ಭ್ರೂಣ ಪತ್ತೆ ಪ್ರಕರಣ: ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ ಎಂದ ಆರೋಗ್ಯ ಸಚಿವ ಸುಧಾಕರ್, ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ದಿಢೀರ್ ದಾಳಿ

| Updated By: ಸಾಧು ಶ್ರೀನಾಥ್​

Updated on: Jun 25, 2022 | 3:19 PM

ಸ್ವತಃ ಆರೋಗ್ಯ ಸಚಿವರಿಂದಲೇ ಈ ಸೂಚನೆ ಹೊರಬೀಳುತ್ತಿದ್ದಂತೆ ಪ್ರಕರಣವನ್ನ ಗಂಭೀರವಾಗಿ ತೆಗೆದುಕೊಂಡ ಬೆಳಗಾವಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸೂಚನೆ ಮೇರೆಗೆ ಬೆಳಗಾವಿ ಜಿಲ್ಲೆಯಾದ್ಯಂತ ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ಮಾಡಿ, ಕಾರ್ಯಾಚರಣೆ ನಡೆಸಿದ್ದಾರೆ.

ಭ್ರೂಣ ಪತ್ತೆ ಪ್ರಕರಣ: ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ ಎಂದ ಆರೋಗ್ಯ ಸಚಿವ ಸುಧಾಕರ್, ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ದಿಢೀರ್ ದಾಳಿ
ಭ್ರೂಣ ಪತ್ತೆ ಪ್ರಕರಣ: ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ ಎಂದ ಆರೋಗ್ಯ ಸಚಿವ ಸುಧಾಕರ್, ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ದಿಢೀರ್ ದಾಳಿ
Follow us on

ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿಯಲ್ಲಿ ಬಸ್​ ನಿಲ್ದಾಣದ ಬಳಿ (mudalagi bus stand) ಚರಂಡಿ ಕಾಲಿಉವೆಯಲ್ಲಿ 7 ಭ್ರೂಣಗಳು (fetus) ಪ್ಲಾಸ್ಟಿಕ್ ಬಾಟಲಿಗಳಲ್ಲಿ ಪತ್ತೆಯಾದ ಅಮಾನವೀಯ ಘಟನೆ ನಿನ್ನೆ ವರದಿಯಾಗಿತ್ತು. ಆ ಸಂಬಂಧ ಇಡೀ ಘಟನೆಯ ವೃತ್ತಾಂತದ ಬಗ್ಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಮಾಹಿತಿ ಪಡೆದಿದ್ದಾರೆ. ಬೆಳಗಾವಿ ಜಿಲ್ಲಾ ವೈದ್ಯಾಧಿಕಾರಿಗೆ (ಡಿಹೆಚ್​ಒ ಡಾ. ಮಹೇಶ್ ಕೋಣಿ) ದೂರವಾಣಿ ಕರೆ ಮಾಡಿ ಮಾಹಿತಿ ಪಡೆದರು. ಆ ವೇಳೆ ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ. ಯಾರದ್ದೇ ಒತ್ತಡ ಬಂದ್ರೂ ತಲೆಕೆಡಿಸಿಕೊಳ್ಳದೆ ನೀವು ಕ್ರಮ ಕೈಗೊಳ್ಳಿ ಎಂದು ಬೆಳಗಾವಿ ಡಿಹೆಚ್​ಒಗೆ ಆರೋಗ್ಯ ಸಚಿವ ಡಾ. ಸುಧಾಕರ್​ ಸೂಚಿಸಿದ್ದಾರೆ.

ಸ್ವತಃ ಆರೋಗ್ಯ ಸಚಿವರಿಂದಲೇ ಈ ಸೂಚನೆ ಹೊರಬೀಳುತ್ತಿದ್ದಂತೆ ಪ್ರಕರಣವನ್ನ ಗಂಭೀರವಾಗಿ ತೆಗೆದುಕೊಂಡ ಬೆಳಗಾವಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸೂಚನೆ ಮೇರೆಗೆ ಬೆಳಗಾವಿ ಜಿಲ್ಲೆಯಾದ್ಯಂತ ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ಮಾಡಿ, ಕಾರ್ಯಾಚರಣೆ ನಡೆಸಿದ್ದಾರೆ.

ಬೆಳಗಾವಿ ತಾಲೂಕಿನಲ್ಲೇ ನೂರಕ್ಕೂ ಅಧಿಕ ಸ್ಕ್ಯಾನ್ ಸೆಂಟರ್ ಗಳ ಮೇಲೆ ದಾಳಿ ಮಾಡಲಾಗಿದೆ. ಬೆಳಗಾವಿ ಟಿಎಚ್ಒ ಡಾ. ಶಿವಾನಂದ ಮಾಸ್ತಿಹೊಳಿ ನೇತೃತ್ವದಲ್ಲಿ ಆರೋಗ್ಯಾಧಿಕಾರಿಗಳು ಐದು ತಂಡಗಳಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆಯಾ ಸ್ಕ್ಯಾನಿಂಗ್ ಸೆಂಟರ್ ಗಳು ಅನುಮತಿ ಪಡೆದಿವೆಯೋ? ಇಲ್ಲವೋ? ಎಂಬ ಬಗ್ಗೆ ಸಿಬ್ಬಂದಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಗರ್ಭಿಣಿಯರ ಮಾಹಿತಿ ಒಳಗೊಂಡಿರುವ ದಾಖಲೆ ಪತ್ರಗಳ ಪರಿಶೀಲನೆಗೂ ಕೈಹಾಕಿದ್ದಾರೆ. ಭ್ರೂಣ ಪತ್ತೆ ಅಪರಾಧ ಎಂಬ ಭಿತ್ತಿ ಪತ್ರ ಅಂಟಿಸಿರುವ ಬಗ್ಗೆಯೂ ಪರಿಶೀಲನೆ ನಡೆದಿದೆ.

ಹಳ್ಳದಲ್ಲಿ ಭ್ರೂಣ ಎಸೆದ ಪ್ರಕರಣ: ವೆಂಕಟೇಶ ಆಸ್ಪತ್ರೆ ಮತ್ತು ಸ್ಕ್ಯಾನಿಂಗ್ ಸೆಂಟರ್ ಜಪ್ತಿ ಮಾಡಿದ ಡಿಎಚ್​ಒ

ಮೂಡಲಗಿ ಪಟ್ಟಣದ ಹಳ್ಳದಲ್ಲಿ 7 ಭ್ರೂಣಗಳ ಪತ್ತೆ ಪ್ರಕರಣ ಸಂಬಂಧ ಕೃತ್ಯವಸಗಿದ ಆಸ್ಪತ್ರೆ ವಿರುದ್ಧ ಜಿಲ್ಲಾ ವೈದ್ಯಾಧಿಕಾರಿಯವರು ಕ್ರಮ ಕೈಗೊಂಡಿದ್ದಾರೆ. ಭ್ರೂಣಗಳನ್ನ ಎಸೆದಿದ್ದ ವೆಂಕಟೇಶ್ ಹೆರಿಗೆ ಆಸ್ಪತ್ರೆ ಮತ್ತು ಸ್ಕ್ಯಾನಿಂಗ್ ಸೆಂಟರ್​ ಅನ್ನು ಜಿಲ್ಲಾಧಿಕಾರಿಯವರು ಜಪ್ತಿ ಮಾಡಿದ್ದಾರೆ. 3 ವರ್ಷಗಳಿಂದ ಅಬಾಷನ್ ಮಾಡಿದ್ದ ಏಳು ಭ್ರೂಣಗಳನ್ನು ಆಸ್ಪತ್ರೆಯಲ್ಲೇ ಇಡಲಾಗಿತ್ತು. ಅದಾಗ್ಯೂ ಪೊಲೀಸರ ದಾಳಿಯ ಭೀತಿಯಿಂದ ಆಸ್ಪತ್ರೆ ಸಿಬ್ಬಂದಿ ಭ್ರೂಣಗಳನ್ನು ಜೂ.23ರಂದು 5 ಬಾಟಲ್‌ಗಳಲ್ಲಿ ತುಂಬಿಸಿ ಹಳ್ಳಕ್ಕೆ ಎಸೆದಿರುವುದು ಬೆಳಕಿಗೆ ಬಂದಿದೆ.

ಭ್ರೂಣ ಪತ್ತೆ ಹಾಗೂ ಹತ್ಯೆ ಕಾನೂನು ಪ್ರಕಾರ ಅಪರಾಧವಾಗಿದೆ. ಅದಾಗ್ಯೂ ಮೂಡಲಗಿ ಪಟ್ಟಣದಲ್ಲಿನ ಹಳ್ಳದಲ್ಲಿ ಭ್ರೂಣಗಳು ಪತ್ತೆಯಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆಗೆ ಇಳಿದಿದ್ದಾರೆ. ಅದರಂತೆ ಪಟ್ಟಣದಲ್ಲಿರುವ ವೆಂಕಟೇಶ್ ಆಸ್ಪತ್ರೆ ಸಿಬ್ಬಂದಿಗಳನ್ನು ತನಿಖೆ ನಡೆಸಿದಾಗ ಆಸ್ಪತ್ರೆಯ ಕಾನೂನು ಬಾಹಿರ ಚಟುವಟಿಕೆ ಬೆಳಕಿಗೆ ಬಂದಿದೆ.

ಪೊಲೀಸರ ಪ್ರಾಥಮಿಕ ತನಿಖೆ ವೇಳೆ ವೆಂಕಟೇಶ ಆಸ್ಪತ್ರೆ ಆಡಳಿತ ಮಂಡಳಿಯು ತಮ್ಮದೇ ಆಸ್ಪತ್ರೆ ಭ್ರೂಣಗಳು ಎಂದು ತಪ್ಪೊಪ್ಪಿಕೊಂಡಿದ್ದಾರೆ. ಸದ್ಯ ನಿಯಮ ಗಾಳಿಗೆ ತೂರಿ ಸ್ಕ್ಯಾನಿಂಗ್ ಸೆಂಟರ್​ನಲ್ಲಿ ಲಿಂಗ ಪತ್ತೆ ಹಚ್ಚಿದ್ದಾರೆಯೇ? ಅಥವಾ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ವಿಚಾರ ಗೊತ್ತಿದ್ದರೂ ಸುಮ್ಮನೆ ಕುಳಿತಿದ್ರಾ ಎಂಬ ಪ್ರಶ್ನೆ ಎದ್ದಿದೆ

Also Read:
Shocking: ಬಸ್​ ನಿಲ್ದಾಣ ಬಳಿಗೆ ಹಳ್ಳದಲ್ಲಿ ತೇಲಿ ಬಂದ 4 ನವಜಾತ ಶಿಶುಗಳ ಮೃತದೇಹ, ಜಿಲ್ಲಾ ವೈದ್ಯಾಧಿಕಾರಿ ಹೇಳಿದ್ದೇನು?

Published On - 3:17 pm, Sat, 25 June 22