AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಯಿಂದ ಮತ್ತೊಬ್ಬ ಕೈದಿಯ ಕೊಲೆಗೆ ಯತ್ನ

ಇಬ್ಬರು ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಸ್ಕ್ರೂಡ್ರೈವರ್​ನಿಂದ ಚುಚ್ಚಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಬೆಳಗಾವಿ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.

ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಯಿಂದ ಮತ್ತೊಬ್ಬ ಕೈದಿಯ ಕೊಲೆಗೆ ಯತ್ನ
ಪ್ರಾತಿನಿಧಿಕ ಚಿತ್ರ
Sahadev Mane
| Edited By: |

Updated on:Jul 30, 2023 | 9:49 AM

Share

ಬೆಳಗಾವಿ: ಬೆಳಗಾವಿಯ (Belagavi) ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ (Hindalaga Jail) ಇಬ್ಬರು ಕೈದಿಗಳ ನಡುವೆ ಮಾರಾಮಾರಿ ನಡೆದಿದೆ. ಗಲಾಟೆಯಲ್ಲಿ ಓರ್ವ ಕೈದಿ (Prisoner) ಸ್ಕ್ರೂಡ್ರೈವರ್​ನಿಂದ ಮತ್ತೊಬ್ಬ ಕೈದಿಗೆ ಐದು ಬಾರಿ ಇರಿದು ಕೊಲೆ ಮಾಡಲು ಯತ್ನಿಸಿದ್ದಾನೆ. ಶಂಕರ ಭಜಂತ್ರಿ ಕೊಲೆ ಮಾಡಲು ಯತ್ನಿಸಿದ ಕೈದಿ. ಮಂಡ್ಯ ಮೂಲದ ಸಾಯಿಕುಮಾರ್​ ಗಾಯಗೊಂಡ ವಿಚಾರಣಾಧೀನ ಕೈದಿ. ಸಾಯಿಕುಮಾರ್​ ಅವರಿಗೆ ಎದೆ, ಹೊಟ್ಟೆ, ಕಿವಿಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಯ ಐ.ಸಿ.ಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಜೈಲಿನಲ್ಲಿ ನಡೆದ ಈ ಘರ್ಷಣೆಯನ್ನು ಮುಚ್ಚಿಹಾಕಲು ಯತ್ನಿಸುತ್ತಿರುವ ಆರೋಪ ಕೇಳಿಬಂದಿದೆ. ಬೆಳಗಾವಿ ಜಿಲ್ಲಾಸ್ಪತ್ರೆ ಎದರು ಬಿಗಿ ಪೊಲೀಸ್​​ ಭದ್ರತೆ ನಿಯೋಜಿಸಲಾಗಿದೆ.

ಒಂದೇ ಸಮುದಾಯದ ಎರಡು ಕುಟುಂಬಗಳ ನಡುವೆ ಕಲ್ಲು ತೂರಾಟ

ಕಲಬುರಗಿ: ಭಾವೈಕ್ಯತೆಯ ಮೊಹರಂ ಹಬ್ಬವನ್ನು ನಿನ್ನೆ (ಜು.29) ನಾಡಿನಾದ್ಯಂತ ಅದ್ಧೂರಿಯಾಗಿ ಆಚರಿಸಲಾಯಿತು. ಹಿಂದೂ-ಮುಸ್ಲಿಂ ಬಾಂಧವರು ಒಟ್ಟಾಗಿ ವಿಜೃಂಭಣೆಯಿಂದ ಆಚರಿಸಿದರು. ಈ ಹಬ್ಬದ ದಿನದಂದೇ ಜಿಲ್ಲೆಯ ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿದೆ.

ಇದನ್ನೂ ಓದಿ: ಮೊಹರಂ ಹಬ್ಬ ಆಚರಣೆ ವೇಳೆ ಹೃದಯಾಘಾತದಿಂದ ಇಬ್ಬರು ಸಾವು

ಒಂದೇ ಸಮುದಾಯದ ಹೊನಗುಂಟಾ, ಗೋಟಾಳ್ ಕುಟುಂಬಗಳ ನಡುವೆ ಕಲ್ಲು ತೂರಾಟವಾಗಿ ಎಂಟು ಜನರಿಗೆ ಗಾಯಗಳಾಗಿವೆ. ಪ್ರೇಮ ವಿವಾಹಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬದ ನಡುವೆ ಕಳೆದ ಕೆಲ ವರ್ಷಗಳಿಂದ ದ್ವೇಷವಿದ್ದ ಹಿನ್ನೆಲೆ ಗಲಾಟೆ ನಡೆದಿದೆ ಎನ್ನಲಾಗುತ್ತಿದೆ. ವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:47 am, Sun, 30 July 23