ಗೋಕಾಕ್ ಫಾಲ್ಸ್ನಲ್ಲಿ ಪೊಲೀಸ್ ಭದ್ರತೆ, ದೂರದಿಂದಲೇ ನಿಂತು ಫಾಲ್ಸ್ ವೀಕ್ಷಣೆಗೆ ಅವಕಾಶ
ಗೋಕಾಕ್ ಫಾಲ್ಸ್ ಬಳಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೇಡ್ ಹಾಕಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಬೆಳಗಾವಿ: ಬೆಳಗಾವಿ ಜಿಲ್ಲೆ ಗೋಕಾಕ್ ಫಾಲ್ಸ್ನಲ್ಲಿ(Gokak Falls) ನೀರಿನ ಪ್ರಮಾಣ ಹೆಚ್ಚಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಗೋಕಾಕ್ ಫಾಲ್ಸ್ ಬಳಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೇಡ್ ಹಾಕಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ದೂರದಿಂದಲೇ ನಿಂತು ಫಾಲ್ಸ್ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗುತ್ತಿದೆ.
ಭಾರತದ ನಯಾಗರ ಜಲಪಾತ ಎಂದೇ ಖ್ಯಾತಿ ಪಡೆದ ಗೋಕಾಕ ಫಾಲ್ಸ್ ತುಂಬಿ ಹರಿಯುತ್ತಿದೆ. ಹೀಗಾಗಿ ಜಲಪಾತದ ನಯನ ಮನೋಹರ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ನೂರಾರು ಸಂಖ್ಯೆಯಲ್ಲಿ ಜನ ಇಲ್ಲಿಗೆ ಆಗಮಿಸುತ್ತಾರೆ. ಯುವಕರು ನೀರಿಗೆ ಇಳಿಯುವುದು, ನೀರು ಧುಮ್ಮಿಕ್ಕುವ ಜಾಗಕ್ಕೆ ಇಳಿದು ಬಂಡೆಗಲ್ಲಿನ ಮೇಲೆ ನಿಂತು ಸೆಳ್ಫಿ ಕ್ಲಿಕ್ ಮಾಡಿಕೊಳ್ಳುವುದನ್ನು ಮಾಡುತ್ತಾರೆ. ಅಲ್ಲದೆ ಇಲ್ಲಿ ಪ್ರವಾಸಿಗರ ಸುರಕ್ಷತೆಗೆ ಯಾವುದೇ ರೀತಿಯ ಅನುಕೂಲಗಳಿಲ್ಲ.ಹೀಗಾಗಿ ಗೋಕಾಕ್ ಡಿಎಸ್ಪಿ ನೇತೃತ್ವದಲ್ಲಿ ಗೋಕಾಕ್ ಜಲಪಾತಕ್ಕೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಅಲ್ಲದೆ ಈ ಹಿಂದೆ ಸೆಲ್ಫಿ ಕ್ಲಿಕ್ಕಿಸಲು ಹೋಗಿ ವಿದ್ಯಾರ್ಥಿಗಳು ನೀರು ಪಾಲಾದಂತಹ ದುರ್ಘಟನೆಗಳು ಕೂಡ ಇಲ್ಲಿ ಸಂಭವಿಸಿವೆ. ಹೀಗಾಗಿ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದ್ದು ಅನಾಹುತಗಳು ಸಂಭವಿಸದಂತೆ ಎಚ್ಚರ ವಹಿಸುತ್ತಿದ್ದಾರೆ. ಇನ್ನು ಶಿವಮೊಗ್ಗದ ಜೋಗ ಜಲಪಾತದಲ್ಲಿ ಮಾಡಲಾಗಿರುವಂತೆಯೇ ಇಲ್ಲೂ ಕೂಡ ಪ್ರವಾಸಿಗರಿಗೆ ಜಲಪಾತ ವೀಕ್ಷಣೆಗೆ ವ್ಯವಸ್ಥೆ ಮಾಡಿಕೊಡಬೇಕೆಂದು ಪ್ರವಾಸಿಗರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಮುಗಿಲೆತ್ತರದಿಂದ ಧುಮ್ಮಿಕ್ಕುವ ಜಲಧಾರೆಯ ಸೌಂದರ್ಯವನ್ನು ನೋಡಲು ಗೋಕಾಕ್ ಜಲಪಾತಕ್ಕೆ ಭೇಟಿ ನೀಡಿ
ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ
ಹಾಸನ : ಮಳೆ ಆರಂಭದಲ್ಲೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ದೋಣಿಗಾಲ್ ಬಳಿ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ. ನಿನ್ನೆಯಿಂದ ಮಲೆನಾಡು ಭಾಗದಲ್ಲಿ ಮುಂಗಾರು ಚುರುಕುಗೊಂಡಿದೆ. ರಸ್ತೆ ಬಿರುಕು ಬಿಟ್ಟಿದ್ದು, ತಡೆಗೋಡೆ ಮೇಲೆ ಮಣ್ಣು ಕುಸಿಯುತ್ತಿದೆ. ಹೆದ್ದಾರಿಯಲ್ಲಿ ಮಣ್ಣು ಕುಸಿದಿದ್ದರಿಂದ ವಿದ್ಯುತ್ ಕಂಬ ನೆಲಕ್ಕುರುಳಿದೆ. ಎನ್ಹೆಚ್ಎಐ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ