AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi News: ಚಿರತೆ ಸೆರೆಗೆ ಮುಂದುವರಿದ ಕಾರ್ಯಾಚರಣೆ, ಶೂಟರ್ಸ್​ಗೆ ಬುಲಾವ್, ವಿಶೇಷ ಡ್ರೋಣ್ ಬಳಕೆ

ಅರಣ್ಯ ಇಲಾಖೆ ಮತ್ತು ಪೊಲೀಸ್ ಸಿಬ್ಬಂದಿ ಜಂಟಿ ಕಾರ್ಯಾಚರಣೆ ಆರಂಭಿಸಿದ್ದು, ಹೆಚ್ಚುವರಿಯಾಗಿ ಇಬ್ಬರು ಶೂಟರ್​ಗಳೂ ಪಾಲ್ಗೊಂಡಿದ್ದಾರೆ.

Belagavi News: ಚಿರತೆ ಸೆರೆಗೆ ಮುಂದುವರಿದ ಕಾರ್ಯಾಚರಣೆ, ಶೂಟರ್ಸ್​ಗೆ ಬುಲಾವ್, ವಿಶೇಷ ಡ್ರೋಣ್ ಬಳಕೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 23, 2022 | 11:01 AM

Share

ಬೆಳಗಾವಿ: ನಗರದ ಗಾಲ್ಫ್ ಮೈದಾನದಲ್ಲಿ ಕಾಣಿಸಿಕೊಂಡಿರುವ ಚಿರತೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ (Leopard Catch) ಇಂದೂ (ಆಗಸ್ಟ್​ 23) ಸಹ ಮುಂದುವರಿದಿದೆ. ಅರಣ್ಯ ಇಲಾಖೆ ಮತ್ತು ಪೊಲೀಸ್ ಸಿಬ್ಬಂದಿ ಜಂಟಿ ಕಾರ್ಯಾಚರಣೆ ಆರಂಭಿಸಿದ್ದು, ಹೆಚ್ಚುವರಿಯಾಗಿ ಇಬ್ಬರು ಶೂಟರ್​ಗಳೂ ಪಾಲ್ಗೊಂಡಿದ್ದಾರೆ. ಚಿರತೆ ಸೆರೆ ಕಾರ್ಯಾಚರಣೆಗೆ ನೆರವಾಗಲೆಂದು ಸಂಜೆ ವೇಳೆಗೆ ಸಕ್ರೆಬೈಲ್‌‌ನಿಂದ ಆನೆಗಳು ಬರುವ ಸಾಧ್ಯತೆಯಿದೆ. 250 ಎಕರೆ ಪ್ರದೇಶ ವಿಸ್ತೀರ್ಣದ ಗಾಲ್ಫ್ ಮೈದಾನದಿಂದ ಚಿರತೆ ನಾಪತ್ತೆಯಾಗಿದ್ದು, ಹುಡುಕಾಟ ಮುಂದುವರಿದಿದೆ. ನಿನ್ನೆ ಎರಡು ಬಾರಿ ಚಿರತೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಶೋಧ ಕಾರ್ಯಾಚರಣೆ (ಕೂಂಬಿಂಗ್) ನಡೆಸಿದ್ದರು. ಆನೆಗಳು ಬಂದ ನಂತರ ಚಿರತೆಗಾಗಿ ಆನೆಗಳ ನೆರವಿನೊಂದಿಗೆ ಮತ್ತೊಮ್ಮೆ ಅರಣ್ಯ ಇಲಾಖೆ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಲಿದ್ದಾರೆ.

ಗಾಲ್ಫ್ ಮೈದಾನಕ್ಕೆ ಬಂದಿರುವ ಹಂದಿ ಹಿಡಿಯುವ ಯುವಕರು ತಮ್ಮೊಂದು ಸುಮಾರು 20 ನಾಯಿಗಳನ್ನು ಕರೆತಂದಿದ್ದಾರೆ. ನಾಯಿಗಳ ನೆರವಿನೊಂದಿಗೆ ಅವರೂ ಶೋಧ ಕಾರ್ಯಾಚರಣೆ ನಡೆಸಿದ್ದರು. ಗಾಲ್ಫ್ ಮೈದಾನದಲ್ಲಿ ಚಿರತೆ ಪತ್ತೆಯಾಗದ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಮತ್ತು ಗ್ರಾಮೀಣ ವಲಯದ 22 ಶಾಲೆಗಳಿಗೆ ರಜೆಯನ್ನು ಮುಂದುವರಿಸಲು ತಾಲ್ಲೂಕು ಆಡಳಿತ ನಿರ್ಧರಿಸಿದೆ.

ಗಾಲ್ಫ್ ಮೈದಾನಕ್ಕೆ ಶಾಸಕ ಅನಿಲ್​ ಬೆನಕೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರೊಂದಿಗೆ ಚರ್ಚಿಸಿ ಅಗತ್ಯ ಮಾಹಿತಿ ಪಡೆದುಕೊಂಡರು. ನಿನ್ನೆಯೂ ಕಾರ್ಯಾಚರಣೆ ಮುಗಿಯುವವರೆಗೂ ಶಾಸಕರು ಸ್ಥಳದಲ್ಲಿಯೇ ಬಿಡುಬಿಟ್ಟಿದ್ದರು. ಕಾರ್ಯಾಚರಣೆ ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ ಭೇಟಿ ನೀಡಿ ಪರಿಶೀಲಿಸಿದರು. ಚಿರತೆ ಪತ್ತೆಗಾಗಿ ಬೆಂಗಳೂರಿನಿಂದ ವಿಶೇಷ ತಂತ್ರಜ್ಞಾನದ ಡ್ರೋನ್ ತರಲಾಗಿದೆ. ಗಾಲ್ಫ್ ಮೈದಾನದ ಸಿಬ್ಬಂದಿ ಗಸ್ತು ತಿರುಗುತ್ತಿಇದ್ದಅರೆ. ಇಂದು ಚಿರತೆ ಹಿಡಿಯಲು ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.

ಆಲ್ಗೊರಿದಮ್ ಡ್ರೋಣ್ ಬಳಕೆ

ಗಾಲ್ಫ್ ಮೈದಾನದಲ್ಲಿ ಅಡಗಿರುವ ಚಿರತೆಯ ಶೋಧ ಕಾರ್ಯಕ್ಕಾಗಿ ಅಲ್ಗೋರಿದಮ್ ತಂತ್ರಜ್ಞಾನದ ಡ್ರೋಣ್ ಬಳಸಲಾಗುತ್ತಿದೆ. ಬೆಂಗಳೂರಿನಿಂದ ಆಗಮಿಸಿರುವ ವಿಶೇಷ ತಂಡವು ಕಾರ್ಯಾಚರಣೆಗೆ ಮುಂದಾಗಿದೆ. ಈ ಡ್ರೋಣ್ ಗಾಲ್ಫ್ ಮೈದಾನದ 250 ಎಕರೆ ಪ್ರದೇಶವನ್ನು ಇಡಿಯಾಗಿ ಸ್ಕ್ಯಾನ್ ಮಾಡಲಿದೆ. ಪ್ರಾಣಿಗಳ ಎಲುಬುಗಳನ್ನು ಪತ್ತೆಹಚ್ಚುವ ಸಾಮರ್ಥ್ಯ ಈ ಡ್ರೋಣ್​ಗೆ ಇದೆ. ಎಲುಬು ಪತ್ತೆಯಾದ ನಂತರ ಅದರ ಆಧಾರದ ಮೇಲೆ ಚಿರತೆ ಸೆರೆಗೆ ಕಾರ್ಯಾಚರಣೆ ಜರವೀಜ್ ನೇತೃತ್ವದ ತಂಡದಿಂದ ಕಾರ್ಯಾಚರಣೆ ನಡೆಯಲಿದೆ.

Published On - 11:01 am, Tue, 23 August 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ