ಈ ಬಾರಿ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆಗೆ ಅವಕಾಶ ಇಲ್ಲ: ಡಿಸಿ ನಿತೇಶ್ ಪಾಟೀಲ್
ಅದ್ದೂರಿ ರಾಜ್ಯೋತ್ಸವ ಆಚರಣೆಗೆ ಬೆಳಗಾವಿ ಡಿಸಿ ನೇತೃತ್ವದಲ್ಲಿ ಇಂದು ನಗರದಲ್ಲಿ ಸಭೆ ಮಾಡಿದ್ದು, ಈ ಬಾರಿ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆಗೆ ಅವಕಾಶ ಇಲ್ಲ ಎಂದು ಹೇಳುವ ಮೂಲಕ ಎಂಇಎಸ್, ಮಹಾರಾಷ್ಟ್ರ ಸರ್ಕಾರಕ್ಕೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಶಾಕ್ ನೀಡಿದ್ದಾರೆ. ಡಿಸಿ ಆದೇಶವನ್ನು ಕನ್ನಡಪರ ಹೋರಾಟಗಾರರು ಸ್ವಾಗತಿಸಿದ್ದಾರೆ.
ಬೆಳಗಾವಿ, ಅಕ್ಟೋಬರ್ 12: ಈ ಬಾರಿ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆಗೆ ಅವಕಾಶ ಇಲ್ಲ ಎಂದು ಹೇಳುವ ಮೂಲಕ ಎಂಇಎಸ್, ಮಹಾರಾಷ್ಟ್ರ ಸರ್ಕಾರಕ್ಕೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಶಾಕ್ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕರಾಳ ದಿನಾಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. ಮಹಾರಾಷ್ಟ್ರ ಏಕೀಕರಣ ಸಮಿತಿ (MES) ಪ್ರತಿವರ್ಷ ರಾಜ್ಯೋತ್ಸವದಂದು ಕರಾಳ ದಿನಾಚರಣೆ ಆಚರಿಸುತ್ತ ಬರುತ್ತಿದೆ. ಆದರೆ ಈ ವರ್ಷ MES ಕರಾಳ ದಿನಾಚರಣೆಗೆ ಡಿಸಿ ಬ್ರೇಕ್ ಹಾಕಿದ್ದಾರೆ. ಡಿಸಿ ನಿತೇಶ್ ಪಾಟೀಲ್ ಆದೇಶವನ್ನು ಕನ್ನಡಪರ ಹೋರಾಟಗಾರರು ಸ್ವಾಗತಿಸಿದ್ದಾರೆ.
ಕರಾಳ ದಿನಾಚರಣೆಗೆ ಅವಕಾಶ ಕೊಡಬಾರದು: ರಾಜ್ಯ ಸಂಚಾಲಕ ಮಹಾದೇವ ತಳವಾರ
ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ರಾಜ್ಯ ಸಂಚಾಲಕ ಮಹಾದೇವ ತಳವಾರ ಮಾತನಾಡಿದ್ದು, ಗಡಿ ಭಾಗದಲ್ಲಿ ಮಹಾರಾಷ್ಟ್ರ ಸರ್ಕಾರ ಕಚೇರಿ ಆರಂಭ ಮಾಡುತ್ತಿದೆ. ಇದರಿಂದ ಗಡಿ ಭಾಗದ ಮರಾಠಿಗರನ್ನ ಪ್ರಚೋದಿಸುವ ಕೆಲಸ ಮಾಡುತ್ತಿದೆ. ಕೂಡಲೇ ಸರ್ಕಾರದ ಗಮನಕ್ಕೆ ತಂದು ಅದಕ್ಕೆ ತಡೆ ಹಾಕಬೇಕು. ಕರಾಳ ದಿನಾಚರಣೆಗೆ ಅವಕಾಶ ಕೊಡಬಾರದು. ಡಿಸಿ ಮೂಲಕ ಸರ್ಕಾರಕ್ಕೆ ಕರವೇ ಕಾರ್ಯಕರ್ತರು ಮನವಿ ಸಲ್ಲಿಸಿದ್ದಾರೆ.
ಇದನ್ನೂ ಓದಿ: ಮುಂಬೈನಲ್ಲಿ ಸಭೆ ನಡೆಸಿದ ಎಂಇಎಸ್ ಸದಸ್ಯರು, ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ತಗಾದೆ ತೆಗೆಯುವ ಹುನ್ನಾರವೇ?
ಸಭೆಯ ಆರಂಭದಲ್ಲೇ ನಿನ್ನೆ ಮುಂಬೈನಲ್ಲಿ ಎಂಇಎಸ್ ಜತೆಗೆ ಸಂಸದರ ನಡೆಸಿರುವ ಸಭೆಯ ವಿಷಯ ಪ್ರಸ್ತಾಪ ಮಾಡಲಾಗಿದೆ. ಮಹಾರಾಷ್ಟ್ರ ಗಡಿ ಉನ್ನತಮಟ್ಟದ ಸಮಿತಿ ಅಧ್ಯಕ್ಷ ಧೈರ್ಯಶೀಲ ಮಾನೆ ಎನ್ನುವ ವ್ಯಕ್ತಿ ಇತ್ತೀಚಿಗೆ ಮುಂಬೈನಲ್ಲಿ ಎಂಇಎಸ್ ಸದಸ್ಯರೊಂದಿಗೆ ಒಂದು ಸಭೆ ಮಾಡಿದ್ದಾರೆ. ಎಲ್ಲರೂ ಮರಾಠಿಯಲ್ಲಿ ಮಾತಾಡುತ್ತಿರುವುದರಿಂದ ಏನು ಮಾತುಕತೆ ನಡೆಯುತ್ತಿದೆ ಅಂತ ಗೊತ್ತಾಗಿಲ್ಲ. ಆದರೆ ಕರ್ನಾಟಕದ ಹೆಸರು ಪ್ರಸ್ತಾಪವಾಗುತ್ತಿರುವುದನ್ನು ಕೇಳಿಸಿಕೊಳ್ಳಬಹುದು. ಗಡಿಭಾಗದಲ್ಲಿರುವ ಮರಾಠಿ ಭಾಷಿಕನ್ನು ಒಗ್ಗೂಡಿಸುವ ಬಗ್ಗೆಯೂ ಅವರು ಮಾತಾಡುತ್ತಿರುವಂತಿದೆ. ತೀಟೆ ಮಾಡಿದರೆ ಎಂದಿನ ಹಾಗೆ ಕನ್ನಡಿಗರು ತಕ್ಕ ಜಬಾಬು ನೀಡೋದು ಮಾತ್ರ ನಿಶ್ಚಿತ.
ಇದನ್ನೂ ಓದಿ: ರಾಜ್ಯೋತ್ಸವ ಸಮೀಪಿಸುತ್ತಿದ್ದಂತೆ ಗಡಿ ಕ್ಯಾತೆ ತೆಗೆದ ಮಹಾರಾಷ್ಟ್ರ; ಭಾಷಾ ವೈಷಮ್ಯದ ಕಿಡಿ ಹೊತ್ತಿಸಲು ಕುತಂತ್ರ
ಅದ್ದೂರಿ ರಾಜ್ಯೋತ್ಸವ ಆಚರಣೆಗೆ ಡಿಸಿ ನೇತೃತ್ವದಲ್ಲಿ ಸಭೆಯಲ್ಲಿ ಜಿಲ್ಲೆಯ ಎಲ್ಲ ಕನ್ನಡಪರ ಸಂಘಟನೆ ಕಾರ್ಯಕರ್ತರು, ಡಿಸಿ ನಿತೇಶ್ ಪಾಟೀಲ್, ಜಿಲ್ಲಾ ಪಂಚಾಯತಿ ಸಿಇಒ ಹರ್ಷಲ್ ಬೋಯಲ್, ಡಿಸಿಪಿ ರೋಹಣ್ ಜಗದೀಶ್ ಸೇರಿದಂತೆ ಎಲ್ಲ ಅಧಿಕಾರಿಗಳು ಭಾಗಿ ಆಗಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.