ಔರಂಗಜೇಬ್​​, ಟಿಪ್ಪು​ ಹೊಗಳಿ ವಾಟ್ಸಾಪ್​ ಸ್ಟೇಟಸ್ ಹಾಕಿದ್ದಕ್ಕೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್, 144 ಸೆಕ್ಷನ್ ಜಾರಿ

ಔರಂಗಜೇಬ್​​ ಮತ್ತು ಟಿಪ್ಪು ಸುಲ್ತಾನ್​​ರನ್ನು ಹೊಗಳಿ ವಾಟ್ಸಪ್‌ ಸ್ಟೇಟಸ್​​ ಹಾಕಲಾಗಿದೆ. ಕಿಡಿಗೇಡಿಗಳ ಕೃತ್ಯ ಸದ್ಯ ಆಕ್ರೋಶಕ್ಕೆ ಕಾರಣವಾಗಿದ್ದು, ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಪ್ರತಿಭಟನೆ ವೇಳೆ ಹಿಂಸಾಚಾರ ಉಂಟಾಗಿದೆ.

ಔರಂಗಜೇಬ್​​, ಟಿಪ್ಪು​ ಹೊಗಳಿ ವಾಟ್ಸಾಪ್​ ಸ್ಟೇಟಸ್ ಹಾಕಿದ್ದಕ್ಕೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್, 144 ಸೆಕ್ಷನ್ ಜಾರಿ
ಪ್ರತಿಭಟನೆ ವೇಳೆ ಲಾಠಿ ಚಾರ್ಜ್​

Updated on: Jun 07, 2023 | 3:19 PM

ಬೆಳಗಾವಿ: ಔರಂಗಜೇಬ್ ​​(Aurangzeb) ಮತ್ತು ಟಿಪ್ಪು ಸುಲ್ತಾನ್​​ (Tipu Sultan) ರನ್ನು ಹೊಗಳಿ ವಾಟ್ಸಪ್‌ ಸ್ಟೇಟಸ್​ ಹಾಕಿದ್ದಕ್ಕೆ ಕೊಲ್ಹಾಪುರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕಿಡಿಗೇಡಿಗಳ ಕೃತ್ಯ ಸದ್ಯ ಆಕ್ರೋಶಕ್ಕೆ ಕಾರಣವಾಗಿದ್ದು, ಕೊಲ್ಹಾಪುರದಲ್ಲಿ ಪ್ರತಿಭಟನೆ ವೇಳೆ ಹಿಂಸಾಚಾರಕ್ಕೆ ತಿರುಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಅಶ್ರುವಾಯು ಪ್ರಯೋಗಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರ ಹರಸಾಹಸ ಪಟ್ಟಿದ್ದು, ಕೊಲ್ಹಾಪುರ ನಗರದಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಸದ್ಯ ಕೊಲ್ಹಾಪುರ ನಗರದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಇಂದು ಹಿಂದೂಪರ ಸಂಘಟನೆಗಳು ಕೊಲ್ಹಾಪುರ ನಗರ ಬಂದ್‌ಗೆ ಕರೆ ನೀಡಿದ್ದರು. ಬೆಳಗ್ಗೆ ಛತ್ರಪತಿ ಶಿವಾಜಿ ಮಹಾರಾಜ ಚೌಕ್‌ನಲ್ಲಿ ಪ್ರತಿಭಟನೆ ಆರಂಭಿಸಿದ್ದ ಹಿಂದೂಪರ ಸಂಘಟನೆಗಳು, ಆಕ್ಷೇಪಾರ್ಹ ಪೋಸ್ಟ್ ಮಾಡಿದವರ ಬಂಧನಕ್ಕೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಪಾಕ್ ಪರ ಘೋಷಣೆ ವಿಡಿಯೋ ವೈರಲ್: ಇದು ಫೇಕ್​ ಎಂದ ಕಾಂಗ್ರೆಸ್ ನೂತನ ಶಾಸಕ

ಕಿಡಿಗೇಡಿಗಳಿಂದ ಕಲ್ಲು ತೂರಾಟ: ಸಾರ್ವಜನಿಕ ಆಸ್ತಿಪಾಸ್ತಿ ನಾಶ

ಇನ್ನು ಪ್ರತಿಭಟನೆ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ವಾಗ್ವಾದ ಉಂಟಾಗಿದೆ. ಇದೇ ವೇಳೆ ಕಿಡಿಗೇಡಿಗಳಿಂದ ಕಲ್ಲು ತೂರಾಟ ಮಾಡಿದ್ದು, ಇಬ್ಬರಿಗೆ ಗಾಯಗಳಾಗಿವೆ. ಅಂಗಡಿ ಮುಂಗಟ್ಟು ಮೇಲೆಯೂ ಕಲ್ಲು ತೂರಿ ಸಾರ್ವಜನಿಕ ಆಸ್ತಿಪಾಸ್ತಿ ನಾಶ ಮಾಡಲಾಗಿದೆ.

ಇತ್ತೀಚೆಗೆ ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನ ಶಾಸಕ ಆಸೀಫ್ ಸೇಠ್​ ಗೆಲುವು ಸಾಧಿಸಿದ್ದರು. ಈ ಹಿನ್ನಲೆ ಅವರ ಸಂಭ್ರಮದಲ್ಲಿ ಯಾರೋ ಕಿಡಿಗೇಡಿಗಳು ‘ಪಾಕಿಸ್ತಾನ್​ ಜಿಂದಾಬಾದ್’ ಘೋಷಣೆ ಕೂಗಿರುವ ವಿಡಿಯೋ ವೈರಲ್ ಆಗಿತ್ತು.

ಇದನ್ನೂ ಓದಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿನಿಧಿಸುವ ಬೆಳಗಾವಿಯ ಪ್ರತಿಷ್ಠಿತ, ಸುಸಜ್ಜಿತ ಹೆಚ್‌ಡಿ ಕುಮಾರಸ್ವಾಮಿ ಲೇಔಟ್‌ನಲ್ಲಿ ಜನರ ಗೋಳು ಕೇಳೋರೇ ಇಲ್ಲ!

ಈ ಕುರಿತು ಕಾಂಗ್ರೆಸ್ ಬೆಂಬಲಿಗರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇನ್ನು ಈ ಬಗ್ಗೆ ಸ್ಪಷ್ಟನೆ ನೀಡಿದ್ದ, ಆಸೀಫ್ ಸೇಠ್ ‘ ಆ ವಿಡಿಯೋ ಫೇಕ್, ಬಿಜೆಪಿಯ ಕೆಲವರು ಇಂತಹ ಕೆಲಸ ಮಾಡ್ತಿದ್ದಾರೆ. ಚುನಾವಣೆ ಸಂದರ್ಭದಲ್ಲೂ ಬಿಜೆಪಿಯವರು ಇದನ್ನೇ ಮಾಡಿದ್ರು, ಈ ವಿಷಯ ಬೆಳಗಾವಿ ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಚರ್ಚಿಸಿದ್ದೇನೆ. ಮಾನನಷ್ಟ ಮೊಕದ್ದಮೆ ದಾಖಲಿಸಲು ಸಿದ್ಧತೆ ನಡೆಸಿದ್ದೇನೆ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:13 pm, Wed, 7 June 23