ಶಾಲೆಯ ಶೌಚಾಲಯದಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಯಕ್ಕಂಚಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಹೆತ್ತಮ್ಮ ತನ್ನ ನವಜಾತ ಶಿಶುವನ್ನು ಶೌಚಾಲಯದಲ್ಲೇ ಬಿಟ್ಟು ಹೋಗಿದ್ದಾಳೆ. ಶನಿವಾರ ಆಗಿದ್ದರಿಂದ ಶಾಲೆಯಲ್ಲಿ ಯಾರೂ ಇಲ್ಲದಾಗ ಘಟನೆ ನಡೆದಿದೆ. ಸಾರ್ವಜನಿಕರು ಶಿಶುವಿನ ಅಳು ಕೇಳಿ ಸ್ಥಳಕ್ಕೆ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಐಗಳಿ ಪೊಲೀಸರು ಭೇಟಿ ನೀಡಿದ್ದಾರೆ. ಮಗುವನ್ನ ಅಥಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. See […]

ಶಾಲೆಯ ಶೌಚಾಲಯದಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ

Updated on: Dec 28, 2019 | 6:09 PM

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಯಕ್ಕಂಚಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಹೆತ್ತಮ್ಮ ತನ್ನ ನವಜಾತ ಶಿಶುವನ್ನು ಶೌಚಾಲಯದಲ್ಲೇ ಬಿಟ್ಟು ಹೋಗಿದ್ದಾಳೆ. ಶನಿವಾರ ಆಗಿದ್ದರಿಂದ ಶಾಲೆಯಲ್ಲಿ ಯಾರೂ ಇಲ್ಲದಾಗ ಘಟನೆ ನಡೆದಿದೆ. ಸಾರ್ವಜನಿಕರು ಶಿಶುವಿನ ಅಳು ಕೇಳಿ ಸ್ಥಳಕ್ಕೆ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಐಗಳಿ ಪೊಲೀಸರು ಭೇಟಿ ನೀಡಿದ್ದಾರೆ. ಮಗುವನ್ನ ಅಥಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 4:23 pm, Sat, 28 December 19