ವಾಯವ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿಗೆ ಜಯ; ಬಿಜೆಪಿ ಅಭ್ಯರ್ಥಿ ಅರುಣ್ ಶಹಾಪುರಗೆ ಸೋಲು
ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ನ ಪ್ರಕಾಶ್ ಹುಕ್ಕೇರಿಗೆ ಜಯವಾಗಿದೆ. ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಬಿಜೆಪಿ ಅಭ್ಯರ್ಥಿ ಅರುಣ್ ಶಹಾಪುರಗೆ ಸೋಲಾಗಿದೆ
ಬೆಳಗಾವಿ: ವಾಯವ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ (Congress) ಅಭ್ಯರ್ಥಿ ಪ್ರಕಾಶ್ ಹುಕ್ಕೇರಿಗೆ (Prakash Hukkeri) ಜಯವಾಗಿದೆ. ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಬಿಜೆಪಿ ಅಭ್ಯರ್ಥಿ ಅರುಣ್ ಶಹಾಪುರಗೆ (Arun Shapur) ಸೋಲಾಗಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿಗೆ (Basavaraj Horatti) ಜಯವಾಗಿದೆ. ಬಸವರಾಜ ಹೊರಟ್ಟಿಗೆ ಪ್ರಾದೇಶಿಕ ಆಯುಕ್ತ ಆದಿತ್ಯ ಆಮ್ಲಾನ್ ಬಿಸ್ವಾಸ್ ಗೆಲುವಿನ ಪ್ರಮಾಣಪತ್ರ ವಿತರಣೆ ಮಾಡಿದ್ದಾರೆ. 8 ಬಾರಿ ಗೆದ್ದು ದಾಖಲೆ ಬಸವರಾಜ ಹೊರಟ್ಟಿ ದಾಖಲೆ ನಿರ್ಮಿಸಿದ್ದಾರೆ
ಇದನ್ನು ಓದಿ: ಬಿಬಿಎಂಪಿ ವ್ಯಾಪ್ತಿಯ ಶಾಲೆಗಳಿಗೆ ಹೊಸ ಕೊರೊನಾ ಮಾರ್ಗಸೂಚಿ ಪ್ರಕಟ
ವಿಧಾನ ಪರಿಷತ್ನ ನಾಲ್ಕು ಸ್ಥಾನಗಳಿಗೆ ಜೂನ್ 13ರಂದು ನಡೆದಿದ್ದ ಚುನಾವಣಾ ಫಲಿತಾಂಶ ಇಂದು ಜೂನ್ 15ರಂದು ಪ್ರಕಟವಾಗುತ್ತಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ 49 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ವಾಯುವ್ಯ ಪದವೀಧರ ಕ್ಷೇತ್ರದಲ್ಲಿ ಶೇ 59, ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಶೇ 70, ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಶೇ 80, ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶೇ 84ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿ ಒಟ್ಟು 49 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ನಾಲ್ಕು ಕ್ಷೇತ್ರಗಳಲ್ಲಿ ಒಟ್ಟು 2,84,992 ಮತದಾರರು ಇದ್ದಾರೆ.
ಪರಿಷತ್ನ ವಾಯವ್ಯ ಪದವೀಧರ ಕ್ಷೇತ್ರದ ಎರಡನೇ ಸುತ್ತಿನ ಮತ ಎಣಿಕೆ ಬಿಜೆಪಿ ಅಭ್ಯರ್ಥಿ ಹಣಮಂತ ನಿರಾಣಿಗೆ 10,398 ಮತಗಳ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಹಣಮಂತ ನಿರಾಣಿ ಒಟ್ಟು 13,559 ಮತಗಳು ಬಿದ್ದರೇ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಸಂಕಗೆ ಒಟ್ಟು 3,159 ಮತಗಳು ಬಿದ್ದಿವೆ.
ಪರಿಷತ್ ಚುನಾವಣೆ ದಕ್ಷಿಣ ಪದವೀಧರ ಕ್ಷೇತ್ರದ ಮತ ಎಣಿಕೆ ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಧು ಜಿ.ಮಾದೇಗೌಡಗೆ ಭಾರಿ ಮುನ್ನಡೆಯಲ್ಲಿದ್ದಾರೆ. ‘ಕೈ’ ಅಭ್ಯರ್ಥಿ ಮಧು ಮಾದೇಗೌಡಗೆ 3,278 ಮತಗಳ ಮುನ್ನಡೆ ಸಾಧಿಸಿದ್ದಾರೆ. ದ್ವಿತೀಯ ಸ್ಥಾನದಲ್ಲಿರುವ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:05 pm, Wed, 15 June 22