Belagavi News: ಕಾಂಗ್ರೆಸ್ ಯುವ ಕಾರ್ಯಕರ್ತೆ ನವ್ಯಶ್ರೀ ವಿರುದ್ಧ ಕಿರುಕುಳ ಆರೋಪ​: ಸ್ಪೋಟಕ ಆಡಿಯೋ ರಿಲೀಸ್

| Updated By: ಗಂಗಾಧರ​ ಬ. ಸಾಬೋಜಿ

Updated on: Jul 19, 2022 | 3:27 PM

ಕಾಂಗ್ರೆಸ್ ಯುವ ಕಾರ್ಯಕರ್ತೆ ನವ್ಯಶ್ರೀ ವಿರುದ್ಧ ಕೇಸ್ ದಾಖಲಾಗಿರುವ ವಿಚಾರವಾಗಿ ನವ್ಯಶ್ರೀಯಿಂದ ಸ್ಪೋಟಕ ಆಡಿಯೋ ರಿಲೀಸ್ ಮಾಡಲಾಗಿದೆ.

Belagavi News: ಕಾಂಗ್ರೆಸ್ ಯುವ ಕಾರ್ಯಕರ್ತೆ ನವ್ಯಶ್ರೀ ವಿರುದ್ಧ ಕಿರುಕುಳ ಆರೋಪ​: ಸ್ಪೋಟಕ ಆಡಿಯೋ ರಿಲೀಸ್
ಪ್ರಾತಿನಿಧಿಕ ಚಿತ್ರ
Follow us on

ಬೆಳಗಾವಿ: ಕಾಂಗ್ರೆಸ್ ಯುವ ಕಾರ್ಯಕರ್ತೆ ನವ್ಯಶ್ರೀ ವಿರುದ್ಧ ಕೇಸ್ ದಾಖಲಾಗಿದ್ದು, ಈ ವಿಚಾರವಾಗಿ ನವ್ಯಶ್ರೀಯಿಂದ ಸ್ಪೋಟಕ ಆಡಿಯೋ ರಿಲೀಸ್ ಮಾಡಲಾಗಿದೆ. ರಾಜಕುಮಾರ, ನವ್ಯಶ್ರೀ ಮತ್ತು ಆಕೆಯ ಆಪ್ತ ತಿಲಕ್ ಜೊತೆಯಾಗಿ ಮಾತನಾಡಿರುವ ಆಡಿಯೋ ರಿಲೀಸ್ ಮಾಡಲಾಗಿದೆ. ನಾನು ಒಪ್ಪಿಕೊಂಡಿದ್ದೇನೆ, ಅವಳು ಒಪ್ಪಿಕೊಂಡಿದ್ದಾಳೆ ನನ್ನ ಹೆಂಡತಿಯನ್ನೂ ಒಪ್ಪಿಸುತ್ತೇನೆ. ನನ್ನ ಹೆಂಡತಿ ಮಕ್ಕಳ ಜತೆಗೆ ಮನೆಯಲ್ಲಿ ಇಟ್ಟುಕೊಳುತ್ತೇನೆ. ಯಾವುದಕ್ಕೂ ತಲೆ ಕೆಡಸಿಕೊಳ್ಳಬೇಡಿ ಅಂತಾ ರಾಜಕುಮಾರ ಹೇಳಿರುವ ಸ್ಪೋಟಕ ಆಡಿಯೋವನ್ನು ನವ್ಯಶ್ರೀ ರಿಲೀಸ್ ಮಾಡಿದ್ದಾರೆ. ನನ್ನ ಮಗಳಿಗೂ ಹೇಳಿದ್ದೇನೆ ಎನೂ ತೊಂದರೆ ಇಲ್ಲಾ. ನಿಮ್ಮ ಮಗಳು ಪಿಯುಸಿ ಓದುತ್ತಿದ್ದಾಳೆ ಅಂತಾ ತಿಲಕ್ ರಾಜಕುಮಾರ ಜತೆಗೆ ಮಾಡಿರುವ ಸಂಭಾಷಣೆ ಮಾಡಲಾಗಿದೆ. ನವ್ಯಶ್ರೀಯನ್ನ ಮಗಳು ಅಂದುಕೊಂಡಿದ್ದೇನೆ. ಅವಳ ತಂದೆ ತಾಯಿ ಯಾವುದೋ ಒಂದು ನರಕಕ್ಕೆ ಬಿಟ್ಟು ಹೋಗಿದ್ರೂ. ಅವಳನ್ನ ಸೇಪ್ ಮಾಡಲು ನಮ್ಮ ಪ್ರಾಣಾನೇ ಹೊರಟು ಹೋಗಿತ್ತು. ಅವರು ನೀನು ಕೆಟ್ಟವನೂ ಅಂತಾ ಹೇಳುತ್ತಿಲ್ಲಾ ಅಂತಾ ಸಂಭಾಷಣೆಯ ಮಧ್ಯ  ನವ್ಯಶ್ರೀ ಬರುತ್ತಾಳೆ. ಈ ವೇಳೆ ನೀನು ಎನೇನೂ ಮಾಡಿದೀಯಾ ಅನ್ನೋದು ಎಲ್ಲವೂ ಗೊತ್ತಿದೆ ಮಾತನಾಡಬೇಡಾ ಅಂತಾ ರಾಜಕುಮಾರ ನವ್ಯಶ್ರೀಗೆ ಹೇಳುತ್ತಾರೆ.

ಇದನ್ನೂ ಓದಿ: Belagavi News: ಖಾಸಗಿ ವಿಡಿಯೋ ತೋರಿಸಿ ಕಿರುಕುಳ ಪ್ರಕರಣ, ಕಾಂಗ್ರೆಸ್​ ಯುವ ನಾಯಕಿ ನವ್ಯಶ್ರೀ ವಿರುದ್ಧ ದೂರು

ಸದ್ಯ ನವ್ಯಶ್ರೀ ಮತ್ತು ಆಕೆಯ ಆಪ್ತ ತಿಲಕ್ ಇಬ್ಬರ ಮೇಲೆ ಸೆಕ್ಷನ್ 384, 448, 504, 506, 34ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ. 384 – ಸುಲಿಗೆ, 448 – ಮನೆಗೆ ಅತಿಕ್ರಮ ಪ್ರವೇಶ, 504 – ಶಾಂತಿಭಂಗಗೊಳಿಸುವ ಉದ್ದೇಶದ ನಿಂದನೆ, 506 – ಬೆದರಿಕೆ, 34 – ಕ್ರಿಮಿನಲ್ ಉದ್ದೇಶ, ಸಕ್ಷೆನ್ ಅಡಿಯಲ್ಲಿ ಕೇಸ್ ದಾಖಲಾಗಿದೆ. ತನ್ನಗೆ ತನ್ನ ಕುಟುಂಬಕ್ಕೆ ನವ್ಯಶ್ರೀಯಿಂದ ರಕ್ಷಣೆ ನೀಡುವಂತೆ ಪೊಲೀಸರಲ್ಲಿ ಮನವಿ ಮಾಡಿದ್ದು, ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ತಡರಾತ್ರಿ ದೂರು ದಾಖಲಾಗಿದೆ.

ರಾಜಕುಮಾರ್ ಟಾಕಳೆ ನನ್ನ ಗಂಡ: ನವ್ಯಶ್ರೀ

ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಖಾಸಗಿ ವಿಡಿಯೋ ಹಾಕಿದ್ದಾರೆ. ಈ ಬಗ್ಗೆ ಬೆಳಗಾವಿ ಪೊಲೀಸ್ ಆಯುಕ್ತರಿಗೆ ದೂರು ಕೊಡುತ್ತೇನೆ ಎಂದು ಬೆಳಗಾವಿಯಲ್ಲಿ ಯುವ ಕಾಂಗ್ರೆಸ್ ನಾಯಕಿ ನವ್ಯಶ್ರೀ ಹೇಳಿಕೆ ನೀಡಿದರು. ಕಳೆದ 15 ದಿನಗಳಿಂದ ನಾನು ಭಾರತದಲ್ಲಿ ಇರಲಿಲ್ಲ. ರಾಜಕುಮಾರ್ ಟಾಕಳೆ ನನ್ನ ಗಂಡ. ರಾಜಕುಮಾರ್ ಟಾಕಳೆರನ್ನ ನಾನು ಮದುವೆಯಾಗಿದ್ದೇನೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಎಲ್ಲಾ ದಾಖಲೆಗಳನ್ನ ಕೊಡ್ತೀನಿ. ಇಡೀ ರಾಜ್ಯದಲ್ಲಿ ನನ್ನ ಬಗ್ಗೆ ಯಾವುದೇ ದೂರು ಇಲ್ಲ. ರಾಜಕಾರಣದಲ್ಲಿ ಮುಂದೆ ಬರ್ತಿನಿ ಎಂದು ಈ ರೀತಿ ಮಾಡಿದ್ದಾರೆ ಎಂದು ನಗರದಲ್ಲಿ ಯುವ ಕಾಂಗ್ರೆಸ್ ನಾಯಕಿ ನವ್ಯಶ್ರೀ ಹೇಳಿದರು.

Published On - 3:11 pm, Tue, 19 July 22