AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದಿಂದ ಯಾವುದೇ ರೈತಪರ ಯೋಜನೆ ಇಲ್ಲ: ಸ್ವಪಕ್ಷದ ವಿರುದ್ಧವೇ ಶಾಸಕ ರಾಜು ಕಾಗೆ ವಾಗ್ದಾಳಿ!

ಇತ್ತೀಚೆಗೆಷ್ಟೇ ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಸಾವಿನ ಕುರಿತಾಗಿ ಮಾತನಾಡಿ ಕಾಂಗ್ರೆಸ್​ (Congress) ಶಾಸಕ ರಾಜು ಕಾಗೆ (Raju Kage) ವಿವಾದ ಹುಟ್ಟು ಹಾಕಿದ್ದರು. ಇದೀಗ ತಮ್ಮದೇ ಸ್ವಪಕ್ಷದ ಸರ್ಕಾರದ ವಿರುದ್ಧ ವಾಗ್ದಾಳಿ, ಅಸಹಾಯಕತೆ ಹೊರಹಾಕುವ ಮೂಲಕ ಸುದ್ದಿಯಾಗಿದ್ದಾರೆ.

ಸರ್ಕಾರದಿಂದ ಯಾವುದೇ ರೈತಪರ ಯೋಜನೆ ಇಲ್ಲ: ಸ್ವಪಕ್ಷದ ವಿರುದ್ಧವೇ ಶಾಸಕ ರಾಜು ಕಾಗೆ ವಾಗ್ದಾಳಿ!
ರಾಜು ಕಾಗೆ, ಸಿದ್ದರಾಮಯ್ಯ
ಸಹದೇವ್​ ಮಾನೆ
| Edited By: |

Updated on:Oct 11, 2024 | 4:36 PM

Share

ಬೆಳಗಾವಿ, (ಅಕ್ಟೋಬರ್ 11): ಕಾಂಗ್ರೆಸ್​ನ ಹಿರಿಯ ಮುಖಂಡ, ಕಾಗವಾಡ ವಿಧಾನಸಭಾ ಕ್ಷೇತ್ರದ ಶಾಸಕ ರಾಜು ಕಾಗೆ ಮತ್ತೆ ಸುದ್ದಿಯಲ್ಲಿದ್ದಾರೆ. ಕಳೆದ ಬಾರಿ ಮೋದಿ ಬಗ್ಗೆ ಮತನಾಡಿ ಸುದ್ದಿಯಾಗಿದ್ದರು. ಈಗ ಸ್ವಪಕ್ಷದ ಸರ್ಕಾರದ ವಿರುದ್ಧವೇ ಬೇಸರ ಹೊರಹಾಕಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ತಾವಂಶಿ ಗ್ರಾಮದಲ್ಲಿ ಮಾತನಾಡಿರುವ ಕಾಗೆ, ರೈತರ ಪರ ಯಾವುದೇ ಯೋಜನೆಗಳು ಬರ್ತಿಲ್ಲ. ರೈತರು ಬದುಕು ನಡೆಸುವುದು ದುಸ್ತರವಾಗಿದೆ. ತಮ್ಮದೇ ಸರ್ಕಾರದ ವಿರುದ್ಧ ಹರಿಹಾಯ್ದರು. ಅಲ್ಲದೇ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ರೈತರು ಒಂದು ವರ್ಷ ಬೆಳೆಗಳನ್ನ ಬೆಳೆಯುವುದನ್ನು ಬಿಟ್ರೇ ನೀವೇನು ತಿಂತಿರೀ? ನಿಮ್ಮ ಬಳಿ ರೊಕ್ಕ, ಬಂಗಾರ ಬೆಳ್ಳಿ ಸಾಕಷ್ಟು ಇರಬಹುದು. ಆದ್ರೆ ಅದನ್ನ ತಿನ್ನೋಕಾಗುತ್ತಾ? ಮೊದಲು ರೈತರನ್ನು ಬದುಕಿಸುವ ಕೆಲಸ ಮಾಡಿ . ರೈತರು ಬದುಕಿದ್ರೆ ಮಾತ್ರ ಈ ದೇಶ ಪ್ರಗತಿ ಹೊಂದಲು ಸಾಧ್ಯವಿದೆ. ಕಳೆದ ಒಂದು ವರ್ಷದಿಂದ ನನ್ನ ಗೋಳನ್ನು ಸರ್ಕಾರ ಆಲಿಸುತ್ತಿಲ್ಲ. ಹೀಗೆ ಪರಿಸ್ಥಿತಿ ಮುಂದುವರೆದ್ರೆ ವಿಧಾನಸೌಧದಲ್ಲಿಯೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಓರ್ವ ಮಂತ್ರಿಗೆ ಹೇಳಿದ್ದೆ. ನೀನ್ಯಾಕೆ ಆತ್ಮಹತ್ಯೆ ಮಾಡಿಕೊಳ್ತಿಯಾ, ನಿನ್ನ ಕೆಲಸ ಮಾಡ್ತೇವಿ ಅಂತ ಹೇಳಿದ ಮಂತ್ರಿಗಳಿದ್ದಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ: ಮೋದಿ ಸತ್ತರೆ ಮುಂದೆ ಯಾರೂ ಪ್ರಧಾನಿ ಆಗುವುದಿಲ್ಲವೇ: ಕಾಂಗ್ರೆಸ್​ ಶಾಸಕ ರಾಜು ಕಾಗೆ

ನಾವೇನು ವಿಧಾನಸೌಧಕ್ಕೆ ಹೋಗಿ ಖಾಲಿ ಕುಂತಿಲ್ಲ, ಚೈನಿ(ಮೋಜು, ಮಸ್ತಿ) ಮಾಡುತ್ತಿಲ್ಲ. ರೈತರ ಕಷ್ಟ ಸುಖಗಳನ್ನು ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡುತ್ತಿದ್ದೇನೆ. ಆದ್ರೆ ಸರ್ಕಾರದವರು ನಮಗೆ ಸ್ಪಂದನೆ ಮಾಡುತ್ತಿಲ್ಲ. ಅದ್ದರಿಂದ ಏನು ಆಗೋದಿದೆ. ಬೇಕಾದ್ರೆ ನಾನು ನಾಳೆ ಹೋಗಿ ರಾಜೀನಾಮೆ ಕೊಡುತ್ತೇನೆ ಎಂದು ಎಚ್ಚರಿಕೆ ನೀಡಿದರು.

ಏತಕ್ಕಾಗಿ ನಾವು ಎಂಎಲ್‌ಎ ಗಳಾಗಿರಬೇಕು, ಏತಕ್ಕಾಗಿ ನಾವು ಅಧಿಕಾರದಲ್ಲಿಬೇಕು. ಆಡಳಿತ ಪಕ್ಷದ ಒಬ್ಬ ಶಾಸಕನಾಗಿ ಅಸಹಾಯಕತೆ ಬಗ್ಗೆ ಹೇಳುತ್ತಿದ್ದೇನೆ ಅಂದ್ರೆ ಎಷ್ಟರಮಟ್ಟಿಗೆ ಈ ವ್ಯವಸ್ಥೆಯಲ್ಲಿ ಬದುಕಿದ್ದೇವೆ ಎಂದು ಅರ್ಥ ಮಾಡಿಕೊಳ್ಳಿ. ಕಾಂಗ್ರೆಸ್ ಸರ್ಕಾರದ ನಡೆಯಿಂದಾಗಿ ನನ್ನ ಮನಸ್ಸಿಗೆ ಬಹಳ ನೋವಾಗಿದೆ. ಹೀಗಾಗಿ ಮುಂದಿನ ಸಲ ನನಗೆ ಎಂಎಲ್ಎ ಆಗುವುದು ಬೇಕಾಗಿಲ್ಲ ಎಂದು ಜನತೆ ಮುಂದೆ ತಮ್ಮ ಅಸಹಾಯಕತೆ ತೊಡಿಕೊಂಡರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:35 pm, Fri, 11 October 24

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್
ಕರ್ನಾಟಕದ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ ಕೇಂದ್ರ ತಂಡ
ಕರ್ನಾಟಕದ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ ಕೇಂದ್ರ ತಂಡ
ಚಾಮರಾಜನಗರ ಆದಿವಾಸಿಗಳಿಗೆ ಆಹಾರ ಕಿಟ್ ಸ್ಥಗಿತ
ಚಾಮರಾಜನಗರ ಆದಿವಾಸಿಗಳಿಗೆ ಆಹಾರ ಕಿಟ್ ಸ್ಥಗಿತ
ಗದಗದ ಕೆಆರ್​ಡಿಎಲ್​ ಎಇಇ ಪತ್ರ ಬರೆದು ನಾಪತ್ತೆ ವಿಚಾರಕ್ಕೆ ಸಿಎಂ ಹೀಗಂದ್ರು
ಗದಗದ ಕೆಆರ್​ಡಿಎಲ್​ ಎಇಇ ಪತ್ರ ಬರೆದು ನಾಪತ್ತೆ ವಿಚಾರಕ್ಕೆ ಸಿಎಂ ಹೀಗಂದ್ರು
ಬಿಗ್ ಬಾಸ್ ಕನ್ನಡ: ಮೂವರು ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ಸುದೀಪ್ ಸ್ವಾಗತ
ಬಿಗ್ ಬಾಸ್ ಕನ್ನಡ: ಮೂವರು ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ಸುದೀಪ್ ಸ್ವಾಗತ
ಖರ್ಗೆ ಜತೆ ಏನೇನು ಮಾತುಕತೆಯಾಯ್ತು? ಸಿಎಂ ಡಿಕೆ ಶಿವಕುಮಾರ್ ಮಾಹಿತಿ
ಖರ್ಗೆ ಜತೆ ಏನೇನು ಮಾತುಕತೆಯಾಯ್ತು? ಸಿಎಂ ಡಿಕೆ ಶಿವಕುಮಾರ್ ಮಾಹಿತಿ