ಬೆಲೆ ಏರಿಕೆ ವಿರುದ್ಧ ಭುಗಿಲೆದ್ದ ಆಕ್ರೋಶ: ನಿವಾಸಕ್ಕೆ ಮುತ್ತಿಗೆ ಹಾಕಲು ಕರ್ನಾಟಕ ಬಿಜೆಪಿ ತೀರ್ಮಾನ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಒಂದಲ್ಲ ಒಂದು ಬೆಲೆ ಏರಿಕೆ ಮಾಡುತ್ತಿದೆ. ಆರಂಭದಲ್ಲೇ ಸ್ಟ್ಯಾಂಪ್​ ಡ್ಯೂಟಿ ಏರಿಕೆ ಮಾಡಿದ್ದ ಸಿದ್ದರಾಮಯ್ಯನವರ ಸರ್ಕಾರ ಮೊನ್ನೆ ಇಂಧನ ದರ ಏರಿಕೆ ಮಾಡಿದೆ. ಇದರ ಬೆನ್ನಲ್ಲೇ ಇಂದು ಹಾಲಿನ ದರ ಏರಿಕೆ ಮಾಡಲಾಗಿದೆ. ಹೀಗಾಗಿ ಈ ಬೆಲೆ ಏರಿಕೆ ವಿರುದ್ಧ ವಿಪಕ್ಷ ಬಿಜೆಪಿ ಮತ್ತು ಜೆಡಿಎಸ್​​ ಆಕ್ರೋಶ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಿದೆ.

ಬೆಲೆ ಏರಿಕೆ ವಿರುದ್ಧ ಭುಗಿಲೆದ್ದ ಆಕ್ರೋಶ: ನಿವಾಸಕ್ಕೆ ಮುತ್ತಿಗೆ ಹಾಕಲು ಕರ್ನಾಟಕ ಬಿಜೆಪಿ ತೀರ್ಮಾನ
ಆರ್ ಅಶೋಕ್, ವಿಪಕ್ಷ ನಾಯಕ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Jun 25, 2024 | 4:30 PM

ಬೆಳಗಾವಿ, (ಜೂನ್ 25): ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಇದೀಗ ಕರ್ನಾಟಕದಲ್ಲಿ (Karnataka) ಕೆಎಂಎಫ್ (KMF)​ ಹಾಲಿನ ದರ ಏರಿಕೆ  (Milk Price Hike) ಮಾಡಿದೆ. ಇದರಿಂದ ಜನಾಕ್ರೋಶ ವ್ಯಕ್ತವಾಗಿದೆ. ಇನ್ನು ವಿರೋಧ ಪಕ್ಷ ಬಿಜೆಪಿ ಮತ್ತು ಜೆಡಿಎಸ್, ಸಿದ್ದರಾಮಯ್ಯ​ ಸರ್ಕಾರದ ವಿರುದ್ಧ ಮುಗಿಬಿದ್ದಿವೆ. ಇನ್ನು ಈ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ಬಿಜೆಪಿ ಮುಂದಿನ ತಿಂಗಳ ಅಂದ್ರೆ ಜುಲೈ 3 ಅಥವಾ 4 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದೆ. ಈ ಬಗ್ಗೆ ಬೆಳಗಾವಿಯಲ್ಲಿ ಇಂದು (ಜೂನ್ 25) ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.

ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಬೆಲೆ ಏರಿಕೆ ಖಂಡಿಸಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ. ಜುಲೈ 3 ಅಥವಾ 4ರಂದು ಸಿಎಂ ಮನೆಗೆ ಮುತ್ತಿಗೆ ಹಾಕುತ್ತೇವೆ. ಕರ್ನಾಟಕ ಸರ್ಕಾರ ಒಂದು ರೀತಿ ಹುಚ್ಚರ ಸಂತೆಯಾಗಿದೆ. ಮೊನ್ನೆಯಷ್ಟೇ ಪೆಟ್ರೋಲ್, ಡೀಸೆಲ್‌ ದರ ಏರಿಕೆ ಮಾಡಿದ್ದಾರೆ. ಈಗ ಹಾಲಿನ ದರ ಲೀಟರ್​ಗೆ 2 ರೂಪಾಯಿ ಏರಿಕೆ ಮಾಡಿದ್ದಾರೆ. ಒಂದೇ ವರ್ಷದಲ್ಲಿ ಎರಡು ಬಾರಿ ಹಾಲಿನ ದರ ಏರಿಕೆ ಮಾಡಿದ್ದಾರೆ. ಗ್ಯಾರಂಟಿಗೆ ಹಣ ಹೊಂದಿಸಲು ಆಗದೇ ಬೆಲೆ ಏರಿಕೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಹಾಲಿನ ದರ ಏರಿಕೆ ಮಾಡುವುದು ಸರ್ಕಾರ ಅಲ್ಲ, ಕೆಎಂಎಫ್​; ಈ ಬಗ್ಗೆ ಚರ್ಚೆ ಮಾಡ್ತೀನಿ -ಸಿಎಂ ಸಿದ್ದರಾಮಯ್ಯ

ತುಘಲಕ್ ರೀತಿ ಕಾಂಗ್ರೆಸ್ ಸರ್ಕಾರವನ್ನು ನಡೆಸುತ್ತಿದೆ. ಈ ತಿಂಗಳು, ಮುಂದಿನ ತಿಂಗಳು ಸರ್ಕಾರದ ಬಳಿ ಹಣವೇ ಇಲ್ಲ. ಇದೇ ವೇಳೆ ವೇತನ ಪರಿಷ್ಕರಣೆ ಕೂಡ ಕ್ಯಾಬಿನೆಟ್ ಬಳಿ ಬಂದಿದೆ. ಐದಲ್ಲ ಐವತ್ತು ಗ್ಯಾರಂಟಿ ಕೊಡಿ, ಆದರೆ ವೈಜ್ಞಾನಿಕವಾಗಿ ಮಾಡಿ. ಚುನಾವಣೆಯಲ್ಲಿ ಜನ ನಿಮ್ಮ ಮುಖಕ್ಕೆ ಮಂಗಳಾರತಿ ಎತ್ತಿದ್ದಾರೆ. ಜನ ಇಷ್ಟು ಛೀಮಾರಿ ಹಾಕಿದ್ರೂ ನಿಮಗೆ ನಾಚಿಗೆ ಆಗಿಲ್ಲ. ಎಂಪಿ ಚುನಾವಣೆಯಲ್ಲಿ ಮತ ಹಾಕಿಲ್ಲ ಎಂದು ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಅವೈಜ್ಞಾನಿಕವಾಗಿ, ಯಾವುದೇ ಮುಂದಾಲೋಚನೆ ಇಲ್ಲದೆ ಗ್ಯಾರಂಟಿ ತಂದು ಈಗ ಗ್ಯಾರಂಟಿಗೆ ಹಣ ಹೊಂದಿಸಲು ಆಗದೇ ಬೆಲೆ ಏರಿಕೆ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಇದ್ದಾಗ ಒಂದು ರೂಪಾಯಿ ಜಾಸ್ತಿ ಮಾಡಿದಾಗ ಹೆಣದ ಮೆರವಣಿಗೆ ಮಾಡಿದ್ರಿ. ಸರ್ಕಾರ ದೀವಾಳಿಯಾಗಿದೆ, ಹಣ ಇಲ್ಲ ಪಾಪಾರ್ ಆಗಿದೆ. ಸಂಬಳ ಕೊಡಲು ಹಣವಿಲ್ಲ, ಹಣಕಾಸು ಇಲಾಖೆ ಪೆಟ್ರೋಲ್, ಡಿಸೇಲ್ ಏರಿಕೆ ಮಾಡಿ ಎಂದು ಹೇಳಿದೆ. ಈ ತಿಂಗಳು ಮುಂದಿನ ತಿಂಗಳು ಅವರ ಬಳಿ ಹಣವಿಲ್ಲ.ಇದೇ ವೇಳೆ ವೇತನ ಪರಿಷ್ಕರಣೆ ಕೂಡ ಕ್ಯಾಬಿನೆಟ್ ಬಳಿ ಬಂದಿದೆ. ಅದಕ್ಕೆ ಹದಿನೈದರಿಂದ ಹದಿನಾರು ಸಾವಿರ ಕೋಟಿ ರೂ. ಬೇಕು. ಜನ ಊಟಕ್ಕೂ ಕಷ್ಟು ಪಡುವ ಸ್ಥಿತಿ ಇದೆ. ಜುಲೈ 3ಅಥವಾ 4 ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕುತ್ತೇವೆ ಎಂದರು.

ಅಧಿಕಾರಕ್ಕೆ ಬಂದು ಒಂದೇ ವರ್ಷದಲ್ಲಿ ಕೆಟ್ಟದಾಗಿ ನಡೆದುಕೊಂಡಿದೆ. ಹಾಲಿನ ದರ, ತೈಲ ದರ ಹೆಚ್ಚಳ ವಿರೋಧಿಸಿ ಹೋರಾಟ ಮಾಡ್ತೀವಿ. ಜೈಶ್ರೀರಾಮ ಘೋಷಣೆ ಕೂಗಿದರೆ ಚಾಕುವಿನಿಂದ ಹಲ್ಲೆ ಮಾಡ್ತಾರೆ. ಮಂಡ್ಯದಲ್ಲಿ ಹನುಮ ಧ್ವಜದ ವಿಚಾರಕ್ಕೆ ಕಿರುಕುಳ ಕೊಡಲಾಗುತ್ತಿದೆ. ಅಧಿವೇಶನದಲ್ಲಿ ಕಾನೂನು & ಸುವ್ಯವಸ್ಥೆ ಪ್ರಸ್ತಾಪ ಬಂದ್ರೆ ಮಾತಾಡ್ತೀವಿ ಹೇಳಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 4:27 pm, Tue, 25 June 24

ತಾಜಾ ಸುದ್ದಿ
ಪವಿತ್ರಾ ಗೌಡ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಪವಿತ್ರಾ ಗೌಡ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ