ಆರೋಪಿ ಜಾಮೀನು ಪಡೆದು ಹೊರ ಬರುತ್ತಿದ್ದಂತೆ ಮತ್ತೆ ಬಂಧಿಸಿದ ಸಿಐಡಿ ಅಧಿಕಾರಿಗಳು

ಕೆಪಿಟಿಸಿಎಲ್​ ಕಿರಿಯ ಸಹಾಯಕ ನೇಮಕಾತಿ ಪರೀಕ್ಷಾ ಹಗರಣದ ಪ್ರಮುಖ ಆರೋಪಿ, ಜೈಲಿನಿಂದ ಹೊರ ಬರುತ್ತಿದ್ದಂತೆ ಮತ್ತೆ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಆರೋಪಿ ಜಾಮೀನು ಪಡೆದು ಹೊರ ಬರುತ್ತಿದ್ದಂತೆ ಮತ್ತೆ ಬಂಧಿಸಿದ ಸಿಐಡಿ ಅಧಿಕಾರಿಗಳು
ಆರೋಪಿ ಸಂಜೀವ್ ಭಂಡಾರಿ
Edited By: ವಿವೇಕ ಬಿರಾದಾರ

Updated on: Oct 18, 2022 | 7:24 PM

ಬೆಳಗಾವಿ: ಕೆಪಿಟಿಸಿಎಲ್ (KPTCL)​ ಕಿರಿಯ ಸಹಾಯಕ ನೇಮಕಾತಿ ಪರೀಕ್ಷಾ ಹಗರಣದಲ್ಲಿ ಬಂಧಿತನಾಗಿದ್ದ ಆರೋಪಿ ಸಂಜೀವ್ ಭಂಡಾರಿ, ಇಂದು (ಅ.18) ಜಾಮೀನು​​ ಮೇಲೆ ಹಿಂಡಲಗಾ ಜೈಲಿನಿಂದ (Hindalga jail) ಹೊರ ಬರುತ್ತಿದ್ದಂತೆ ಸಿಐಡಿ (CID) ಅಧಿಕಾರಿಗಳು ಜೈಲಿನ ಎದುರೇ ಮತ್ತೆ ಬಂಧಿಸಿದ್ದಾರೆ. ಆರೋಪಿ 2021ರಲ್ಲಿ ನಡೆದಿದ್ದ ಪೊಲೀಸ್ ಕಾನ್ಸಸ್ಟೇಬಲ್ ನೇಮಕಾತಿಯಲ್ಲೂ ಅಕ್ರಮ ಎಸಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಹೀಗಾಗಿ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಸಂಜೀವ್ ಭಂಡಾರಿಯನ್ನು ಬಂಧಿಸಿದ್ದಾರೆ. ಸದ್ಯ ಸಿಐಡಿ ಅಧಿಕಾರಿಗಳು ಸಂಜೀವ್ ಭಂಡಾರಿಯನ್ನು ಬೆಳಗಾವಿಯ ಐದನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಧೀಶರು ಆರು ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

ಕೆಪಿಟಿಸಿಎಲ್ ನೇಮಕಾತಿ ಪರೀಕ್ಷಾ ಹಗರಣದ ಹಿನ್ನಲೆ

ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿಯ ಪರೀಕ್ಷೆ ಆ.7ರಂದು ಗೋಕಾಕ್​ನಲ್ಲಿ ನಡೆದಿತ್ತು. ಈ ಪರೀಕ್ಷೆಯಲ್ಲಿ ಸಿದ್ದಪ್ಪ ಎಂಬ ವ್ಯಕ್ತಿ ಸ್ಮಾರ್ಟ್ ವಾಚ್ ಬಳಸಿ ಪ್ರಶ್ನೆ ಪತ್ರಿಕೆಯ ಫೋಟೋ ತೆಗೆದು ಹೊರಗೆ ಕಳುಹಿಸಿದ್ದನು. ಈ ವಿಚಾರ ತಿಳಿದ ಅಭ್ಯರ್ಥಿಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿದಾಗ ಅಕ್ರಮ ಎಸಗಿರುವುದು ಖಚಿತವಾಗಿತ್ತು. ಅದರಂತೆ ಅ.22ರಂದು 9 ಮಂದಿಯನ್ನು ಬಂಧಿಸಿದ್ದ ಪೊಲೀಸರು, ಅ.24ರಂದು ಮೂವರನ್ನು ಬಂಧಿಸಿದ್ದರು. ಪ್ರಕಣರದ ಪ್ರಮುಖ ಆರೋಪಿ ಸಂಜೀವ್ ಭಂಡಾರಿ ಅಕ್ರಮದಲ್ಲಿ ಭಾಗಿಯಾಗಿ ಹುಬ್ಬಳ್ಳಿಯಲ್ಲಿ ತೆಲೆಮರಿಸಿಕೊಂಡಿದ್ದನು.

ಈ ವಿಚಾರ ತಿಳಿದ ಗೋಕಾಕ್ ಠಾಣಾ ಪೊಲೀಸರು, ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸರಿಗೆ ಮಾಹಿತಿ ನೀಡಿ ನೆರವು ಕೋರಿದ್ದರು. ಅದರಂತೆ ಬೆಂಡಿಗೇರಿ ಠಾಣಾ ಪೊಲೀಸರ ಸಹಾಯದಿಂದ ಗೋಕಾಕ್ ಪೊಲೀಸರು, ಹುಬ್ಬಳ್ಳಿಯಲ್ಲಿ ಆರೋಪಿಯನ್ನು ಸೆ.2ರಂದು ಬಂಧಿಸಿದ್ದರು. ಬಂಧನ ನಂತರ ಆರೋಪಿಯನ್ನು ಪೊಲೀಸರು ಗೋಕಾಕ್​​ನ ಪ್ರಧಾನ ಸಿವಿಲ್​ ಮತ್ತು ಜೆಎಂಎಫ್​ಸಿ ಕೋರ್ಟ್​ಗೆ ಹಾಜರುಪಡಿಸಿ 7 ದಿನ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದರು. ಸದ್ಯ ಆರೋಪಿ ಜಾಮೀನಿನ ಮೇಲೆ ಹೊರ ಬಂದಿದ್ದನು.

ಪೊಲೀಸ್ ನೇಮಕಾತಿಯ ಅಕ್ರಮದಲ್ಲೂ ಭಾಗಿ

ಬಂಧಿತ ಸಂಜೀವ್ ಭಂಡಾರಿ ಈ ಹಿಂದೆ ನಡೆದ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯಲ್ಲಿ ನಡೆದ ಅಕ್ರಮದಲ್ಲಿ ಭಾಗಿಯಾಗಿ ಜೈಲು ಸೇರಿದ್ದನು. ಅಲ್ಲದೆ ಜಾಮೀನಿನ ಮೇಲೆ ಹೊರಬಂದಿದ್ದನು. ನಂತರ ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿಯ ಅಕ್ರಮದಲ್ಲಿ ಭಾಗಿಯಾಗಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:20 pm, Tue, 18 October 22

TV9 Web

TV9 Kannada

Read More
Loading...
Unable to load recommendations.
Follow Us