AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಯುವ ಕಾರ್ಯಕರ್ತೆ ನವ್ಯಶ್ರೀ ದೂರು; ಅಧಿಕಾರಿ ರಾಜಕುಮಾರ ಟಾಕಳೆ ವಿರುದ್ಧ ಎಫ್​​ಐಆರ್​ ದಾಖಲು

ಕಾಂಗ್ರೆಸ್‌ನ ಸ್ಥಳೀಯ ನಾಯಕಿ ನವ್ಯಾಶ್ರೀ ದೂರಿನ ಮೇರೆಗೆ  ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ ಟಾಕಳೆ ವಿರುದ್ಧ ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ.

ಕಾಂಗ್ರೆಸ್ ಯುವ ಕಾರ್ಯಕರ್ತೆ ನವ್ಯಶ್ರೀ ದೂರು; ಅಧಿಕಾರಿ ರಾಜಕುಮಾರ ಟಾಕಳೆ ವಿರುದ್ಧ ಎಫ್​​ಐಆರ್​ ದಾಖಲು
ಸಾಂದರ್ಭಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:Jul 23, 2022 | 10:25 PM

Share

ಬೆಳಗಾವಿ: ಕಾಂಗ್ರೆಸ್‌ನ (Congress) ಸ್ಥಳೀಯ ನಾಯಕಿ ನವ್ಯಾಶ್ರೀ ದೂರಿನ ಮೇರೆಗೆ  ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ ಟಾಕಳೆ ವಿರುದ್ಧ ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್‌ 376, 366, 312, 420, 354, 504, 506, 509 ಐಟಿ ಆಕ್ಟ್‌ 66E, 67Aರಡಿ ರಾಜಕುಮಾರ ಟಾಕಳೆ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಹಿಂದೆ ನವ್ಯಶ್ರೀ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ವಿಚಾರವಾಗಿ ನವ್ಯಶ್ರೀಯಿಂದ ಸ್ಪೋಟಕ ಆಡಿಯೋ ರಿಲೀಸ್ ಮಾಡಲಾಗಿತ್ತು.

ರಾಜಕುಮಾರ, ನವ್ಯಶ್ರೀ ಮತ್ತು ಆಕೆಯ ಆಪ್ತ ತಿಲಕ್ ಜೊತೆಯಾಗಿ ಮಾತನಾಡಿರುವ ಆಡಿಯೋ ರಿಲೀಸ್ ಮಾಡಲಾಗಿತ್ತು. ಆಡಿಯೋದಲ್ಲಿ ನಾನು ಒಪ್ಪಿಕೊಂಡಿದ್ದೇನೆ, ಅವಳು ಒಪ್ಪಿಕೊಂಡಿದ್ದಾಳೆ ನನ್ನ ಹೆಂಡತಿಯನ್ನೂ ಒಪ್ಪಿಸುತ್ತೇನೆ. ನನ್ನ ಹೆಂಡತಿ ಮಕ್ಕಳ ಜತೆಗೆ ಮನೆಯಲ್ಲಿ ಇಟ್ಟುಕೊಳುತ್ತೇನೆ. ಯಾವುದಕ್ಕೂ ತಲೆ ಕೆಡಸಿಕೊಳ್ಳಬೇಡಿ ಅಂತಾ ರಾಜಕುಮಾರ ಹೇಳಿರುವ ಸ್ಪೋಟಕ ಆಡಿಯೋವನ್ನು ನವ್ಯಶ್ರೀ ರಿಲೀಸ್ ಮಾಡಿದ್ದರು.

ನನ್ನ ಮಗಳಿಗೂ ಹೇಳಿದ್ದೇನೆ ಎನೂ ತೊಂದರೆ ಇಲ್ಲಾ. ನಿಮ್ಮ ಮಗಳು ಪಿಯುಸಿ ಓದುತ್ತಿದ್ದಾಳೆ ಅಂತಾ ತಿಲಕ್ ರಾಜಕುಮಾರ ಜೊತೆಗೆ ಮಾಡಿರುವ ಸಂಭಾಷಣೆ ಮಾಡಲಾಗಿದೆ. ನವ್ಯಶ್ರೀಯನ್ನು ಮಗಳು ಅಂದುಕೊಂಡಿದ್ದೇನೆ. ಅವಳ ತಂದೆ ತಾಯಿ ಯಾವುದೋ ಒಂದು ನರಕಕ್ಕೆ ಬಿಟ್ಟು ಹೋಗಿದ್ದರೂ. ಅವಳನ್ನು ಸೇಪ್ ಮಾಡಲು ನಮ್ಮ ಪ್ರಾಣಾನೇ ಹೊರಟು ಹೋಗಿತ್ತು. ಅವರು ನೀನು ಕೆಟ್ಟವನೂ ಅಂತಾ ಹೇಳುತ್ತಿಲ್ಲಾ ಅಂತಾ ಸಂಭಾಷಣೆಯ ಮಧ್ಯ  ನವ್ಯಶ್ರೀ ಬರುತ್ತಾಳೆ. ಈ ವೇಳೆ ನೀನು ಎನೇನೂ ಮಾಡಿದೀಯಾ ಅನ್ನೋದು ಎಲ್ಲವೂ ಗೊತ್ತಿದೆ ಮಾತನಾಡಬೇಡಾ ಅಂತಾ ರಾಜಕುಮಾರ ನವ್ಯಶ್ರೀಗೆ ಹೇಳುತ್ತಾರೆ.

ನವ್ಯಶ್ರೀ ಮತ್ತು ಆಕೆಯ ಆಪ್ತ ತಿಲಕ್ ಇಬ್ಬರ ಮೇಲೆ ಸೆಕ್ಷನ್ 384, 448, 504, 506, 34ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿತ್ತು. 384 – ಸುಲಿಗೆ, 448 – ಮನೆಗೆ ಅತಿಕ್ರಮ ಪ್ರವೇಶ, 504 – ಶಾಂತಿಭಂಗಗೊಳಿಸುವ ಉದ್ದೇಶದ ನಿಂದನೆ, 506 – ಬೆದರಿಕೆ, 34 – ಕ್ರಿಮಿನಲ್ ಉದ್ದೇಶ, ಸಕ್ಷೆನ್ ಅಡಿಯಲ್ಲಿ ಕೇಸ್ ದಾಖಲಾಗಿತ್ತು. ತನಗೆ ತನ್ನ ಕುಟುಂಬಕ್ಕೆ ನವ್ಯಶ್ರೀಯಿಂದ ರಕ್ಷಣೆ ನೀಡುವಂತೆ ಪೊಲೀಸರಲ್ಲಿ ಮನವಿ ಮಾಡಿದ್ದು, ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ  ದೂರು ದಾಖಲಾಗಿತ್ತು.

ರಾಜಕುಮಾರ್ ಟಾಕಳೆ ನನ್ನ ಗಂಡ: ನವ್ಯಶ್ರೀ

ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಖಾಸಗಿ ವಿಡಿಯೋ ಹಾಕಿದ್ದಾರೆ. ಈ ಬಗ್ಗೆ ಬೆಳಗಾವಿ ಪೊಲೀಸ್ ಆಯುಕ್ತರಿಗೆ ದೂರು ಕೊಡುತ್ತೇನೆ ಎಂದು ಬೆಳಗಾವಿಯಲ್ಲಿ ಯುವ ಕಾಂಗ್ರೆಸ್ ನಾಯಕಿ ನವ್ಯಶ್ರೀ ಹೇಳಿಕೆ ನೀಡಿದ್ದರು. ಕಳೆದ 15 ದಿನಗಳಿಂದ ನಾನು ಭಾರತದಲ್ಲಿ ಇರಲಿಲ್ಲ. ರಾಜಕುಮಾರ್ ಟಾಕಳೆ ನನ್ನ ಗಂಡ. ರಾಜಕುಮಾರ್ ಟಾಕಳೆರನ್ನ ನಾನು ಮದುವೆಯಾಗಿದ್ದೇನೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಎಲ್ಲಾ ದಾಖಲೆಗಳನ್ನ ಕೊಡ್ತೀನಿ. ಇಡೀ ರಾಜ್ಯದಲ್ಲಿ ನನ್ನ ಬಗ್ಗೆ ಯಾವುದೇ ದೂರು ಇಲ್ಲ. ರಾಜಕಾರಣದಲ್ಲಿ ಮುಂದೆ ಬರ್ತಿನಿ ಎಂದು ಈ ರೀತಿ ಮಾಡಿದ್ದರು ಎಂದು ನಗರದಲ್ಲಿ ಯುವ ಕಾಂಗ್ರೆಸ್ ನಾಯಕಿ ನವ್ಯಶ್ರೀ ಹೇಳಿದ್ದರು.

Published On - 10:25 pm, Sat, 23 July 22

Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ