕಾರಿ ಸರದಿ, ಆರ್​ಎಫ್​ಒ ವಿರುದ್ಧ ಕೇಳಿಬಂತು ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಆರೋಪ

ಪೆಂಡೆಂಟ್​ ವಶಕ್ಕೆ ಪಡೆದು ಎಫ್‌ಎಸ್‌ಎಲ್​ಗೆ ಕಳುಹಿಸುತ್ತೇವೆ. ಬೆಂಗಳೂರು ಇಲ್ಲವೇ ಹೈದರಾಬಾದ್ ಗೆ ಕಳುಹಿಸುತ್ತೇವೆ. ಒರಿಜಿನಲ್​ ಅಥವಾ ನಕಲಿನಾ ಅಂತಾ ತಿಳಿದ ಬಳಿಕ ಹೇಳುತ್ತೇವೆ.  ಪೆಂಡೆಂಟ್ ಸೈಜ್ ಎಷ್ಟಿದೆ ಅನ್ನೋದನ್ನ ನೋಡಿದ್ದೇವೆ. ಮೃಣಾಲ್‌ ಅವರ ಕಡೆಯಿಂದ ಹೇಳಿಕೆಯನ್ನ ಪಡೆಯುತ್ತೇವೆ. ಕಾನೂನಿನಡಿಯಲ್ಲಿ ಎಲ್ಲವನ್ನೂ ಮಾಡುತ್ತೇವೆ ಎಂದು ಡಿಸಿಎಫ್ ಶಂಕರ್ ಕಲ್ಲೋಳಕರ್ ಹೇಳಿದ್ದಾರೆ.

ಹುಲಿ ಉಗುರಿನ ಲಾಕೆಟ್ ಧರಿಸಿದ ಹೆಬ್ಬಾಳ್ಕರ್ ಅಳಿಯನ ಫೋಟೋ ವೈರಲ್​​

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯನ ಕೊರಳಲ್ಲೂ ಹುಲಿ ಉಗುರಿನ ಲಾಕೆಟ್ ಧರಿಸಿರುವ ಫೋಟೋ ಕೂಡ ವೈರಲ್ ಆಗುತ್ತಿದೆ. ಲಕ್ಷ್ಮೀ ಹೆಬ್ಬಾಳಕರ್ ಅಕ್ಕನ ಮಗಳನ್ನು ಮದುವೆಯಾಗಿರುವ ರಜತ್ ಉಳ್ಳಾಗಡ್ಡಿಮಠ ಧರಿಸಿರುವ ಲಾಕೆಟ್ ಬಗ್ಗೆ ಚರ್ಚೆ ಶುರುವಾಗಿತ್ತು. ಮದುವೆ ಸಮಯದಲ್ಲಿ ಫೋಟೋ ಶೂಟ್​ನಲ್ಲಿ ಹುಲಿ ಉಗುರು ಮಾದರಿ ಚೈನ್ ಧರಿಸಿದ್ದ ರಜತ್ ಫೋಟೋ ಈಗ ವೈರಲ್ ಆಗಿತ್ತು.

ವಿಜುಗೌಡ ಪಾಟೀಲ್ ಪುತ್ರನಿಗೆ ಸಂಕಷ್ಟ

ಇಂದು ವಿಜಯಪುರದಲ್ಲಿ ಪರಿಶೀಲನೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್ ಪುತ್ರ ಶಾಶ್ವತ ಗೌಡ ಪಾಟೀಲ್ ಧರಿಸುತ್ತಿದ್ದ ಹುಲಿ ಉಗುರಿನ ಲಾಕೆಟ್​ನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದರು. ಸದ್ಯ ಅದನ್ನು ಪರೀಕ್ಷೆಗೆ ಕಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:17 am, Fri, 27 October 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ