AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕರ್ನಾಟಕ ಭಾಗದ 8 ಜಿಲ್ಲೆಗಳಿಗೆ ಕೇಂದ್ರದಿಂದ ಭರ್ಜರಿ ಗಿಫ್ಟ್; 376 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ನಿತಿನ್ ಗಡ್ಕರಿ ಶಂಕು ಸ್ಥಾಪನೆ

ನಿತಿನ್​ ಗಡ್ಕರಿ ಅವರು ಇಂದು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 6,975 ಕೋಟಿ ರೂ. ಮೌಲ್ಯದ 15 ಕಾಮಗಾರಿಗಳಿಗೆ ವರ್ಚುವಲ್ ಮೂಲಕ ಚಾಲನೆ ನೀಡಲಿದ್ದಾರೆ. 376 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಿತಿನ್ ಗಡ್ಕರಿಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಸ್ಥಳೀಯ ‌ನಾಯಕರು‌‌ ಸಾಥ್‌ ನೀಡಲಿದ್ದಾರೆ.

ಉತ್ತರ ಕರ್ನಾಟಕ ಭಾಗದ 8 ಜಿಲ್ಲೆಗಳಿಗೆ ಕೇಂದ್ರದಿಂದ ಭರ್ಜರಿ ಗಿಫ್ಟ್; 376 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ನಿತಿನ್ ಗಡ್ಕರಿ ಶಂಕು ಸ್ಥಾಪನೆ
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ
Sahadev Mane
| Updated By: ಆಯೇಷಾ ಬಾನು|

Updated on:Feb 22, 2024 | 9:57 AM

Share

ಬೆಳಗಾವಿ, ಫೆ.22: ಲೋಕಸಭಾ ಸಮರಕ್ಕೂ ಮುನ್ನ ಉತ್ತರ ಕರ್ನಾಟಕ ಭಾಗದ 8 ಜಿಲ್ಲೆಗಳಿಗೆ ಕೇಂದ್ರ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. 376 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ 6,975 ಕೋಟಿ ರೂ.ಗಳ ಪ್ಯಾಕೇಜ್​ನ ನೂತನ ಕಾಮಗಾರಿಗಳಿಗೆ ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಕಾರ್ಯಕ್ರಮ ನಡೆಯಲಿದೆ.

ಬೆಳಗಾವಿ, ವಿಜಯಪುರ, ಬಾಗಲಕೋಟೆ, ಉತ್ತರ ಕನ್ನಡ, ಕೊಪ್ಪಳ, ರಾಯಚೂರು, ಕಲಬುರಗಿ, ಬೀದರ್ ಸೇರಿ 8 ಜಿಲ್ಲೆಗಳಲ್ಲಿ ಹೆದ್ದಾರಿ ಕಾಮಗಾರಿಗಳಿಗೆ ಇಂದು ಚಾಲನೆ ಸಿಗಲಿದೆ. ಈ ಎಲ್ಲಾ ಜಿಲ್ಲೆಗಳ‌ 376 ಕಿ.ಮೀ ಉದ್ದದ ರಸ್ತೆಗಳಿಗೆ 6,975 ಕೋಟಿ ರೂ.ಗಳ ಪ್ಯಾಕೇಜ್ ಬಿಡುಗಡೆ ಮಾಡಲಾಗಿದೆ. ಬೆಳಗಾವಿ ನಗರದಲ್ಲಿ 34 ಕಿ.ಮೀ ಉದ್ದದ 1,600 ಕೋಟಿ ವೆಚ್ಚದ ರಿಂಗ್ ರೋಡ್. ಚಿಕ್ಕೋಡಿ ಬೈಪಾಸ್‌ನಿಂದ -ಗೋಟೂರುವರೆಗೆ 941.61 ಕೋಟಿ ವೆಚ್ಚದಲ್ಲಿ 27.12 ಕಿ.ಮೀ ಉದ್ದದ ಚತುಷ್ಪಥ ರಸ್ತೆ ನಿರ್ಮಾಣ ಮಾಡಲಾಗುತ್ತೆ. ಶಿರಗುಪ್ಪಿಯಿಂದ ಅಂಕಲಿವರೆಗೆ 887.32 ಕೋಟಿ ವೆಚ್ಚದಲ್ಲಿ 10 ಕಿ.ಮೀ ಉದ್ದದ ರಸ್ತೆ ಅಗಲೀಕರಣ. ಹಾಗೂ ಮುರಗುಂಡಿಯಿಂದ ಚಿಕ್ಕೋಡಿ ಹತ್ತಿರವರೆಗೆ 785.79 ಕೋಟಿ ವೆಚ್ಚದಲ್ಲಿ 50.2 ಕಿ.ಮೀ ಉದ್ದದ ರಸ್ತೆ ಅಗಲೀಕರಣ ಮಾಡಲಾಗುತ್ತೆ.

ಬೆಳಗಾವಿ ಜಿಲ್ಲೆಯಲ್ಲಿ 4,237.12 ಕೋಟಿ ರೂ. ವೆಚ್ಚದ 121.8 ಕಿ.ಮೀ ಉದದ್ದ ರಸ್ತೆಗಳ ಶಂಕು ಸ್ಥಾಪನೆಯನ್ನು ನಿತಿನ್ ಗಡ್ಕರಿ ನೆರವೇರಿಸಲಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅರಬೈಲ್‌ನಿಂದ ಇಡಗುಂಡಿ ವಿಭಾಗದವರೆಗೆ 31.9 ಕೋಟಿ ವೆಚ್ಚದಲ್ಲಿ 16 ಕಿ.ಮೀ ಉದ್ದದ ರಸ್ತೆ ನಿರ್ಮಾಣ ಮಾಡಲಾಗುತ್ತೆ. ವಿಜಯಪುರ ಐಬಿ ಸರ್ಕಲ್ ನಿಂದ ಮಹಾರಾಷ್ಟ್ರದ ಮುರ್ರುಮ್ ಗಡಿಯವರೆಗೆ 657.09 ಕೋಟಿ ವೆಚ್ಚದಲ್ಲಿ 102.31 ಕಿ.ಮೀ ಉದ್ದದ ದ್ವಿಪಥ ರಸ್ತೆ ಅಗಲೀಕರಣ. ಕನಮಡಿಯಿಂದ ಬಿಜ್ಜೋಡಿ ಮತ್ತು ತಿಕೋಟಾವರೆಗೆ 23.31 ಕಿ.ಮೀ ದ್ವಿಪಥ ರಸ್ತೆ ರೂ.196.5 ಕೋಟಿ ಹಣದಲ್ಲಿ ವಿಸ್ತರಣೆ ಮಾಡಲಾಗುತ್ತೆ.

ಇದನ್ನೂ ಓದಿ: ಕೌತುಕ ಸೃಷ್ಟಿಸಿದ ಮಂಡ್ಯ ಲೋಕಸಭಾ ಅಖಾಡ; ಹೈಕಮಾಂಡ್​ ಘೋಷಣೆಗೂ ಮುನ್ನ ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಹೆಸರು ಬಹಿರಂಗ

ಬಾಗಲಕೋಟೆ ಜಿಲ್ಲೆಯ ಸರ್ಜಾಪುರದಿಂದ ಪಟ್ಟದಕಲ್ಲುವರೆಗೆ 26 ಕಿ.ಮೀ ಉದ್ದರ ಹೆದ್ದಾರಿ ದ್ವಿಪಥಕ್ಕೆ 340.641 ಕೋಟಿ ಬಿಡುಗಡೆ ಮಾಡಲಾಗಿದೆ.406.73 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ 150 ಎ ಮಸ್ಕಿ, ಸಿಂದೂರು ಬೈಪಾಸ್ 20.1 ಕಿ.ಮೀ ಉದ್ದದ ಬೈಪಾಸ್ ನಿರ್ಮಾಣ ಮಾಡಲಾಗುತ್ತಿದೆ. 146.64 ಕೋಟಿ ವೆಚ್ಚದಲ್ಲಿ 13.8 ಕಿ.ಮೀ ಉದ್ದದ ವೆಂಕಟೇಶ್ವರ ಕ್ಯಾಂಪ್ ನಿಂದ ದಡೇಸುಗೂರು ಕ್ಯಾಂಪ್‌ವರೆಗೆ ದ್ವಿಪಥ ರಸ್ತೆ ಅಗಲೀಕರಣ. ರಾಷ್ಟ್ರೀಯ ಹೆದ್ದಾರಿ 367ರಲ್ಲಿ ಭಾನಾಪುರ-ಗದ್ದನಕೇರಿ ವಿಭಾಗದ ಕುಕನೂರು, ಯಲಬುರ್ಗಾ ಹಾಗೂ ಗಜೇಂದ್ರಗಡದಲ್ಲಿ 253.75 ಕೋಟಿ ವೆಚ್ಚದಲ್ಲಿ 17.3 ಕಿ.ಮೀ ಉದ್ದದ ಬೈಪಾಸ್ ನಿರ್ಮಾಣ ಮಾಡಲಾಗುತ್ತೆ.

ಯಾದಗಿರಿ ಹತ್ತಿರದ ರಾಷ್ಟ್ರೀಯ ಹೆದ್ದಾರಿ 150ರ 8.75 ಕಿ.ಮೀ ಉದ್ದದ 136.29 ಕೋಟಿ ವೆಚ್ಚದಲ್ಲಿ ಬೈಪಾಸ್ ನಿರ್ಮಾಣ ಮಾಡಲಾಗುತ್ತೆ. ಬೀದರ ಜಿಲ್ಲೆ ಚಿಂಚೋಳಿಯಿಂದ ತೆಲಂಗಾಣದ ಗಡಿ ಮಿರಿಯಾಣ ತನಕ 405.3 ಕೋಟಿ ವೆಚ್ಚದಲ್ಲಿ 15.8 ಕಿ. ಮೀ ಉದ್ದದ ರಸ್ತೆ ನಿರ್ಮಾಣ ಮಾಡಲಾಗುತ್ತೆ. ಇನ್ನು ಕಲಬುರಗಿ ಜಿಲ್ಲೆಯಲ್ಲಿ 125.15 ಕೋಟಿ ರೂ.ಗಳ ವೆಚ್ಚದಲ್ಲಿ ರಸ್ತೆ ನಿರ್ಮಾಣ. ಈ ಎಲ್ಲ ಕಾಮಗಾರಿಗಳಿಗೆ ಇಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಿತಿನ್ ಗಡ್ಕರಿಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಸ್ಥಳೀಯ ‌ನಾಯಕರು‌‌ ಸಾಥ್‌ ನೀಡಲಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:56 am, Thu, 22 February 24