ಬೆಳಗಾವಿಯಲ್ಲಿ ಮಲತಾಯಿ ಧೋರಣೆ: ಕನ್ನಡ ಮಾಧ್ಯಮವರಿಗೆ ಶಾಲಾ ಆವರಣದಲ್ಲಿ ಪಾಠ, ಮರಾಠಿ ಮಕ್ಕಳಿಗೆ ಕೊಠಡಿಯೊಳಗೆ ವಿದ್ಯಾಭ್ಯಾಸ

ಬೆಳಗಾವಿ ತಾಲೂಕಿನ ನಂದಿಹಳ್ಳಿಯ ಗ್ರಾಮದ ಒಂದೇ ಆವರಣದಲ್ಲಿ ಕನ್ನಡ ಮತ್ತು ಮರಾಠಿ ಮಾಧ್ಯಮ ಶಾಲೆಗಳಿವೆ. ಈ ಎರಡು ಶಾಲೆಗಳು ಸರ್ಕಾರಿ ಶಾಲೆಯಾಗಿವೆ. ಇಲ್ಲಿ ಕನ್ನಡ ಮಾಧ್ಯಮದ ಮಕ್ಕಳಿಗೆ ಮೂಲಭೂತ ಸೌಕರ್ಯ ನೀಡುತ್ತಿಲ್ಲ. ಅಲ್ಲದೇ ಮಕ್ಕಳಿಗೆ ಶಾಲಾ ಆವರಣದಲ್ಲೇ ಕೂರಿಸಿ ಪಾಠ ಮಾಡಲಾಗುತ್ತಿದೆ.

ಬೆಳಗಾವಿಯಲ್ಲಿ ಮಲತಾಯಿ ಧೋರಣೆ: ಕನ್ನಡ ಮಾಧ್ಯಮವರಿಗೆ ಶಾಲಾ ಆವರಣದಲ್ಲಿ ಪಾಠ, ಮರಾಠಿ ಮಕ್ಕಳಿಗೆ ಕೊಠಡಿಯೊಳಗೆ ವಿದ್ಯಾಭ್ಯಾಸ
ಶಾಲಾ ಆವರಣದಲ್ಲಿ ಪಾಠ, ಮುಖ್ಯ ಶಿಕ್ಷಕಿಯನ್ನ ತರಾಟೆಗೆ ತೆಗೆದುಕೊಂಡ ಕರವೇ
Follow us
Sahadev Mane
| Updated By: Rakesh Nayak Manchi

Updated on:Jan 01, 2024 | 5:46 PM

ಬೆಳಗಾವಿ, ಜನವರಿ 01: ಗಡಿನಾಡು ಬೆಳಗಾವಿಯಲ್ಲಿ (Belagavi) ಕನ್ನಡ (Kannada) ಭಾಷೆ ಉಳಿವಿಗಾಗಿ ಅನೇಕ ಹೋರಾಟಗಳು ನಡೆದಿವೆ. ಹೋರಾಟಗಳು ನಡೆದ ಮೇಲೂ ಕೂಡ ಜಿಲ್ಲೆಯ ಕನ್ನಡ ಶಾಲೆಯ ಮಕ್ಕಳಿಗೆ ಮಲತಾಯಿ ಧೋರಣೆ ಮಾತ್ರ ನಿಂತಿಲ್ಲ. ಹೌದು ಬೆಳಗಾವಿ ತಾಲೂಕಿನ ನಂದಿಹಳ್ಳಿಯ ಗ್ರಾಮದ ಒಂದೇ ಆವರಣದಲ್ಲಿ ಕನ್ನಡ ಮತ್ತು ಮರಾಠಿ (Marathi) ಮಾಧ್ಯಮ ಶಾಲೆಗಳಿವೆ. ಈ ಎರಡು ಶಾಲೆಗಳು ಸರ್ಕಾರಿ ಶಾಲೆಯಾಗಿವೆ. ಇಲ್ಲಿ ಕನ್ನಡ ಮಾಧ್ಯಮದ ಮಕ್ಕಳಿಗೆ ಮೂಲಭೂತ ಸೌಕರ್ಯ ನೀಡುತ್ತಿಲ್ಲ. ಅಲ್ಲದೇ ಮಕ್ಕಳಿಗೆ ಶಾಲಾ ಆವರಣದಲ್ಲೇ ಕೂರಿಸಿ ಪಾಠ ಮಾಡಲಾಗುತ್ತಿದೆ.

ಅಲ್ಲದೇ ಕನ್ನಡ ಶಾಲೆಯಲ್ಲಿ, ಮರಾಠಿ ಭಾಷೆಯಲ್ಲಿ ಮ್ಯಾಪ್​ಗಳನ್ನು ಬಿಡಿಸಲಾಗಿದೆ. ನಾಮಫಲಕಗಳನ್ನೂ ಕೂಡ ಮರಾಠಿ ಭಾಷೆಯಲ್ಲಿ ಹಾಕಲಾಗಿದೆ. ಕನ್ನಡ ಮಾಧ್ಯಮ ಮಕ್ಕಳಿಗೆ ಕುಡಿಯಲು ನೀರಿಲ್ಲ, ಸೂಕ್ತ ಮೈದಾನವಿಲ್ಲ. ಒಂದೇ ಕೊಠಡಿಯಲ್ಲಿ ಐದು ತರಗತಿಯನ್ನು ನಡೆಸಲಾಗುತ್ತಿದೆ. ಮತ್ತೊಂದು ವರ್ಗದ ಮಕ್ಕಳಿಗೆ ಕಟ್ಟೆ ಮೇಲೆ ಕೂರಿಸಿ ಶಿಕ್ಷಕರು ಪಾಠ ಮಾಡುತ್ತಿದ್ದಾರೆ. ಆದರೆ ಮರಾಠಿ ಮಾಧ್ಯಮದ ಮಕ್ಕಳಿಗೆ ಎಲ್ಲ ಸೌಲಭ್ಯಗಳನ್ನು ನೀಡಿ, ಕೊಠಡಿಯೊಳಗೆ ಕೂರಿಸಿ ಪಾಠ ಮಾಡಲಾಗುತ್ತಿದೆ. ಈ ಮೂಲಕ ಶಾಲೆಯ ಆಡಳಿತ ಮಂಡಳಿ ಕನ್ನಡ, ಮರಾಠಿ ಭಾಷೆ ವಿಚಾರದಲ್ಲಿ ಮಕ್ಕಳ ನಡುವೆ ತಾರತಮ್ಯ ಉಂಟುಮಾಡುತ್ತಿದೆ.

ಇದನ್ನೂ ಓದಿ: ಹೊಸ ವರ್ಷದ​ ಸೆಲೆಬ್ರೇಷನ್​ ವೇಳೆ ಗಡಿಜಿಲ್ಲೆ ಬೆಳಗಾವಿಯಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ ಪುಂಡರು

ಇದನ್ನು ತಿಳಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶಾಲೆಗೆ ದೌಡಾಯಿಸಿ ಮುಖ್ಯ ಶಿಕ್ಷಕಿಯನ್ನು ತರಾಟೆಗೆ ತೆಗೆದುಕೊಂಡರು. ಕನ್ನಡ ಶಾಲಾ ಮಕ್ಕಳಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಕರವೇ ಕಾರ್ಯಕರ್ತರು ಖಂಡನೆ ವ್ಯಕ್ತಪಡಿಸಿದರು. ಇನ್ನು ಕರವೇ ಕಾರ್ಯಕರ್ತರು ಆಗಮಿಸುವ ವಿಚಾರ ತಿಳಿದು ಶಿಕ್ಷಕರು ಕನ್ನಡ ಮಾಧ್ಯಮ ಮಕ್ಕಳನ್ನು ಕೊಠಿಯೊಳಗೆ ಕೂರಿಸಿದರು. ವಿಷಯ ತಿಳಿದು ಬೆಳಗಾವಿ ಗ್ರಾಮೀಣ ಪೊಲೀಸರು ಶಾಲೆಗೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಮಾತನಾಡಿ, ನನ್ನ ಕ್ಷೇತ್ರದಲ್ಲಿನ ವಿಚಾರ ನನಗೆ ಗೊತ್ತಾಗದೆ, ನಿಮಗೆ ಹೇಗೆ ಗೊತ್ತಾಗಿದೆ. ನಂದಿಹಳ್ಳಿಯಲ್ಲಿನ ಶೇ 90ರಷ್ಟು ಜನ ನನಗೆ ಗೊತ್ತಿದ್ದಾರೆ. ಅವರ ಹೆಸರು ಹಿಡಿದು ನಾನು ಕರೆಯುತ್ತೇನೆ. ಒಮ್ಮೆಯೂ ಜನ ಈ ಬಗ್ಗೆ ನನಗೆ ಹೇಳಿಲ್ಲ. ನೀವು ಹೊಸ ಸುದ್ದಿ ಹೇಳುತ್ತಿದ್ದೀರಿ.. ಆ ರೀತಿ ತಾರತಮ್ಯ ಎಲ್ಲಿಯೂ ಆಗುತ್ತಿಲ್ಲ. ನನ್ನ ಕ್ಷೇತ್ರದಲ್ಲಿ ಮರಾಠಿ ಶಾಲೆಗಳಲ್ಲಿ ಮರಾಠಿ ಕಲೆಯುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ. ಪಾಲಕರು ಕನ್ನಡ ಮಾಧ್ಯಮಗಳಿಗೆ ಮಕ್ಕಳನ್ನು ಕಳುಹಿಸುತ್ತಿದ್ದಾರೆ ಎಂದು ಮಾಧ್ಯಮದವರ ಮೇಲೆ ಗರಂ ಆದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:41 pm, Mon, 1 January 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ