ಬೆಳಗಾವಿಯಲ್ಲಿ ಉದ್ಯಮಿ ಕಿಡ್ನಾಪ್ ಪ್ರಕರಣ ಬೆಳಕಿಗೆ! ಕೈ, ಕಾಲು ಕಟ್ಟಿ 3 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ 8 ಆರೋಪಿಗಳು ಅರೆಸ್ಟ್

ಆರೋಪಿಗಳು ಬೆಳಗಾವಿ ಕೆಎಲ್ಇ ಆಸ್ಪತ್ರೆ ಬಳಿ ಕಾರನ್ನು ತಡೆದಿದ್ದಾರೆ. ಬೈಕ್​ಗೆ ಕಾರು ಟಚ್ ಮಾಡಿ ಎಸ್ಕೇಪ್ ಆಗುತ್ತಿದ್ದೀಯ ಅಂತಾ ನಾಲ್ವರು ವಾಗ್ವಾದ ನಡೆಸಿದ್ದರು. ರವಿಕಿರಣ್ ಜತೆ ಜಗಳವಾಡಿ ಮೂವರು ಕಾರಿನಲ್ಲಿ ಹತ್ತಿದ್ದರು.

ಬೆಳಗಾವಿಯಲ್ಲಿ ಉದ್ಯಮಿ ಕಿಡ್ನಾಪ್ ಪ್ರಕರಣ ಬೆಳಕಿಗೆ! ಕೈ, ಕಾಲು ಕಟ್ಟಿ 3 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ 8 ಆರೋಪಿಗಳು ಅರೆಸ್ಟ್
ಸಾಂದರ್ಭಿಕ ಚಿತ್ರ
Follow us
TV9 Web
| Updated By: sandhya thejappa

Updated on:Jan 30, 2022 | 8:39 AM

ಬೆಳಗಾವಿ: ನಗರದಲ್ಲಿ ಉದ್ಯಮಿಯನ್ನು ಅಪಹರಣ (Kidnap) ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, 8 ಆರೋಪಿಗಳನ್ನು ಎಪಿಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕ್ರಿಪ್ಟೋ ಕರೆನ್ಸಿ (Cryptocurrency) ವ್ಯವಹಾರ ನಡೆಸುತ್ತಿದ್ದ ರವಿಕಿರಣ್ ಎಂಬುವವರನ್ನು ಆರೋಪಿಗಳು ಕಿಡ್ನಾಪ್ ಮಾಡಿದ್ದರು. ಹುಬ್ಬಳ್ಳಿಯಿಂದ ಪುಣೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಿಡ್ನ್ಯಾಪ್ ಆಗಿತ್ತು. ಕೆಎಲ್ಇ ಆಸ್ಪತ್ರೆ ಬಳಿ ಕಾರು ತಡೆದು ಅಪಹರಣ ಮಾಡಿದ್ದರು. ಜ.14ಕ್ಕೆ ಅಪಹರಿಸಿ ಆರೋಪಿಗಳು ಹಣಕ್ಕೆ ಬೇಡಿಕೆ ಇಟ್ಟಿದ್ದ ಮಾಹಿತಿ ಇದೀಗ ಬೆಳಕಿಗೆ ಬಂದಿದೆ.

ಆರೋಪಿಗಳು ಬೆಳಗಾವಿ ಕೆಎಲ್ಇ ಆಸ್ಪತ್ರೆ ಬಳಿ ಕಾರನ್ನು ತಡೆದಿದ್ದಾರೆ. ಬೈಕ್​ಗೆ ಕಾರು ಟಚ್ ಮಾಡಿ ಎಸ್ಕೇಪ್ ಆಗುತ್ತಿದ್ದೀಯ ಅಂತಾ ನಾಲ್ವರು ವಾಗ್ವಾದ ನಡೆಸಿದ್ದರು. ರವಿಕಿರಣ್ ಜತೆ ಜಗಳವಾಡಿ ಮೂವರು ಕಾರಿನಲ್ಲಿ ಹತ್ತಿದ್ದರು. ಬಳಿಕ ಹಿಂಬದಿಯಿಂದ ರಿವಾಲ್ವರ್ ತೋರಿಸಿ ನಾವು ಹೇಳಿದ ಕಡೆ ಕಾರು ಚಾಲನೆ ಮಾಡುವಂತೆ ಬೆದರಿಕೆ ಹಾಕಿದ್ದಾರೆ. ಅಲ್ಲಿಂದ ನೇರವಾಗಿ ಖಾನಾಪುರ ಬಳಿ ಕೋಳಿ ಫಾರ್ಮ್​ಗೆ ಕರೆದೊಯ್ದಿದ್ದಾರೆ.

ಬಂಧಿತರು ರವಿಕಿರಣ್ನಣ್​ನ ಕುರ್ಚಿ ಮೇಲೆ ಕೂರಿಸಿ ಕೈ, ಕಾಲು ಕಟ್ಟಿ ಹೊಡೆದು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಮೊದಲು 20 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಬಳಿಕ ಆತನ ಬಳಿ ಇದ್ದ 55 ಸಾವಿರ ನಗದು, ಆ್ಯಪಲ್ ವಾಚ್, ಮೊಬೈಲ್, ಚಿನ್ನ ಹಾಗೂ ಬೆಳ್ಳಿಯ ನಾಣ್ಯ, 75 ಸಾವಿರ ಮೌಲ್ಯದ ಯುಎಸ್ ಕರೆನ್ಸಿ ಕಿತ್ತುಕೊಂಡಿದ್ದರು. ಬಳಿಕ ರವಿಕಿರಣ್ ಮೊಬೈಲ್​ನಿಂದ ಪತ್ನಿಗೆ ಕರೆ ಮಾಡಿ 3 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದರು.

ಮಾರನೇ ದಿನ ಬೆಳಗ್ಗೆ ರವಿಕಿರಣ್ ತಪ್ಪಿಸಿಕೊಂಡು ಬಂದಿದ್ದರು. ಅಪಹರಣಕಾರರಿಂದ ತಪ್ಪಿಸಿಕೊಂಡು ದಾಂಡೇಲಿಗೆ ತೆರಳಿದ್ದರು. ಮೂರು ದಿನಗಳ ಬಳಿಕ ಅಂದರೆ ಜ.18ರಂದು ಎಪಿಎಂಸಿ ಠಾಣೆಗೆ ದೂರು ನೀಡಿದ್ದರು. ದೂರಿನನ್ವಯ ಬೆಳಗಾವಿಯಲ್ಲಿ ಇಬ್ಬರು, ಖಾನಾಪುರದಲ್ಲಿ ಓರ್ವ, ಗೋವಾದಲ್ಲಿ ಐವರು ಆರೋಪಿಗಳನ್ನ ಬಂಧಿಸಲಾಗಿದೆ.

ಇದನ್ನೂ ಓದಿ

Lata Mangeshkar: ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ಸುಧಾರಣೆ; ವೈದ್ಯರು ಹೇಳಿದ್ದೇನು? ಇಲ್ಲಿದೆ ಮಾಹಿತಿ

ಬೆಂಗಳೂರು ವಿಮಾನ ನಿಲ್ದಾಣದಲ್ಲಿರುವ ಕೋವಿಡ್​ ಟೆಸ್ಟಿಂಗ್ ಲ್ಯಾಬ್ ಸಿಬ್ಬಂದಿ ಪಾನಮತ್ತರಾಗಿ ಕೆಲಸ ಮಾಡುತ್ತರೆ ಎಂದರು ಪ್ರಯಾಣಿಕರು!

Published On - 8:38 am, Sun, 30 January 22

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ