ಬೆಳಗಾವಿ ಶಿವಾಜಿ ಮೂರ್ತಿ ಉದ್ಘಾಟನೆ​​: ರಮೇಶ್​ ಜಾರಕಿಹೊಳಿ-ಹೆಬ್ಬಾಳ್ಕರ್​ ಮಧ್ಯೆ ರಾಜಕೀಯ ಜಿದ್ದಾಜಿದ್ದಿ

|

Updated on: Feb 25, 2023 | 3:48 PM

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿರುವ ಐತಿಹಾಸಿಕ ರಾಜಹಂಸಗಡ ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಲೋಕಾರ್ಪಣೆ ವಿಚಾರವಾಗಿ ಗೋಕಾಕ್ ಬಿಜೆಪಿ ಶಾಸಕ ರಮೇಶ್​ ಜಾರಕಿಹೊಳಿ ಮತ್ತು ಬೆಳಗಾವಿ ಗ್ರಾಮಾಂತರ ಕಾಂಗ್ರೆಸ್​ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ​ಮಧ್ಯೆ ರಾಜಕೀಯ ಜಿದ್ದಾಜಿದ್ದಿ ಶುರುವಾಗಿದೆ.

ಬೆಳಗಾವಿ ಶಿವಾಜಿ ಮೂರ್ತಿ ಉದ್ಘಾಟನೆ​​: ರಮೇಶ್​ ಜಾರಕಿಹೊಳಿ-ಹೆಬ್ಬಾಳ್ಕರ್​ ಮಧ್ಯೆ ರಾಜಕೀಯ ಜಿದ್ದಾಜಿದ್ದಿ
Follow us on

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ (Belagavi Rural Constituency) ಮರಾಠ (Maratha) ಮತಗಳು ಹೆಚ್ಚಾಗಿದ್ದು, ಈ ಮತಗಳನ್ನು ಸೆಳೆಯಲು ಎರಡು ರಾಷ್ಟ್ರೀಯ ಪಕ್ಷಗಳು ಸೆಣಸಾಡುತ್ತಿವೆ. ಹೀಗಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿರುವ ಐತಿಹಾಸಿಕ ರಾಜಹಂಸಗಡ ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ (Chhatrapati Shivaji Maharaj) ಪ್ರತಿಮೆ ಲೋಕಾರ್ಪಣೆ ವಿಚಾರವಾಗಿ ಗೋಕಾಕ್ ಬಿಜೆಪಿ ಶಾಸಕ ರಮೇಶ್​ ಜಾರಕಿಹೊಳಿ (Ramesh Jarkiholi) ಮತ್ತು ಬೆಳಗಾವಿ ಗ್ರಾಮಾಂತರ ಕಾಂಗ್ರೆಸ್​ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ​ಮಧ್ಯೆ ರಾಜಕೀಯ ಜಿದ್ದಾಜಿದ್ದಿ ಶುರುವಾಗಿದೆ. ಮಾರ್ಚ್​​ 5ರಂದೇ ಶಿವಾಜಿ ಮೂರ್ತಿ ಲೋಕಾರ್ಪಣೆ ಮಾಡುತ್ತೇವೆ. ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೂ ಆಹ್ವಾನ ನೀಡಿದ್ದೇವೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಅತ್ತ ಶಾಸಕ ರಮೇಶ್​ ಜಾರಕಿಹೊಳಿ ಮಾರ್ಚ್ 2ರಂದು ಸರಳವಾಗಿ ಕಾರ್ಯಕ್ರಮ ಮಾಡಿ ಶಿವಾಜಿ ಮೂರ್ತಿ ಉದ್ಘಾಟನೆ ಮಾಡುತ್ತೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಆಗಮಿಸುತ್ತಾರೆ ಎನ್ನುವ ಮೂಲಕ ಶಿವಾಜಿ ಮೂರ್ತಿ ಉದ್ಘಾಟನೆ ವಿಚಾರವಾಗಿ ರಾಜಕೀಯ ವಾಗ್ಯುದ್ಧ ಶುರು ಮಾಡಿದ್ದಾರೆ

ಈ ವಿಚಾರವಾಗಿ ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ ಶಿಷ್ಟಾಚಾರದ ಪ್ರಕಾರ ಉದ್ಘಾಟನೆಗೆ ಎಲ್ಲರನ್ನೂ ಆಹ್ವಾನಿಸುತ್ತೇವೆ. ಯಾರು ಯಾರು ಬರುತ್ತಾರೆ ಎಲ್ಲರಿಗೂ ಸ್ವಾಗತ ಕೋರುತ್ತೇವೆ. ಸಿಎಂ ಬೊಮ್ಮಾಯಿ ಅವರಿಗೆ ಟೈಮ್ ಕೊಟ್ಟಿದ್ದು ನನಗೆ ಗೊತ್ತಿಲ್ಲ. ಏನೇ ಆದರೂ ಮಾರ್ಚ್​​ 5ರಂದೇ ಶಿವಾಜಿ ಮೂರ್ತಿ ಉದ್ಘಾಟನೆ ಮಾಡುತ್ತೇವೆ ಎಂದಿದ್ದಾರೆ.

ಮಾರ್ಚ್ 2ರಂದು ಸರಳವಾಗಿ ಕಾರ್ಯಕ್ರಮ ಮಾಡುತ್ತೇವೆ

ಶಿವಾಜಿ ಮೂರ್ತಿ ಉದ್ಘಾಟನೆ ವಿಚಾರವಾಗಿ ಶಾಸಕ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಬೆಳಗಾವಿ ಗ್ರಾಮೀಣ ಬಿಜೆಪಿ ಕಚೇರಿಯಲ್ಲಿ, ಗ್ರಾಮೀಣ ಕ್ಷೇತ್ರದ ಬಿಜೆಪಿ ಮುಖಂಡರ ಜೊತೆ ಸಭೆ ಮಾಡಿದ್ದಾರೆ. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಮಾರ್ಚ್ 2ರಂದು ರಾಜಹಂಸಗಡ ಕೋಟೆಗೆ ಸಿಎಂ ಬೊಮ್ಮಾಯಿ ಅವರು ಭೇಟಿ ನೀಡುವ ಹಿನ್ನೆಲೆ ಅಂದೇ ಸರಳವಾಗಿ ಕಾರ್ಯಕ್ರಮ ಮಾಡುತ್ತೇವೆ ಎಂದು ಹೇಳಿದರು.

ಇಂತಹ ಭಾವನಾತ್ಮಕ ನಾಟಕ ಮಾಡುವವರಿಗೆ ಜನ ಬುದ್ದಿ ಕಲಿಸುತ್ತಾರೆ. ಕಾಂಗ್ರೆಸ್ ಪಕ್ಷದ ಕಚೇರಿ ಕಟ್ಟುವಾಗಲೇ ಅಲ್ಲಿ ದುಡ್ಡು ತಿಂತಿದ್ದಾರೆ. ದೊಡ್ಡ ದೊಡ್ಡದಾಗಿ ಮಾತನಾಡುತ್ತಾರೆ ಬ್ಯಾಗ್ ಹಿಡಿಯುವವರೂ, ಬಾಗಿಲು ಕಾಯುವವರು ದುಡ್ಡು ತಿಂದಿದ್ದಾರೆ. ಶಿವಾಜಿ ಮೂರ್ತಿ ಉದ್ಘಾಟನೆ ಕಾರ್ಯಕ್ರಮಕ್ಕೆ ಇಡೀ ಜಿಲ್ಲೆಯ ಶಾಸಕರಿಗೆ ಆಹ್ವಾನ ನೀಡುತ್ತಾರೆ. ಸ್ಥಳೀಯ ಶಾಸಕರು ವೈರಿನಾ? ನಮ್ಮ ಶಾಸಕರಿಗೆ ಸಿಗುವ ಗೌರವ ಸಿಗಲಿ. ಸ್ಥಳೀಯ ಶಾಸಕರ ಜೊತೆಗೆ ನಾನು ಕೂಡ ವೇದಿಕೆ ಹಂಚಿಕೊಳ್ಳುತ್ತೇನೆ. ಅವರು ನಮ್ಮ ಶಾಸಕರು, ವೈರಿ ಅಲ್ಲ ಎಂದರು.

ಶಿವಾಜಿ ಮೂರ್ತಿ ಪ್ರತಿಷ್ಠಾಪನೆಗೆ ಡಿಕೆ ಶಿವಕುಮಾರ್​ ಹಣ ನೀಡಿದ್ದಾರೆಂಬ ವಿಚಾರವಾಗಿ ಮಾತನಾಡಿದ ಅವರು ಡಿಕೆ ಶಿವಕುಮಾರ್ ಹಣ ನೀಡಿರುವ ಬಗ್ಗೆ ನನಗೆ ಗೊತ್ತಿಲ್ಲ, ಕೊಟ್ಟಿದ್ದರೇ ಸ್ವಾಗತ. ಸರ್ಕಾರದಿಂದ ಅನುದಾನ ಬಿಡುಗಡೆಯಾದ ಬಗ್ಗೆ ದಾಖಲೆ ಕೊಡಲಿ. ಶಾಸಕರ ಪತ್ರದ ಮೇಲೆ ಮಾತಾಡೋದು ಬೇಡ. ಕೆಳಮಟ್ಟದ ರಾಜಕೀಯಕ್ಕೆ ನಾನು ಇಳಿಯುವುದಿಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ