ಬೆಂಗಳೂರಿನಲ್ಲಿ 146 ಒಮಿಕ್ರಾನ್ ಪ್ರಕರಣ ದೃಢ; ಬೆಳಗಾವಿ ಜಿಲ್ಲೆಯಲ್ಲಿ ಜ.18ರ ವರೆಗೆ ಶಾಲೆಗಳಿಗೆ ರಜೆ ಘೋಷಣೆ

ಸೋಂಕು ತಡೆಗಟ್ಟಲು ರಜೆ ನೀಡಿ ಅಂತಾ ಸಲಹೆ ಹಿನ್ನೆಲೆ ಜಿಲ್ಲಾಧಿಕಾರಿ ಸರ್ಕಾರದ ಗಮನಕ್ಕೆ ತಂದು ಬೆಳಗಾವಿಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಬೆಂಗಳೂರು ಹೊರತುಪಡಿಸಿ ಶಾಲೆಗಳು ಬಂದ್ ಆದ ಮೊದಲ ಜಿಲ್ಲೆ ಇದಾಗಿದೆ.

ಬೆಂಗಳೂರಿನಲ್ಲಿ 146 ಒಮಿಕ್ರಾನ್ ಪ್ರಕರಣ ದೃಢ; ಬೆಳಗಾವಿ ಜಿಲ್ಲೆಯಲ್ಲಿ ಜ.18ರ ವರೆಗೆ ಶಾಲೆಗಳಿಗೆ ರಜೆ ಘೋಷಣೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Jan 10, 2022 | 6:42 PM

ಬೆಂಗಳೂರು: ಬೆಂಗಳೂರು ನಗರದಲ್ಲಿ ಇಂದು 146 ಜನರಿಗೆ ಒಮಿಕ್ರಾನ್‌ ದೃಢವಾಗಿದೆ. ಅದರಂತೆ ಕರ್ನಾಟಕ ರಾಜ್ಯದಲ್ಲಿ ಈವರೆಗೆ 479 ಜನರಿಗೆ ಒಮಿಕ್ರಾನ್‌ ಸೋಂಕು ಕಂಡುಬಂದಿದೆ. ಈ ಬಗ್ಗೆ ಆರೋಗ್ಯ ಇಲಾಖೆಯ ಸಚಿವ ಡಾ.ಕೆ. ಸುಧಾಕರ್ ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಇಂದು 11,698 ಜನರಿಗೆ ಕೊರೊನಾ ಸೋಂಕು ಕಂಡುಬಂದಿದೆ. ಬೆಂಗಳೂರಿನಲ್ಲಿ 9,221 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿಗೆ ನಾಲ್ವರು ಬಲಿ ಆಗಿದ್ದು, ಬೆಂಗಳೂರಿನಲ್ಲಿಂದು ಕೊರೊನಾ ಸೋಂಕಿಗೆ ಇಬ್ಬರು ಬಲಿ ಆಗಿದ್ದಾರೆ. ರಾಜ್ಯದಲ್ಲಿ ಕೊವಿಡ್‌ ಸಕ್ರಿಯ ಕೇಸ್‌ಗಳ ಸಂಖ್ಯೆ 60,148 ಆಗಿದೆ. ಕರ್ನಾಟಕದಲ್ಲಿ ಕೊವಿಡ್‌ ಪಾಸಿಟಿವಿಟಿ ದರ ಶೇಕಡಾ 7.77 ಆಗಿದೆ. ಈ ಬಗ್ಗೆ ಸಚಿವ ಡಾ.ಕೆ. ಸುಧಾಕರ್‌ ಟ್ವೀಟ್‌ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಜ.18ರವರೆಗೆ ಶಾಲೆಗಳಿಗೆ ರಜೆ

ಬೆಳಗಾವಿ ಜಿಲ್ಲೆಯಲ್ಲಿ ಜನವರಿ 18ರ ವರೆಗೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ 1-9ನೇ ತರಗತಿ ಶಾಲೆಗಳಿಗೆ ರಜೆ ಘೋಷಿಸಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ. 10ನೇ ತರಗತಿ ಮೇಲ್ಪಟ್ಟವರಿಗೆ ಎಂದಿನಂತೆ ತರಗತಿ ನಡೆಯಲಿವೆ ಎಂದು ಸೂಚನೆ ನೀಡಲಾಗಿದೆ.

ಆರೋಗ್ಯ ಇಲಾಖೆ ಅಧಿಕಾರಿಗಳು, ಚಿಕ್ಕೋಡಿ, ಬೆಳಗಾವಿ ಬಿಇಒಗಳ ಜತೆಗೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಕುರಿತು ತೀರ್ಮಾನ ಮಾಡಲಾಗಿದೆ. ಕನಿಷ್ಠ ಏಳು ದಿನಗಳ ಕಾಲ ರಜೆ ನೀಡಿ ಅಂತಾ ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ಸಲಹೆ ಬಂದಿದೆ. ಕಳೆದ ಹತ್ತು ದಿನಗಳಲ್ಲಿ 142 ಮಕ್ಕಳಿಗೆ ಸೋಂಕು ಧೃಡಪಟ್ಟಿದೆ. ಸೋಂಕು ತಡೆಗಟ್ಟಲು ರಜೆ ನೀಡಿ ಅಂತಾ ಸಲಹೆ ಹಿನ್ನೆಲೆ ಜಿಲ್ಲಾಧಿಕಾರಿ ಸರ್ಕಾರದ ಗಮನಕ್ಕೆ ತಂದು ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಬೆಂಗಳೂರು ಹೊರತುಪಡಿಸಿ ಶಾಲೆಗಳು ಬಂದ್ ಆದ ಮೊದಲ ಜಿಲ್ಲೆ ಇದಾಗಿದೆ.

ಕೇರಳದಲ್ಲಿ ಇಂದು 5,797 ಜನರಿಗೆ ಕೊರೊನಾ ಸೋಂಕು

ಕರ್ನಾಟಕದ ನೆರೆಯ ಕೇರಳದಲ್ಲಿ ಇಂದು 5,797 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಕೇರಳ ರಾಜ್ಯದಲ್ಲಿ ಇಂದು 2,796 ಸೋಂಕಿತರು ಗುಣಮುಖ ಆಗಿದ್ದಾರೆ. ಕೇರಳದಲ್ಲಿ ಇಂದು ಕೊರೊನಾ ಸೋಂಕಿಗೆ 19 ಜನರ ಬಲಿ ಆಗಿದ್ದು ಈವರೆಗೆ ಕೊರೊನಾಗೆ 49,757 ಜನರು ಸಾವನ್ನಪ್ಪಿದ್ದಾರೆ. ಅಲ್ಲಿ ಕೊವಿಡ್ ಸಕ್ರಿಯ ಕೇಸ್‌ಗಳ ಸಂಖ್ಯೆ 37,736 ಇದೆ.

ಇದನ್ನೂ ಓದಿ: Coronavirs 3rd Wave: ಕೊರೊನಾ 3ನೇ ಅಲೆಯ ಏರಿಳಿತದ ಬಗ್ಗೆ ಮಣೀಂದ್ರ ಅಗರ್​ವಾಲ್ ಲೆಕ್ಕಾಚಾರ

ಇದನ್ನೂ ಓದಿ: ಆರೋಗ್ಯ ಸಚಿವರ ಬಾಮೈದನಿಂದಲೇ ಕೊರೊನಾ ನಿಯಮ ಉಲ್ಲಂಘನೆ; 500 ಮಹಿಳೆಯರನ್ನು ಸೇರಿಸಿ ಓಂಶಕ್ತಿ ಯಾತ್ರೆ ಆಯೋಜನೆ

Published On - 6:41 pm, Mon, 10 January 22

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ