Sign In

By signing in or creating an account, you agree with Associated Broadcasting Company's Terms & Conditions and Privacy Policy.

Gokak Falls: ಉಕ್ಕಿ ಹರಿಯುತ್ತಿದೆ ಭಾರತದ ನಯಾಗರ ಜಲಪಾತ: ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಗೋಕಾಕ್ ಫಾಲ್ಸ್

ಗೋಕಾಕ್ ನಗರದಿಂದ ಹತ್ತು ಕಿಮೀ ದೂರದಲ್ಲಿರುವ ಗೋಕಾಕ್ ಫಾಲ್ಸ್​ಗೆ ಇದೀಗ ಜೀವ ಕಳೆ ಬಂದಿದೆ. ವಿಕೇಂಡ್ ಹಿನ್ನೆಲೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿ ಜಲಪಾತದ ಜಲವೈಭವವನ್ನ ಕಣ್ತುಂಬಿಕೊಂಡರು.

Follow us
Sahadev Mane
| Updated By: ಗಂಗಾಧರ​ ಬ. ಸಾಬೋಜಿ

Updated on:Jul 30, 2023 | 10:01 PM

ಬೆಳಗಾವಿ, ಜುಲೈ 30: ಭಾರತದ ನಯಾಗರ ಜಲಪಾತ ಎಂದೇ ಖ್ಯಾತಿ ಪಡೆದಿರುವ ಗೋಕಾಕ್ ಜಲಪಾತಕ್ಕೆ (Gokak Falls) ಇದೀಗ ಉಕ್ಕಿ ಹರಿಯುತ್ತಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಆಗುತ್ತಿರುವ ಕಾರಣಕ್ಕೆ ಸದ್ಯ ಘಟಪ್ರಭಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇದರಿಂದ ಗೋಕಾಕ್ ಜಲಪಾತದ ಜಲವೈಭವ ದುಪ್ಪಟ್ಟಾಗಿದೆ. ವಿಕೇಂಡ್ ಹಿನ್ನೆಲೆ ಸಾವಿರಾರು ಪ್ರವಾಸಿಗರು ಜಲಧಾರೆಯನ್ನ ಕಣ್ತುಂಬಿಕೊಂಡು ಎಂಜಾಯ್ ಮಾಡಿದ್ದಾರೆ.

ಗೋಕಾಕ್ ನಗರದಿಂದ ಹತ್ತು ಕಿಮೀ ದೂರದಲ್ಲಿರುವ ಗೋಕಾಕ್ ಫಾಲ್ಸ್​ಗೆ ಇದೀಗ ಜೀವ ಕಳೆ ಬಂದಿದೆ. ಬಂಡೆಗಲ್ಲುಗಳ ಮಧ್ಯೆ ಹಾಲಿನಂತೆ ಹರಿದು ಬರುತ್ತಿರುವ ನೀರು ಕೆಲವೇ ಕ್ಷಣಗಳಲ್ಲಿ ಎತ್ತರಿಂದ ನೆಲಕ್ಕಪ್ಪಳಿಸುವ ರುದ್ರರಮಣೀಯ ದೃಶ್ಯ ರೋಮಾಂಚನವುಂಟು ಮಾಡುತ್ತೆ. ಇಂದು ವಿಕೇಂಡ್ ಹಿನ್ನೆಲೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿ ಜಲಪಾತದ ಜಲವೈಭವವನ್ನ ಕಣ್ತುಂಬಿಕೊಂಡರು.

ಇದನ್ನೂ ಓದಿ: Belagavi News: ಗೃಹಲಕ್ಷ್ಮೀ ಅರ್ಜಿ ನೋಂದಣಿಗೆ ಹಣ ವಸೂಲಿ ಆರೋಪ; ಗ್ರಾಮ ಒನ್ ಕೇಂದ್ರದ ಲಾಗ್‌ಇನ್ ಐಡಿ ರದ್ದು

ಕರ್ನಾಟಕದ ಎರಡನೇ ಅತೀ ದೊಡ್ಡ ಜಲಪಾತ ಅಂತಾ ಹೆಸರು ವಾಸಿಯಾಗಿರುವ ಗೋಕಾಕ್ ಜಲಪಾತ ನೋಡುವುದೇ ಚೆಂದ. ಅದರಲ್ಲೂ ಮಳೆಗಾಲದ ಸಂದರ್ಭದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಬರುವ ಕಾರಣ ಜಲವೈಭವ ಇಮ್ಮಡಿಯಾಗುತ್ತೆ. ಇದು ನೋಡುಗರನ್ನ ತನ್ನತ್ತ ಸೆಳೆಯುವುದಷ್ಟೇ ಅಲ್ಲದೇ ರೋಮಾಂಚನ ಗೊಳಿಸಿ ಎಲ್ಲವನ್ನೂ ಮರೆಯಿಸಿ ಬಿಡುತ್ತೆ.

ಬೆಳಗಾವಿ ನಗರ ಸೇರಿದಂತೆ ಮಹಾರಾಷ್ಟ್ರ, ಬಾಗಲಕೋಟ, ವಿಜಯಪುರ, ಧಾರವಾಡ ಸೇರಿದಂತೆ ದೂರದ ಊರುಗಳಿಂದಲೂ ಪ್ರವಾಸಿಗರು ಆಗಮಿಸಿ ಫಾಲ್ಸ್ ವೀಕ್ಷಣೆ ಮಾಡಿ ಎಂಜಾಯ್ ಮಾಡುತ್ತಾರೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿರುವ ಹಿನ್ನೆಲೆ ಗೋಕಾಕ್ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಬಂದೋಬಸ್ತ್ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Belagavi News: ಖಾನಾಪುರದಲ್ಲಿ ಪ್ರಾರ್ಥನೆ ವೇಳೆ ಕುಸಿದ ಶಾಲಾ ಕೊಠಡಿಯ ಮೇಲ್ಛಾವಣಿ, ಗೋಡೆ

ಯಾರು ನದಿಗೆ ಇಳಿಯದಂತೆ ಫಾಲ್ಸ್ ಬಳಿ ಹೋಗಿ ಸೇಲ್ಪಿ ಕ್ಲಿಕ್ಕಿಸಿಕೊಳ್ಳುವುದು, ರೀಲ್ಸ್ ಮಾಡದಂತೆ ತಡೆದಿದ್ದಾರೆ. ಗೋಕಾಕ್ ಡಿವೈಎಸ್​ಪಿ ನೇತೃತ್ವದಲ್ಲಿ ಇಪ್ಪತ್ತಕ್ಕೂ ಅಧಿಕ ಪೊಲೀಸರ ಬಂದೋಬಸ್ತ್ ಇಲ್ಲಿ ಮಾಡಲಾಗಿದ್ದು ದೂರದಲ್ಲೇ ನಿಂತು ಜಲಪಾತದ ಸೊಬಗನ್ನ ಪ್ರವಾಸಿಗರು ಸವಿಯುತ್ತಿದ್ದಾರೆ.

ಸದ್ಯ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ಇದರಿಂದ ಗೋಕಾಕ್ ಫಾಲ್ಸ್​ಗೆ ನೀರಿನ ಪ್ರಮಾಣ ಹೆಚ್ಚಾಗಿ ತನ್ನ ಸೌಂದರ್ಯ ಹೆಚ್ಚಿಸಿಕೊಂಡು ಧುಮ್ಮಿಕ್ಕುತ್ತಿದ್ದಾಳೆ. ವಿಕೇಂಡ್ ಸಂದರ್ಭದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪ್ರವಾಸಿಗರು ಫಾಲ್ಸ್​ನತ್ತ ಮುಖ ಮಾಡುತ್ತಿದ್ದು, ಅದರಲ್ಲಿಯೂ ಶಕ್ತಿ ಯೋಜನೆ ಹಿನ್ನೆಲೆ ಮಹಿಳೆಯರೇ ಹೆಚ್ಚಾಗಿ ಫಾಲ್ಸ್​ಗೆ ಭೇಟಿ ನೀಡುತ್ತಿದ್ದಾರೆ. ಕುಟುಂಬ ಸಮೇತ ಬಂದು ಫುಲ್ ಎಂಜಾಯ್ ಮಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:01 pm, Sun, 30 July 23

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ; ಬಲೂಚ್ ದಂಗೆಕೋರರ ಎಚ್ಚರಿಕೆ
ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ; ಬಲೂಚ್ ದಂಗೆಕೋರರ ಎಚ್ಚರಿಕೆ