ರೈತರು, ಮಹಿಳೆಯರ ಮೇಲೆ ಪೊಲೀಸರ ದಬ್ಬಾಳಿಕೆ; ಧರಣಿ ವೇಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಜಮೀನು ಮಾಲೀಕ

ಮಚ್ಚೆ-ಹಲಗಾ ಬೈಪಾಸ್ ರಸ್ತೆ ಕಾಮಗಾರಿಕೆಗೆ ರೈತರು ವಿರೋಧ ವ್ಯಕ್ತಪಡಿಸಿದ್ದರು. ಸರ್ವೆ ಆದ ಜಮೀನು ಬಿಟ್ಟು ಬೇರೆ ಜಮೀನು ತೆಗೆದುಕೊಂಡಿದ್ದಕ್ಕೆ ವಿರೋಧಿಸಿದ್ದರು. ಫಲವತ್ತಾದ ಜಮೀನು ಬಿಟ್ಟು ಕೊಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಹೀಗಾಗಿ ಏಕಾಏಕಿ ನೂರಾರು ಪೊಲೀಸರನ್ನು ಕರೆತಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಾಮಗಾರಿ ನಡೆಸಿದೆ.

ರೈತರು, ಮಹಿಳೆಯರ ಮೇಲೆ ಪೊಲೀಸರ ದಬ್ಬಾಳಿಕೆ; ಧರಣಿ ವೇಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಜಮೀನು ಮಾಲೀಕ
ಧರಣಿ ವೇಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಜಮೀನು ಮಾಲೀಕ
Follow us
TV9 Web
| Updated By: ಆಯೇಷಾ ಬಾನು

Updated on:Nov 11, 2021 | 12:35 PM

ಬೆಳಗಾವಿ: ರೈತರ ಮೇಲೆ ಪೊಲೀಸರು ದಬ್ಬಾಳಿಕೆ ನಡೆಸಿದ್ದಾರೆ. ಮಹಿಳೆಯರನ್ನು ಎಳೆದಾಡಿ ಸೀರೆ ಹರಿದು ಅಮಾನವೀಯವಾಗಿ ವರ್ತಿಸಿರುವ ಘಟನೆ ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದಲ್ಲಿ ನಡೆದಿದೆ. ಪೊಲೀಸರು ಹಾಗೂ ರೈತರ ನಡುವೆ ಘರ್ಷಣೆಗಳಾಗುತ್ತಿದ್ದು ಮಹಿಳಾ ಪೊಲೀಸರು ಮಹಿಳೆಯರನ್ನು ಎಳೆದಾಡಿ ದುರ್ವರ್ತನೆ ತೋರುತ್ತಿದ್ದಾರೆ. ಭೂಸ್ವಾಧೀನ ವಿರೋಧಿಸಿ ನೂರಾರು ರೈತರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನು ಇದೇ ವೇಳೆ ಜಮೀನು ಮಾಲೀಕ ಆಕಾಶ್‌ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಮಚ್ಚೆ-ಹಲಗಾ ಬೈಪಾಸ್ ರಸ್ತೆ ಕಾಮಗಾರಿಕೆಗೆ ರೈತರು ವಿರೋಧ ವ್ಯಕ್ತಪಡಿಸಿದ್ದರು. ಸರ್ವೆ ಆದ ಜಮೀನು ಬಿಟ್ಟು ಬೇರೆ ಜಮೀನು ತೆಗೆದುಕೊಂಡಿದ್ದಕ್ಕೆ ವಿರೋಧಿಸಿದ್ದರು. ಫಲವತ್ತಾದ ಜಮೀನು ಬಿಟ್ಟು ಕೊಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಹೀಗಾಗಿ ಏಕಾಏಕಿ ನೂರಾರು ಪೊಲೀಸರನ್ನು ಕರೆತಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಾಮಗಾರಿ ನಡೆಸಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ರೈತರು ಆಕ್ರೋಶ ಹೊರ ಹಾಕಿದ್ದಾರೆ. ಜೀವ ಕೊಟ್ಟೇವು ಜಮೀನು ಬಿಡುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ. ಕೈಯಲ್ಲಿ ಕುಡುಗೋಲು ಹಿಡಿದು ರೈತರು ಆತ್ಮಹತ್ಯೆಗೆ ಯತ್ನಿಸಿದ್ದು ಪೊಲೀಸರು ಮಹಿಳೆಯರನ್ನ ಎಳೆದಾಡಿ ಸೀರೆ ಹರಿದು ಹಾಕಿದ ಘಟನೆ ಸ್ಥಳದಲ್ಲಿ ನಡೆದಿದೆ.

ಪ್ರತಿಭಟನೆಗೆ ಎಂಟು ತಿಂಗಳ ಮಗುವಿನೊಂದಿಗೆ ಬಂದಿದ್ದ ಮಹಿಳೆಯನ್ನೂ ಬಿಡದೆ ಪೊಲೀಸರು ಎಳೆದಾಡಿ ಹೊರಗೆ ಕಳುಹಿಸಿದ್ದಾರೆ. ಕಾಮಗಾರಿ ನಿಲ್ಲಿಸುವಂತೆ ಓರ್ವ ರೈತ ಮರ ಏರಿ ಕುಳಿತಿದ್ದು ಜೆಸಿಬಿ ಡ್ರೈವರ್ ಕಾಮಗಾರಿ ನಿಲ್ಲಿಸಿದ್ದಾನೆ. ಕಾಮಗಾರಿ ಮಾಡಿದ್ರೇ ಮರದಿಂದ ಜಿಗಿಯುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ನಮಗೆ ಹಣ ಬೇಡಾ ಜಮೀನು ಬೇಕು ಕೆಲಸ ನಿಲ್ಲಿಸಿ ಎಂದು ಪಟ್ಟು‌ ಹಿಡಿದಿದ್ದಾನೆ. 15ಕ್ಕೂ ಅಧಿಕ ರೈತರನ್ನ ಪೊಲೀಸರು ಬಂಧಿಸಿದ್ದಾರೆ. ಮಹಿಳಾ ಪೊಲೀಸರು ಮಹಿಳೆಯರನ್ನ ಎಳೆದಾಡಿ ವಶಕ್ಕೆ ಪಡೆದು ವಾಹನದಲ್ಲಿ ಕೂಡಿಸಿದ್ದಾರೆ. ಪೊಲೀಸರ ದೌರ್ಜನ್ಯದಿಂದ ಮಹಿಳೆಯರು ಕಣ್ಣೀರಿಟ್ಟ ದೃಶ್ಯ ಕಂಡು ಬಂದಿದೆ. ಪೊಲೀಸರ ವಿರುದ್ಧ ರೈತರು ಆಕ್ರೋಶ ಹೊರ ಹಾಕಿದ್ದು, ಸರ್ಕಾರಕ್ಕೆ ಹಿಡಿಶಾಪ ಹಾಕಿದ್ದಾರೆ. ಸ್ಥಳದಲ್ಲಿ ಬಿಗುವಿಣ ವಾತಾವರಣ ನಿರ್ಮಾಣವಾಗಿದೆ.

ಯಾವುದೇ ಕಾರಣಕ್ಕೂ ನಾವು ಭೂಮಿಯನ್ನು ಬಿಟ್ಟುಕೊಡಲ್ಲ. ಕೋರ್ಟ್​ ಆದೇಶ ಉಲ್ಲಂಘಿಸಿ ಕಾಮಗಾರಿ ಆರಂಭಿಸಿದ್ದಾರೆ. ಪೊಲೀಸ್ ಫೋರ್ಸ್​ ನೆರವಿನಲ್ಲಿ ಕಾಮಗಾರಿ ಮಾಡುತ್ತಿದ್ದಾರೆ. ಸರ್ಕಾರದ ಮೊದಲ ಆದೇಶದಲ್ಲಿ ನಮ್ಮ ಜಮೀನು ಸೇರಿಲ್ಲ. ಆದರೆ ಏಕಾಏಕಿ ನಮ್ಮ ಜಮೀನಿನಲ್ಲಿ ಕಾಮಗಾರಿಗೆ ಪ್ರಯತ್ನ ಮಾಡಲಾಗುತ್ತಿದೆ ಎಂದ ಜಮೀನು ಕಳೆದುಕೊಳ್ಳುತ್ತಿರುವ ಯುವಕ ಅಮಿತ್​ ಆಕ್ರೋಶ ಹೊರ ಹಾಕಿದ್ದಾನೆ. ಕಾಮಗಾರಿ ನಿಲ್ಲಿಸುವಂತೆ ಜಮೀನು ಮಾಲಕಿ ವೃದ್ಧೆ ಕೂಡ ಒತ್ತಾಯಿಸಿದ್ದಾರೆ.

ಸ್ಥಳಕ್ಕೆ ಡಿಸಿಪಿ ವಿಕ್ರಂ ಆಮಟೆ, ಎಸಿ ರವೀಂದ್ರ ಕರಲಿಂಗನವರ್ ಭೇಟಿ ನೀಡಿದ್ದು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಪೊಲೀಸರು ಡಿಸಿಪಿ ಬಂದ್ರೂ ಕೆಲ ಮಹಿಳಾ ರೈತರನ್ನ ಎಳೆದು ಆ್ಯಂಬುಲೆನ್ಸ್ ನಲ್ಲಿ ಕೂಡಿಸಿದ್ದಾರೆ. ಎಂಟು ತಿಂಗಳ ಮಗುವನ್ನ ಮಹಿಳಾ ಪೊಲೀಸ್ ಪೇದೆ ಕಸಿದುಕೊಂಡು ವಾಹನ ಹತ್ತಿಸಿದ್ದಾರೆ.

bgm police darpa

ಮಹಿಳೆಯರನ್ನ ಎಳೆದಾಡಿ ಸೀರೆ ಹರಿದು ಹಾಕಿದ ಮಹಿಳಾ ಪೊಲೀಸರು

bgm police darpa

ರೈತರ ಮೇಲೆ ಪೊಲೀಸರು ದಬ್ಬಾಳಿಕೆ

ಇದನ್ನೂ ಓದಿ: 13 ಬಜೆಟ್​ ಮಂಡಿಸಿರುವ ಸಿದ್ದರಾಮಯ್ಯ ಅವರೇ ಬಿಟ್ ಕಾಯಿನ್ ಅಂದ್ರೇನು, ಅದರ ವ್ಯವಹಾರ ಹೇಗೆ ನಡೆಯುತ್ತೆ ತಿಳಿಸಿ ಎಂದು ಸಂಸದ ಪ್ರತಾಪ್

Published On - 11:34 am, Thu, 11 November 21

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ