AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nippani Election Results: ನಿಪ್ಪಾಣಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಗೆದ್ದು ಬೀಗಿದ ಶಶಿಕಲಾ ಜೊಲ್ಲೆ

Nippani Assembly Election Results 2023 Live Counting Updates: ನಿಪ್ಪಾಣಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಕಾಕಾ ಸಾಹೇಬ್ ಪಟೇಲ್ , ಶಶಿಕಲಾ ಜೊಲ್ಲೆ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಜೆಡಿಎಸ್ ನ ರಾಜು ಮಾರುತಿ ಪವಾರ್ ಮತ್ತು ಎಎಪಿಯ ರಾಜೇಶ್ ಅಣ್ಣಾ ಸಾಹೇಬ ಬಸವಣ್ಣ ಕೂಡಾ ಕಣದಲ್ಲಿದ್ದಾರೆ

Nippani Election Results: ನಿಪ್ಪಾಣಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಗೆದ್ದು ಬೀಗಿದ ಶಶಿಕಲಾ ಜೊಲ್ಲೆ
ಶಶಿಕಲಾ ಜೊಲ್ಲೆ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:May 13, 2023 | 2:29 PM

Share

Nippani Assembly Election Results 2023: ನಿಪ್ಪಾಣಿ ವಿಧಾನಸಭಾ (Nippani Assembly Constituency  ) ಕ್ಷೇತ್ರದಲ್ಲಿ ಮೂರನೇ ಬಾರಿ ಬಿಜೆಪಿಯ ಶಶಿಕಲಾ ಜೊಲ್ಲೆ ಗೆದ್ದಿದಾರೆ. ಈ ಬಾರಿ ಚುನಾವಣಾ ಕಣದಲ್ಲಿ ಕಾಕಾ ಸಾಹೇಬ್ ಪಟೇಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದು, ರಾಜು ಮಾರುತಿ ಪವಾರ್ ಜೆಡಿಎಸ್, ರಾಜೇಶ ಅಣ್ಣಾಸಾಹೇಬ ಬಸವಣ್ಣ (ಎಎಪಿ) ಇದ್ದರು. ಮಹಾರಾಷ್ಟ್ರ ಗಡಿಯಲ್ಲಿರುವ ಬೆಳಗಾವಿ ಜಿಲ್ಲೆಯ ಈ ಕ್ಷೇತ್ರದಲ್ಲಿಯೂ ಮರಾಠಿ ಮಾತನಾಡುವವರ ಸಂಖ್ಯೆ ಹೆಚ್ಚು ಇದೆ. ನಿಪ್ಪಾಣಿ ಕ್ಷೇತ್ರದಲ್ಲಿ ಮರಾಠಿಗರ ಜೊತೆಗೆ ಲಿಂಗಾಯತ ಮತದಾರರೇ ನಿರ್ಣಾಯಕ. ಈ ಕ್ಷೇತ್ರದಲ್ಲಿ 1962ರಲ್ಲಿ ಮಾತ್ರ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ಅಭ್ಯರ್ಥಿ ಗೆದ್ದಿದ್ದರು.

ಅಲ್ಯೂಮಿನಿಯಂ, ಮಡಕೆ ಕಾರ್ಖಾನೆ, ಬೀಡಿ ಕಾರ್ಖಾನೆಗಳು, ಜವಳಿ ವ್ಯಾಪಾರ, ಮರದ ವ್ಯವಹಾರಗಳಿಗೆ ಹೆಸರು ವಾಸಿಯಾದ ತಾಲೂಕು ನಿಪ್ಪಾಣಿ. 2018ರಲ್ಲಿ ಹೊಸ ತಾಲೂಕಾಗಿ ರಚನೆಯಾದ ನಿಪ್ಪಾಣಿ, 1957ರಿಂದ ವಿಧಾನಸಭಾ ಕ್ಷೇತ್ರವಾಯಿತು.

1999ರಿಂದ ಗೆದ್ದು ಬೀಗುತ್ತಿದ್ದ ಕಾಂಗ್ರೆಸ್‌ನ ಕಾಕಾಸಾಹೇಬ ಪಾಂಡುರಂಗ ಪಾಟೀಲ 2008ರ ಚುನಾವಣೆಯಲ್ಲಿಯೂ ಗೆಲುವು ಸಾಧಿಸಿದ್ದರು. 2013ರಲ್ಲಿ ಬಿಜೆಪಿಯಿಂದ ಸ್ಪರ್ದಿಸಿದ್ದ ಶಶಿಕಲಾ ಜೊಲ್ಲೆ ಗೆಲುವಿನ ಮೂಲಕ ಬಿಜೆಪಿ ಇಲ್ಲಿ ಖಾತೆ ತೆರೆಯಿತು. 2013ರಲ್ಲಯೂ ಗೆಲವು ಬಿಜೆಪಿ ಪಾಲಾಯಿತು, ಪ್ರಸ್ತುತ ಸಚಿವೆ ಶಶಿಕಲಾ ಜೊಲ್ಲೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಕಾಂಗ್ರೆಸ್‌ನ ಭದ್ರಕೋಟೆಯನ್ನು ಭೇದಿಸಿ ಶಶಿಕಲಾ ಜೊಲ್ಲೆ ನಿರಂತರ ಎರಡು ಬಾರಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿ, ಸಚಿವೆಯಾಗಿದ್ದರು. ಈಗ ಮೂರನೇ ಬಾರಿ ಗೆದ್ದು Hatrick ಗೆಲುವು ಸಾಧಿಸಲಿದ್ದಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

2018ರ ಚುನಾವಣೆಯಲ್ಲಿಯೂ ಬಿಜೆಪಿಯ ಶಶಿಕಲಾ ಜೊಲ್ಲೆ ಎರಡನೇ ಬಾರಿಗೆ ಗೆಲುವು ಸಾಧಿಸಿದರು. ಅವರು 87,006 ಮತಗಳನ್ನು ಪಡೆದರೆ, ಕಾಂಗ್ರೆಸ್‌ನ ಕಾಕಾಸಾಹೇಬ್ ಪಾಂಡುರಂಗ ಪಾಟೀಲ್‌ 78,500 ಮತಗಳನ್ನು ಪಡೆದು ಪರಾಭವಗೊಂಡರು. ಈ ಚುನಾವಣೆಯಲ್ಲಿ ಜೆಡಿಎಸ್‌ ತನ್ನ ಅಭ್ಯರ್ಥಿಯನ್ನೇ ಕಣಕ್ಕಿಳಿಸಲಿಲ್ಲ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 1:52 am, Sat, 13 May 23

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ