ಹಲಸಿ ಗ್ರಾಮದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ; ಆರೋಪಿಗಳು ಅರೆಸ್ಟ್

ಜಿಲ್ಲೆಯಲ್ಲಿ ಎಮ್ಇಎಸ್ ಪುಂಡರ ಅಟ್ಟಹಾಸಕ್ಕೆ ಇಡೀ ಕರ್ನಾಟಕ ಜನತೆ ಕೆಂಡಾಮಂಡಲವಾಗಿದೆ. ರಾಯಣ್ಣ ಪ್ರತಿಮೆ ಧ್ವಂಸಗೊಳಿಸಿದನ್ನು ವಿರೋಧಿಸಿ ನಿನ್ನೆ ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಹಲಸಿ ಗ್ರಾಮದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ; ಆರೋಪಿಗಳು ಅರೆಸ್ಟ್
ಬಂಧಿತ ಆರೋಪಿಗಳು
Follow us
TV9 Web
| Updated By: sandhya thejappa

Updated on:Dec 21, 2021 | 9:37 AM

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣಕಕ್ಕೆ ಸಂಬಂಧಿಸಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಸಂಜು ಗುರವ್, ಸಚಿನ್ ಗುರವ್, ಗಣೇಶ ಪೆಡ್ನೇಕರ್ ಎಂಬುವವರು ಅರೆಸ್ಟ್ ಆಗಿದ್ದಾರೆ. ಬಂಧಿತ ಆರೋಪಿಗಳು ಮೊನ್ನೆ ರಾತ್ರಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿ, ನಂತರ ಧ್ವಜ ಕಟ್ಟೆಗೆ ಮಸಿ ಬಳಿದು ವಿಕೃತಿ ಮೆರೆದಿದ್ದರು. ಬಂಧಿತರ ವಿರುದ್ಧ ಐಪಿಸಿ ಸೆಕ್ಷನ್ 153A, 295, 427, 120Bರಡಿ ಕೇಸ್ ದಾಖಲಾಗಿದೆ.

ಜಿಲ್ಲೆಯಲ್ಲಿ ಎಮ್ಇಎಸ್ ಪುಂಡರ ಅಟ್ಟಹಾಸಕ್ಕೆ ಇಡೀ ಕರ್ನಾಟಕ ಜನತೆ ಕೆಂಡಾಮಂಡಲವಾಗಿದೆ. ರಾಯಣ್ಣ ಪ್ರತಿಮೆ ಧ್ವಂಸಗೊಳಿಸಿದನ್ನು ವಿರೋಧಿಸಿ ನಿನ್ನೆ ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಎಮ್ಇಎಸ್ ಸಂಘಟನೆ ನಿಷೇಧಿಸಬೇಕು. ಇಲ್ಲವಾದಲ್ಲಿ ಕರ್ನಾಟಕ ಬಂದ್ಗೆ ಕರೆ ನೀಡಲಾಗುತ್ತದೆ ಅಂತ ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಎಮ್ಇಎಸ್ ಮತ್ತು ಶಿವಸೇನೆ ಸಂಘಟನೆ ವಿರುದ್ಧ ಕನ್ನಡಿಗರ ಕೂಗು ಮುಗಿಲು ಮುಟ್ಟಿದೆ. ಈ ನಡುವೆ ಜಿಲ್ಲೆಯ ಖಾನಾಪುರ ತಾಲೂಕಿನ ಹಲಶಿ ಗ್ರಾಮದಲ್ಲಿ ಆರೋಪಿಗಳು ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟಿದ್ದರು.

ಬೆಳಗಾವಿ ಗ್ರಾಮ ಪಂಚಾಯಿತಿ ಕಟ್ಟಡದಲ್ಲಿದ್ದ ಕನ್ನಡ ಬಾವುಟಕ್ಕೆ ಆರೋಪಿಗಳು ಬೆಂಕಿ ಹಚ್ಚಿದ್ದರು. ರಾತ್ರಿ ಬೆಂಕಿ ಹಚ್ಚಿ, ಧ್ವಜಕಟ್ಟೆಯ ಮೇಲಿನ ಜಗಜ್ಯೋತಿ ಬಸವೇಶ್ವರ ಚಿತ್ರಕ್ಕೆ ಕಪ್ಪು ಮಸಿ ಬಳಿದು ಪುಂಡಾಟ ಮೆರೆದಿದ್ದರು. ನಿನ್ನೆ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಘಟನೆಗೆ ಕನ್ನಡಪರ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತೆ ರಾರಾಜಿಸುತ್ತಿದೆ ಕನ್ನಡದ ಬಾವುಟ ಕಿಡಿಗೇಡಿಗಳು ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟಿದ್ದರು. ಆದರೆ ಗ್ರಾಮಸ್ಥರು, ಪೊಲೀಸರು ಹೊಸ ಬಾವುಟವನ್ನು ಹಾರಿಸಿದ್ದಾರೆ. ನಂದಗಡ ಪೊಲೀಸ್ ಠಾಣೆಯಲ್ಲಿ ಅಪರಿಚಿತರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಾಗಿದೆ.

ಇದನ್ನೂ ಓದಿ

ಅನಾರೋಗ್ಯದಿಂದ ಬಳಲುತ್ತಿರುವ ಹುಡುಗಿಗೆ ವಿಡಿಯೋ ಕಾಲ್ ಮೂಲಕ ಧೈರ್ಯ ತುಂಬಿದರು ಮೆಗಾಸ್ಟಾರ್ ರಜಿನೀಕಾಂತ್

ಎಲ್ಲೆಂದರಲ್ಲಿ ಕಸ ಹಾಕುವುದನ್ನು ತಡೆಯಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ಹೊಸ ಅಭಿಯಾನ

Published On - 9:32 am, Tue, 21 December 21

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?