AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೂಮ್​ ಸಿನಿಮಾ ಪ್ರೇರಣೆ, ಶ್ರೀಮಂತರ ಮನೆಗಳೇ ಟಾರ್ಗೆಟ್​​: ಬೆಳಗಾವಿಯಲ್ಲೊಬ್ಬ ಖತರ್ನಾಕ್​ ಕಳ್ಳ

ಧೂಮ್ ಸಿನಿಮಾ ಪ್ರೇರಣೆಯಿಂದ 1.2 ಕೆಜಿ ಚಿನ್ನ ಕದ್ದಿದ್ದ ಕಳ್ಳನನ್ನು ಬೆಳಗಾವಿಯಲ್ಲಿ ಬಂಧಿಸಲಾಗಿದೆ. ಲೈಟ್​ಕಲರ್ ಚೇಂಜ್ ಆಗುವ ಬೈಕ್ ಬಳಸಿ ಪೊಲೀಸರನ್ನು ಯಾಮಾರಿಸಲು ಈತ ಯತ್ನಿಸಿದ್ದ. ಒಟ್ಟು 22 ಕಳ್ಳತನ ಪ್ರಕರಣಗಳಲ್ಲಿ ಆರೋಪಿಯಾಗಿರುವ ಈತ, ಕದ್ದ ಚಿನ್ನ ಮಾರಿ ಐಷಾರಾಮಿ ಜೀವನ ನಡೆಸುತ್ತಿದ್ದ ಎನ್ನಲಾಗಿದೆ. ಚಿನ್ನಾಭರಣ, ವಾಹನಗಳು ಸೇರಿ ಕೋಟ್ಯಂತರ ರೂ. ಮೌಲ್ಯದ ವಸ್ತುಗಳನ್ನು ಆರೋಪಿಯಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಧೂಮ್​ ಸಿನಿಮಾ ಪ್ರೇರಣೆ, ಶ್ರೀಮಂತರ ಮನೆಗಳೇ ಟಾರ್ಗೆಟ್​​: ಬೆಳಗಾವಿಯಲ್ಲೊಬ್ಬ ಖತರ್ನಾಕ್​ ಕಳ್ಳ
ಬಂಧಿತ ಆರೋಪಿ
ಸಹದೇವ್​ ಮಾನೆ
| Edited By: |

Updated on:Nov 16, 2025 | 12:21 PM

Share

ಬೆಳಗಾವಿ, ನವೆಂಬರ್​ 16: ಧೂಮ್-1 ಸಿನಿಮಾ ನಟ ಜಾನ್ ಅಬ್ರಾಹಂ ನಟನೆಯಿಂದ ಪ್ರೇರಣೆಗೊಂಡು 1.2 ಕೆಜಿ ಚಿನ್ನ ಕದ್ದ ಕಳ್ಳ ಅರೆಸ್ಟ್​ ಆಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಮಹಾಂತೇಶ ನಗರದ ನಿವಾಸಿ ಸುರೇಶ ನಾಯಕ (32) ಬಂಧಿತ ಆರೋಪಿಯಾಗಿದ್ದು, ಕಾರು ಮತ್ತು ಬೈಕ್​ಗಳು ಸೇರಿ ಒಂದೂವರೆ ಲಕ್ಷ ಹಣ ಮತ್ತು ಕೆಜಿಗಟ್ಟಲೆ ಚಿನ್ನವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಹುಬ್ಬಳ್ಳಿಯ ಖ್ಯಾತ ವೈದ್ಯ ಡಾ.ಸುರೇಶ ದುಗ್ಗಾಣಿ ಸಹೋದರ ವಿಶ್ವನಾಥ ಅವರ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿನ ಮನೆಯಲ್ಲಿ ಕಳ್ಳತನ ನಡೆದಿದ್ದು, ಅಕ್ಟೋಬರ್ 23ರಂದು ಯಮಕನಮರಡಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಕುಟುಂಬ ಸಮೇತ ವಿಶ್ವನಾಥ ‌ದುಗ್ಗಾಣಿ ಅಕ್ಟೋಬರ್ ‌16ರಂದು ಬೆಂಗಳೂರಿಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದನ್ನು ಒಂದು ವಾರ ಗಮನಿಸಿದ್ದ ಆರೋಪಿ ಸುರೇಶ, ಅಕ್ಟೋಬರ್ 22ರ ರಾತ್ರಿ ‌ವಿಶ್ವನಾಥ್ ಮನೆಗೆ ನುಗ್ಗಿ ಕೋಟ್ಯಂತರ ರೂ. ಮೌಲ್ಯದ ಚಿನ್ನ ಕದ್ದಿದ್ದ. ಒಂದೇ ಗಂಟೆಯಲ್ಲಿ ಮನೆಯಲ್ಲಿದ್ದ 1,250 ಗ್ರಾಂ ಚಿನ್ನ, ಎಂಟೂವರೆ ಕೆಜಿ ಬೆಳ್ಳಿ, ಒಂದೂವರೆ ಲಕ್ಷ ನಗದು ದೋಚಿ ಎಸ್ಕೇಪ್​ ಆಗಿದ್ದ.

ಇದನ್ನೂ ಓದಿ: ಆನ್​ಲೈನ್ ಟ್ರೇಡಿಂಗ್​​ ಹೆಸರಲ್ಲಿ ವಂಚನೆ, ಹೆಚ್ಚು ಹಣದ ಆಸೆಗೆ ಇದ್ದ ದುಡ್ಡನ್ನೂ ಕಳೆದುಕೊಂಡ ವ್ಯಕ್ತಿ

ಪೊಲೀಸ್​ ತನಿಖೆ ವೇಳೆ ಶಾಕಿಂಗ್​ ವಿಚಾರ ಬೆಳಕಿಗೆ

ಪ್ರಕರಣ ಬೆನ್ನುಬಿದ್ದ ಪೊಲೀಸರಿಗೆ ತನಿಖೆ ವೇಳೆ ಶಾಕಿಂಗ್ ವಿಚಾರ ಗೊತ್ತಾಗಿದೆ. ನಟ ಜಾನ್ ಅಬ್ರಾಹಂ‌ರ ಪಕ್ಕಾ ಅಭಿಮಾನಿ ಆಗಿರುವ ಸುರೇಶ ನಾಯಕ, ಕಳ್ಳತನಕ್ಕೆ ಪಲ್ಸರ್​ ಬೈಕ್​ ಬಳಸುತ್ತಿದ್ದ. ಶ್ರೀಮಂತರ ಮನೆಗೆ ಕನ್ನ ಹಾಕೋದು, ಐಷಾರಾಮಿ ಜೀವನ ನಡೆಸೋದೆ ಈತನ ಕಾಯಕವಾಗಿತ್ತು. ಕದ್ದ ಚಿನ್ನಾಭರಣ ಮಾರಿ ಬಂದ ಹಣದಿಂದ ಗೋವಾದಲ್ಲಿ ಮಜಾ ಮಾಡ್ತಿದ್ದ. ಮೊಬೈಲ್​ ಕೂಡ ಹೊಂದಿರದ ಈತ, ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಲು ಬೈಕ್ ಮಾಡಿಫೈ ಮಾಡಿದ್ದ. ಹತ್ತು ನಿಮಿಷಕ್ಕೊಮ್ಮೆ ಬೈಕ್ ಲೈಟ್ ಕಲರ್ ಚೇಂಜ್ ಆಗುವ ರೀತಿ ಅದನ್ನು ರೆಡಿಮಾಡಿಸಿಕೊಂಡಿದ್ದ. 14 ದಿನಗಳ ಕಾಲ ರಾಷ್ಟ್ರೀಯ ಹೆದ್ದಾರಿಯ ಎಲ್ಲ ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿರುವ ಪೊಲೀಸರು, ಸುರೇಶ ನಾಯಕ ಧರಿಸುವ ಶೂ, ಜಾಕೆಟ್ ಮತ್ತು ರೆಡ್ ಕ್ಯಾಪ್ ಆಧರಿಸಿ ಬಂಧಿಸಿದ್ದಾರೆ.

ಕದ್ದ ಚಿನ್ನವನ್ನು ಮಹಾರಾಷ್ಟ್ರದ ಕೊಲ್ಲಾಪುರಕ್ಕೆ ಮಾರಲೆಂದು ಸುರೇಶ್​ ಹೊರಟಿದ್ದ ವೇಳೆ, ಮಹೀಂದ್ರಾ ಥಾರ್​ ವಾಹನದಲ್ಲಿದ್ದ ಗೋಲ್ಡ್​ ಸಮೇತ ಹಿಡಿದಿದ್ದಾರೆ. ಸುರೇಶ ನಾಯಕ ವಿರುದ್ಧ ಒಟ್ಟು 22 ಕಳ್ಳತನ ‌ಪ್ರಕರಣಗಳು ದಾಖಲಾಗಿದ್ದು, ಥಾರ್ ವಾಹನ, ಕವಾಸಕಿ, ಪಲ್ಸರ್ ಬೈಕ್​ಗಳು, ಒಂದೂವರೆ ಲಕ್ಷ ಹಣ ಹಾಗೂ ಕೆಜಿಗಟ್ಟಲೆ ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:11 pm, Sun, 16 November 25

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್