AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಬ್ಲ್ಯಾಕ್ ಫಂಗಸ್​ಗೆ ಮಾತ್ರೆ ಸಿಗದೆ ರೋಗಿಗಳ ಪರದಾಟ; ಕಣ್ಣೀರು ಹಾಕುತ್ತಿರುವ ಸಂಬಂಧಿಕರು

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿಗೆ ಭೇಟಿ ನೀಡಿದ್ರು. ಸಿಎಂ ಭೇಟಿ ವೇಳೆ ಆಸ್ಪತ್ರೆ ಶುಚಿತ್ವ ಕಾರ್ಯ ಮಾಡಿ ಔಷಧಿ ಕೊಡುತ್ತೀವಿ ಅಂದಿದ್ದರು.

ಬೆಳಗಾವಿಯಲ್ಲಿ ಬ್ಲ್ಯಾಕ್ ಫಂಗಸ್​ಗೆ ಮಾತ್ರೆ ಸಿಗದೆ ರೋಗಿಗಳ ಪರದಾಟ; ಕಣ್ಣೀರು ಹಾಕುತ್ತಿರುವ ಸಂಬಂಧಿಕರು
ಕಣ್ಣೀರು ಹಾಕುತ್ತಿರುವ ಸಂಬಂಧಿಕರು
TV9 Web
| Edited By: |

Updated on: Aug 24, 2021 | 9:09 AM

Share

ಬೆಳಗಾವಿ: ಜಿಲ್ಲೆಯಲ್ಲಿ ಬ್ಲ್ಯಾಕ್ (Black Fungus) ಫಂಗಸ್​ಗೆ ಔಷಧಿ ಸಿಗದೇ ರೋಗಿಗಳು ಪರದಾಟ ಪಡುತ್ತಿದ್ದಾರೆ. ಪೊಸಕೊನಜೋಲ್ (Posaconazole) ಮಾತ್ರೆ ಸಿಗದೆ ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳು ಪರದಾಡುತ್ತಿದ್ದು, ಸಂಬಂಧಿಕರು ಕಣ್ಣೀರು ಹಾಕುತ್ತಿದ್ದಾರೆ. ಬ್ಲ್ಯಾಕ್ ಫಂಗಸ್ ಔಷಧಿ ನೀಡುವಂತೆ ರೋಗಿಗಳು, ಸಂಬಂಧಿಕರು ಒತ್ತಾಯಿಸುತ್ತಿದ್ದಾರೆ. ಆದರೆ ಮಾತ್ರೆ ಇಲ್ಲದೆ ವೈದ್ಯರು ಇಂಜೆಕ್ಷನ್ ಮಾತ್ರ ನೀಡುತ್ತಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ 90 ದಿನಗಳ ಕಾಲ ಮಾತ್ರೆ ಸೇವಿಸಬೇಕು ಅಂತ ಹೇಳುತ್ತಾರೆ. 10 ಪೊಲಸಕೊನಜೋಲ್ ಮಾತ್ರೆಗಳಿಗೆ 5,500 ರೂಪಾಯಿ ಇದೆ. ಮಾತ್ರೆಗಳನ್ನು ಖರೀದಿಸಲು ನಮ್ಮ ಬಳಿ ದುಡ್ಡಿಲ್ಲ ಅಂತ ರೋಗಿಗಳ ಸಂಬಂಧಿಕರು ಕಣ್ಣೀರು ಹಾಕಿದ್ದಾರೆ.

ಮೊನ್ನೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿಗೆ ಭೇಟಿ ನೀಡಿದ್ರು. ಸಿಎಂ ಭೇಟಿ ವೇಳೆ ಆಸ್ಪತ್ರೆ ಶುಚಿತ್ವ ಕಾರ್ಯ ಮಾಡಿ ಔಷಧಿ ಕೊಡುತ್ತೀವಿ ಅಂದಿದ್ದರು. ಬಿಮ್ಸ್ ನಿರ್ದೇಶಕ, ಹೆಚ್ಒಡಿ, ವೈದ್ಯರನ್ನು ಕೇಳಿದರೆ ಯಾರೊಬ್ಬರೂ ಸ್ಪಂದಿಸುತ್ತಿಲ್ಲ ಅಂತ ರಾಜ್ಯ ಸರ್ಕಾರ, ಬೆಳಗಾವಿ ಜಿಲ್ಲಾಡಳಿತ ವಿರುದ್ಧ ಬ್ಲ್ಯಾಕ್ ಫಂಗಸ್ ಸೋಂಕಿತರು, ಸಂಬಂಧಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಸದ್ಯ 180ಕ್ಕೂ ಹೆಚ್ಚು ಬ್ಲ್ಯಾಕ್ ಫಂಗಸ್ ಪಾಸಿಟಿವ್ ಸಕ್ರಿಯ ಕೇಸ್ ಇವೆ. ಈಗಾಗಲೇ ಶಸ್ತ್ರಚಿಕಿತ್ಸೆಗೊಳಗಾಗಿ 190 ಬ್ಲ್ಯಾಕ್ ಫಂಗಸ್ ಸೋಂಕಿತರು ಬಿಡುಗಡೆಯಾಗಿದ್ದಾರೆ. ಗುಣಮುಖರಾಗಿ ಡಿಸ್ಚಾರ್ಜ್ ಆದವರಿಗೂ ಮಾತ್ರೆ ಮತ್ತೆ ಕಾಯಿಲೆಗೆ ತುತ್ತಾಗಿ ಮನೆಯಿಂದ ವಾಪಸ್ ಆಗುತ್ತಿದ್ದಾರೆ. ಆಸ್ಪತ್ರೆಗೆ ಬಂದು ದಾಖಲಾದರೂ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ. ಮಾತ್ರೆಗಳನ್ನ ಕೊಡಿಸಿ ಜೀವ ಉಳಿಸಿ ಅಂತಾ ರೋಗಿ ಸಂಬಂಧಿಕರು ಆಗ್ರಹಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಈವರೆಗೂ 482 ಜನರಿಗೆ ಬ್ಲ್ಯಾಕ್ ಫಂಗಸ್ ತಗುಲಿದೆ. ಬ್ಲ್ಯಾಕ್ ಫಂಗಸ್ ಪತ್ತೆಯಾದ ದಿನದಿಂದ ಇಲ್ಲಿವರೆಗೆ 50 ಜನ ಬಲಿಯಾಗಿದ್ದಾರೆ.

ಇದನ್ನೂ ಓದಿ

ಹೆದ್ದಾರಿಯ ಮೇಲೆ ಮಹಿಂದ್ರ ಅವರ XUV500 ಮಾತ್ರ ಹುಲಿಯಲ್ಲ, ಎರಡೆರಡು ನೈಜ ಹುಲಿಗಳೂ ಅಲ್ಲಿವೆ! ವಿಡಿಯೋ ನೋಡಿ

ದೇಹ ಇಲ್ಲೇ ಮಣ್ಣಾದರೂ ಸೈ, ಅಫ್ಘಾನಿಸ್ತಾನವನ್ನು ಬಿಟ್ಟು ಹೋಗುವುದಿಲ್ಲ: ಹಂಗಾಮಿ ಅಧ್ಯಕ್ಷ ಅಮರುಲ್ಲಾ ಸಲೇಹ್

(Patients are struggling to get Posaconazole tablet to Black Fungus at Belagavi)

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು