ಬೆಳಗಾವಿಯಲ್ಲಿ ಶೂ ಧರಿಸಿ ಕಿತ್ತೂರು ರಾಣಿ ಚನ್ನಮ್ಮಗೆ ಮಾಲಾರ್ಪಣೆ ಮಾಡಿದ ಎನ್ಸಿಪಿ ಕಾರ್ಯಕರ್ತ
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶರದ್ ಪವಾರ್ ಭಾಷಣ ಆರಂಭಿಸುತ್ತಿದ್ದಂತೆ ಘೋಷಣೆ ಕೂಗಿದ್ದಾರೆ. ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಭಾಲ್ಕಿ ಸಂಯುಕ್ತ ಮಹಾರಾಷ್ಟ್ರ ಸೇರಬೇಕು ಎಂದು ಕೂಗಿದ್ದಾರೆ.
ಬೆಳಗಾವಿ: ಕಿತ್ತೂರು ರಾಣಿ ಚನ್ನಮ್ಮ (Kittur Rani Chennamma) ಮೂರ್ತಿ ಕಟ್ಟೆಗೆ ಶೂ ಧರಿಸಿ ಮಾಲಾರ್ಪಣೆ ಮಾಡುವ ಮೂಲಕ ಎನ್ಸಿಪಿ (NCP) ಕಾರ್ಯಕರ್ತ ವೀರರಾಣಿ ಕಿತ್ತೂರು ರಾಣಿ ಚನ್ನಮ್ಮಗೆ ಅಪಮಾನ ಮಾಡಿದ್ದಾರೆ. ಬೆಳಗಾವಿ ಪ್ರವಾಸದಲ್ಲಿರುವ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ಗೆ (Sharad Pawar) ವೀರರಾಣಿ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಅದ್ಧೂರಿ ಸ್ವಾಗತ ಮಾಡಲಾಯಿತು. ಬೃಹದಾಕಾರದ ಹೂವಿನ ಹಾರ ತಂದು ಪಟಾಕಿ, ಸಿಡಿಮದ್ದು ಸಿಡಿಸಿ ಅದ್ಧೂರಿ ಸ್ವಾಗತ ಕೋರಿದ್ದರು. ಶರದ್ ಪವಾರ್ ತೆರಳಿದ ಬಳಿಕ ಚನ್ನಮ್ಮ ಮೂರ್ತಿ ಎದುರು ಅದೇ ಬೃಹದಾಕಾರದ ಹಾರವಿಟ್ಟು ಎಂಇಎಸ್ ಕಾರ್ಯಕರ್ತರು ಫೋಟೋಗೆ ಪೋಸ್ ನೀಡಿದ್ದಾರೆ.
ಜಿಲ್ಲೆಯಲ್ಲಿ ಎಂಇಎಸ್ ಪುಂಡರು ಮತ್ತೆ ಬಾಲ ಬಿಚ್ಚಿದ್ದಾರೆ. ಮರಾಠ ಕೋ ಆಪರೇಟಿವ್ ಬ್ಯಾಂಕ್ ಅಮೃತ ಮಹೋತ್ಸವದಲ್ಲಿ ಎಂಇಎಸ್ ಪುಂಡರು ನಾಡದ್ರೋಹಿ ಘೋಷಣೆ ಕೂಗಿದ್ದಾರೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶರದ್ ಪವಾರ್ ಭಾಷಣ ಆರಂಭಿಸುತ್ತಿದ್ದಂತೆ ಘೋಷಣೆ ಕೂಗಿದ್ದಾರೆ. ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಭಾಲ್ಕಿ ಸಂಯುಕ್ತ ಮಹಾರಾಷ್ಟ್ರ ಸೇರಬೇಕು ಎಂದು ಕೂಗಿದ್ದಾರೆ. ಘೋಷಣೆ ಕೂಗುವಾಗ ಶರದ್ ಪವಾರ್ ಸುಮ್ಮನೆ ನಿಂತಿದ್ದರು.
ಶುಭಂ ಶೆಳಕೆ ವಿರುದ್ಧ ಎಫ್ಐಆರ್ ದಾಖಲು: ಕರ್ನಾಟಕ ಗಡಿ ಭಾಗ ಮಹಾರಾಷ್ಟ್ರಕ್ಕೆ ಸೇರಿಸಿ ವಿವಾದಿತ ನಕ್ಷೆ ಪೋಸ್ಟ್ ಹಿನ್ನೆಲೆ MES ಮುಖಂಡ ಶುಭಂ ಶೆಳಕೆ ವಿರುದ್ಧ ಎಫ್ಐಆರ್ ದಾಖಲಾಗಿದೆ. MES ಮುಖಂಡ ಶುಭಂ ಶೆಳಕೆ ಫೇಸ್ಬುಕ್ನಲ್ಲಿ ವಿವಾದಾತ್ಮಕ ನಕ್ಷೆ ಮತ್ತು ವಿವಾದಾತ್ಮಕ ವಿಡಿಯೋ ಪೋಸ್ಟ್ ಮಾಡಿ ಶೇರ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕರವೇ ಕಾರ್ಯಕರ್ತ ವಿನಾಯಕ ಬೋವಿ ಬೆಳಗಾವಿಯ ಮಾಳಮಾರುತಿ ಠಾಣೆಯಲ್ಲಿ ದೂರು ನೀಡಿದ್ದು ದೂರಿನ ಮೇರೆಗೆ FIR ದಾಖಲಾಗಿದೆ. ಪೋಸ್ಟ್ ಡಿಲೀಟ್ ಮಾಡುವಂತೆ ಠಾಣೆಗೆ ಕರೆಸಿ ವಾರ್ನಿಂಗ್ ಮಾಡಲಾಗಿದೆ. ಆದ್ರೆ ಪೊಲೀಸರು ಎಚ್ಚರಿಕೆ ನೀಡಿದ್ದರೂ ಶುಭಂ ಶೆಳಕೆ ಉದ್ಧಟತನ ಮೆರೆದಿದ್ದಾರೆ.
ಇದನ್ನೂ ಓದಿ
ಬೆಂಗಳೂರು ಜನರೇ ಎಚ್ಚರ ಎಚ್ಚರ! ನಗರದಲ್ಲಿ ಹೆಚ್ಚಾಗುತ್ತಿದೆ ಡೆಂಘೀ ಸೋಂಕಿತರ ಸಂಖ್ಯೆ
Published On - 4:49 pm, Wed, 11 May 22