ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ; ಬೆಳಗಾವಿ ಸುವರ್ಣಸೌಧಕ್ಕೆ ನುಗ್ಗಲು ಯತ್ನಿಸಿದ ಧರಣಿ ನಿರತರು
ವೈದ್ಯಕೀಯ ಮಹಾವಿದ್ಯಾಲಯಕ್ಕೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಬಾಗಲಕೋಟೆ ಬಣದಿಂದ ಪೊಲೀಸರ ಶೂ ಪಾಲಿಷ್ ಮಾಡಿ ವಿಭಿನ್ನ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಬೆಳಗಾವಿ: ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ನಾಯಕ ಸಮಾನ ಮನಸ್ಕರ ಸಂಘ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದೆ. ರಾಷ್ಟ್ರೀಯ ಹೆದ್ದಾರಿ 4 ತಡೆದು ಪ್ರತಿಭಟನೆ ನಡೆಸಿದ್ದಾರೆ. ನ್ಯಾ.ನಾಗಮೋಹನ್ ದಾಸ್ ವರದಿ ಅನುಷ್ಠಾನಕ್ಕೆ ಆಗ್ರಹಿಸಿದ ಧರಣಿ ನಿರತರು, ಸುವರ್ಣಸೌಧಕ್ಕೆ ನುಗ್ಗಲು ಯತ್ನಿಸಿದ್ದಾರೆ. ಅಲ್ಲದೇ ರಾಷ್ಟ್ರೀಯ ಹೆದ್ದಾರಿ ಮೇಲೆ ಮಲಗಿ ಧರಣಿ ನಡೆಸಲು ಮುಂದಾಗಿದ್ದಾರೆ. ಈ ವೇಳೆ ನೂರಕ್ಕೂ ಹೆಚ್ಚು ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪಾಲಿಷ್ ಮಾಡಿ ವಿಭಿನ್ನ ಪ್ರತಿಭಟನೆ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಬಾಗಲಕೋಟೆ ಬಣದಿಂದ ಪೊಲೀಸರ ಶೂ ಪಾಲಿಷ್ ಮಾಡಿ ವಿಭಿನ್ನ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಪೊಲೀಸರ ವಿರುದ್ಧ ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ.
ಪೊಲೀಸರು ಎರಡು ಬಸ್‌ಗಳಲ್ಲಿ ಪ್ರತಿಭಟನಾಕಾರರನ್ನು ಹತ್ತಿಸಿದರು. ಈ ವೇಳೆ ಓರ್ವ ಹೋರಾಟಗಾರ ಬಸ್ ಕೀಲಿಯನ್ನು ಕಿತ್ತಿಕೊಂಡಿದ್ದಾರೆ. ಕೀಲಿ ಕೊಡಲು ನಿರಾಕರಣೆ ಮಾಡಿದ್ದಾರೆ. ಹರಸಾಹಸ ಪಟ್ಟು ಕೊನೆಗೆ ಪೊಲೀಸರು ಕೀಲಿ ಕಸಿದುಕೊಂಡಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಶಾಲಾ ಶಿಕ್ಷಕರು ಪ್ರತಿಭಟನೆ ನಡೆಸಿದರು. ಸುವರ್ಣ ಗಾರ್ಡನ್‌ನ ಟೆಂಟ್‌ನಲ್ಲಿ ಶಿಕ್ಷಕರ ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾ ಸ್ಥಳಕ್ಕೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭೇಟಿ ನೀಡಿದ್ದರು.
ಇದನ್ನೂ ಓದಿ
Virat Kohli: ವಿರಾಟ್ ಕೊಹ್ಲಿ ಸುದ್ದಿಗೋಷ್ಠಿ ಬಳಿಕ ರವೀಂದ್ರ ಜಡೇಜಾ ಮಾಡಿದ ಟ್ವೀಟ್ ಫುಲ್ ವೈರಲ್: ಏನು ಗೊತ್ತೇ?
Vincent van Gogh : ಅಭಿಜ್ಞಾನ ; ಸೂಳೆಕೆರೆಗಳಿಗೆ ಹೋಗಿದ್ದು ಸುಖದ ಕ್ಷಣಗಳನ್ನು ಅರಸುತ್ತ ಅಲ್ಲ
Published On - 2:31 pm, Thu, 16 December 21