ನಿತಿನ್​ ಗಡ್ಕರಿಗೆ ಜೀವ ಬೆದರಿಕೆ ಹಾಕಿದ್ದ ಆರೋಪಿ ಜಯೇಶ್ ಪೂಜಾರಿಯಿಂದ ಕೋರ್ಟ್​ನಲ್ಲೇ ಪಾಕ್​ಪರ ಘೋಷಣೆ

ಬೆಳಗಾವಿ ಹಿಂಡಲಗಾ ಜೈಲಿನಲ್ಲೇ ಇದ್ದುಕೊಂಡು ಕೇಂದ್ರ ಸಚಿವ ನಿತಿನ್​ ಗಡ್ಕರಿ ಮತ್ತು ಎಡಿಜಿಪಿ ಅಲೋಕ್​ ಕುಮಾರ್ ಅವರಿಗೆ ಜೀವ ಬೆದರಿಕೆ ಹಾಕಿದ್ದ ಆರೋಪಿ ನಿತೀಶ್​ ಪೂಜಾರಿ ಇಂದು ಜಿಲ್ಲಾ ನ್ಯಾಯಾಲಯದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ.

ನಿತಿನ್​ ಗಡ್ಕರಿಗೆ ಜೀವ ಬೆದರಿಕೆ ಹಾಕಿದ್ದ ಆರೋಪಿ ಜಯೇಶ್ ಪೂಜಾರಿಯಿಂದ ಕೋರ್ಟ್​ನಲ್ಲೇ ಪಾಕ್​ಪರ ಘೋಷಣೆ
ಆರೋಪಿ ಜಯೇಶ್​ ಪೂಜಾರಿ
Follow us
Sahadev Mane
| Updated By: ವಿವೇಕ ಬಿರಾದಾರ

Updated on: Jun 12, 2024 | 12:50 PM

ಬೆಳಗಾವಿ, ಜೂನ್​​ 12: ಕೇಂದ್ರ ಸಚಿವ ನಿತಿನ್​ ಗಡ್ಕರಿ (Nitin Gadkari) ಮತ್ತು ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ (Alok Kumar) ಅವರಿಗೆ ಜೀವ ಬೆದರಿಕೆ ಹಾಕಿದ್ದ ನಟೋರಿಯಸ್ ಪಾತಕಿ ಜಯೇಶ್ ಪೂಜಾರಿ ಜಿಲ್ಲಾ ನ್ಯಾಯಾಲಯದಲ್ಲೇ ಪಾಕಿಸ್ತಾನ (Pakistan) ಜಿಂದಾಬಾದ್ ಘೋಷಣೆ ಕೂಗಿದ್ದಾನೆ. ಪಾತಕಿ ಜಯೇಶ್ ಪೂಜಾರಿ ಪಾಕಿಸ್ತಾನ ಪರವಾಗಿ ಘೋಷಣೆ ಕೂಗುತ್ತಿದ್ದಂತೆ ವಕೀಲರು ಮತ್ತು ಸಾರ್ವಜನಿಕರು ಆತನಿಗೆ ಧರ್ಮದೇಟು ನೀಡಿದರು. ಧರ್ಮದೇಟು ಬೀಳುತ್ತಿದ್ದಂತೆ ಪಾತಕಿ ಜಯೇಶ್ ಪೂಜಾರಿಯನ್ನು ರಕ್ಷಣೆ ಮಾಡಿ ಪೊಲೀಸರು ಎಪಿಎಂಸಿ ಠಾಣೆಗೆ ಕರೆದುಕೊಂಡು ಹೋದರು.

ಆರೋಪಿ ಜಯೇಶ್ ಪೂಜಾರಿ ಈ ಹಿಂದೆ ರಾಜ್ಯ ಸಂಚಾರ ಹಾಗೂ ರಸ್ತೆ ಸುರಕ್ಷತೆ ಎಡಿಜಿಪಿ ಅಧಿಕಾರಿ ಅಲೋಕ್ ಕುಮಾರ್​ಗೆ ಜೀವ ಬೆದರಿಕೆ ಹಾಗಿದ್ದನು. ಹಿಂಡಲಗಾ ಜೈಲಿನಲ್ಲಿದ್ದುಕೊಂಡು ಜೀವ ಬೆದರಿಕೆ ಹಾಕಿದ್ದನು.

ಐಪಿಎಸ್​ ಅಧಿಕಾರಿ ಅಲೋಕ್​ ಕುಮಾರ್​ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ಜಯೇಶ್ ಪೂಜಾರಿಯನ್ನು ಪೊಲೀಸರು ಇಂದು (ಜೂ.12) ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯದಲ್ಲಿ ತನ್ನ ಅಹವಾಲು ಸ್ವೀಕರಿಸುತ್ತಿಲ್ಲ ಅಂತ ಆರೋಪಿ ಜಯೇಶ್​ ಪೂಜಾರಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ ಎಂದು ತಿದುಬಂದಿದೆ.

ಇದನ್ನೂ ಓದಿ: ಪ್ರಿಯಾಂಕಾ ಜಾರಕಿಹೊಳಿ ಗೆಲುವಿನ ಸಂಭ್ರಮಾಚರಣೆಯಲ್ಲಿ ಮೊಳಗಿದ ಪಾಕ್​ ಪರ ಘೋಷಣೆ

ನಿತಿನ್​ ಗಡ್ಕರಿಗೆ ಜೀವ ಬೆದರಿಕೆ

ಮಂಗಳೂರಿನ ಡಬಲ್ ಮರ್ಡರ್ ಆರೋಪಿ ಹಾಗೂ ವಿವಿಧ ಪ್ರಕರಣಗಳ ಪ್ರಮುಖ ಆರೋಪಿ ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ್ ಕಳೆದ ವರ್ಷ ಜನವರಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಕರೆ ಮಾಡಿದ್ದನು. ಸಚಿವ ನಿತಿನ್ ಗಡ್ಕರಿ ಅವರ ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಕಚೇರಿಗೆ ಬೆದರಿಕೆ ಕರೆ ಮಾಡಿದ್ದನು. 10 ಕೋಟಿ ನೀಡದಿದ್ದರೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದನು. ಪ್ರಕರಣವನ್ನು ದಾಖಲಿಸಿಕೊಂಡು ಮಹಾರಾಷ್ಟ್ರ ಪೊಲೀಸರು ಕರಣದ ತನಿಖೆ ನಡೆಸಿದ್ದರು.

ತನಿಖೆ ವೇಳೆ ಮಂಗಳೂರಿನ ಡಬಲ್ ಮರ್ಡರ್ ಆರೋಪಿ ಹಾಗೂ ವಿವಿಧ ಪ್ರಕರಣಗಳ ಪ್ರಮುಖ ಆರೋಪಿ ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ್​​ ಜನವರಿ 14 ಮತ್ತು ಮಾರ್ಚ್ 21 ರಂದು ಹಿಂಡಲಗಾ ಜೈಲಿನಿಂದ ಸೆಲ್ ಫೋನ್ ಬಳಸಿ ಗಡ್ಕರಿ ಅವರಿಗೆ ಬೆದರಿಕೆ ಕರೆಗಳನ್ನು ಮಾಡಿದ್ದನು ಎಂದು ಪತ್ತೆಯಾಗಿತ್ತು. ಅಲ್ಲದೆ ಈತನಿಗೆ ಭಯೋತ್ಪಾದಕ ಅಫ್ಸರ್ ಪಾಷಾ ನಂಟಿರುವುದು ಪತ್ತೆಯಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್