PSI Recruitment Scam: ಪ್ರಾಮಾಣಿಕ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಸುವರ್ಣಸೌಧದ ಬಳಿ ಪ್ರತಿಭಟನೆ

ಸುವರ್ಣಸೌಧದ ಬಸ್ತವಾಡ ಬಳಿ ಪರೀಕ್ಷೆ ಬರೆದ PSI ಅಭ್ಯರ್ಥಿಗಳಿಂದ ಪ್ರತಿಭಟನೆ ಮಾಡಲಾಗಿದ್ದು, ಪ್ರಾಮಾಣಿಕ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಲಾಗಿದೆ.

PSI Recruitment Scam: ಪ್ರಾಮಾಣಿಕ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಸುವರ್ಣಸೌಧದ ಬಳಿ ಪ್ರತಿಭಟನೆ
PSI Recruitment Scam (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Dec 23, 2022 | 3:04 PM

ಬೆಳಗಾವಿ: 545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಯಲ್ಲಿ ಹಗರಣಕ್ಕೆ (PSI Recruitment Scam) ಸಂಬಂಧಿಸಿದಂತೆ ಪ್ರಾಮಾಣಿಕ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಲಾಗಿದೆ. ಸುವರ್ಣಸೌಧದ ಬಸ್ತವಾಡ ಬಳಿ PSI ಅಭ್ಯರ್ಥಿಗಳಿಂದ ಪ್ರತಿಭಟನೆ ಮಾಡಲಾಗಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳಿಂದ ಹೋರಾಟ ಮಾಡಲಾಗಿದೆ. ಇದೇ ವೇಳೆ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಗೃಹಸಚಿವ ಆರಗ ಜ್ಞಾನೇಂದ್ರ ಮನವಿ ಸ್ವೀಕರಿಸಿದರು. ಬಳಿಕ ಮಾತನಾಡಿ, PSI ಪರೀಕ್ಷೆ ಪಾಸ್ ಆಗಿದ್ದ ವಿದ್ಯಾರ್ಥಿಗಳ ಮನವಿ ಸ್ವೀಕರಿಸಿದ್ದೇನೆ. ಓರ್ವ ಗೃಹಸಚಿವನಾಗಿ ನನಗೆ ಹೇಳಲು ಕಷ್ಟ ಆಗುತ್ತೆ. ಪ್ರಕರಣ ಸದ್ಯ ಕೋರ್ಟ್​ನಲ್ಲಿದೆ. ಸಿಐಡಿ ವರದಿ ಬಂದ ಬಳಿಕ ಕೋರ್ಟ್‌ನಲ್ಲಿ ವಿವಾದ ಡಿಸ್ಚಾರ್ಜ್ ಆದ ಬಳಿಕ ಸರ್ಕಾರ ತನ್ನ ನಿಲುವು ಪ್ರಕಟಿಸುತ್ತೆ ಎಂದು ಹೇಳಿದರು.

ಕಿಂಗ್​ಪಿನ್​ ರುದ್ರಗೌಡ ಪಾಟೀಲ್​ ಮನೆಗೆ ಸಿಐಡಿ ಭೇಟಿ

ಇನ್ನು ಇತ್ತೀಚೆಗೆ ಕಿಂಗ್​ಪಿನ್​ ರುದ್ರಗೌಡ ಪಾಟೀಲ್​ ಮನೆಗೆ ಸಿಐಡಿ ಅಧಿಕಾರಿಗಳು ಭೇಟಿ ನೀಡಿದ್ದರು. 2 ದಿನಗಳ ಹಿಂದೆ ಷರತ್ತುಬದ್ಧ ಜಾಮೀನಿನ ಮೇಲೆ ರುದ್ರಗೌಡ ಪಾಟೀಲ್ ಹೊರಬಂದಿದ್ದರು. ಜೈಲಿನಿಂದ ಹೊರಬಂದ ಬೆನ್ನಲ್ಲೇ ಜಾಮೀನು ಷರತ್ತು ಉಲ್ಲಂಘನೆ ಮಾಡಿದ್ದರು. ಹಾಗಾಗಿ ರುದ್ರಗೌಡ ಪಾಟೀಲ್​ ಮನೆಗೆ ಸಿಐಡಿ ಪೊಲೀಸರು ಭೇಟಿ ನೀಡಿದ್ದರು. ಜೊತೆಗೆ ರುದ್ರಗೌಡ ಪಾಟೀಲ್​ ಕುಟುಂಬಸ್ಥರಿಗೆ ನೋಟಿಸ್ ಜಾರಿಮಾಡಿದ್ದರು. ಕೋರ್ಟ್ ನಿಗದಿತ ವಿಳಾಸದ ಮನೆಯಲ್ಲಿರಬೇಕೆಂದು ಷರತ್ತು ವಿಧಿಸಿತ್ತು. ಕೋರ್ಟ್, ತನಿಖಾಧಿಕಾರಿಗೆ ನೀಡಿರುವ ಮೊಬೈಲ್​ ನಂಬರ್​ನಲ್ಲಿ ಲಭ್ಯವಾಗಿದೆ. ಜಾಮೀನಿನ ಮೇಲೆ ಹೊರಬಂದ ನಂತರ ಸಾಕ್ಷ್ಯನಾಶ ಮಾಡಬಾರದು. ಮೊಬೈಲ್ ನಂಬರ್, ವಿಳಾಸ ಬದಲಿಸಿದರೆ ಗಮನಕ್ಕೆ ತರಬೇಕು ಎಂದು ಕಲಬುರಗಿ ಹೈಕೋರ್ಟ್ ರುದ್ರಗೌಡ ಪಾಟೀಲ್​ಗೆ ಷರತ್ತು ವಿಧಿಸಿತ್ತು.

ಇದನ್ನೂ ಓದಿ: PSI Scam Case: ಜಾಮೀನು ಪಡೆದು ಜೈಲಿನಿಂದ ಬಂದ ಮಹಾಂತೇಶ್ ಪಾಟೀಲ್​ಗೆ ಕಾಂಗ್ರೆಸ್ ನಾಯಕರಿಂದ ಸತ್ಕಾರ

ಇಬ್ಬರು ಪ್ರಮುಖ ಆರೋಪಿಗಳಿಗೆ ಜಾಮೀನು ಮಂಜೂರು

ಹಗರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ಕಿಂಗ್ ಪಿನ್​​ ರುದ್ರಗೌಡ ಪಾಟೀಲ್ ಮತ್ತು ಮಹಾಂತೇಶ್ ಪಾಟೀಲ್​ಗೆ ಕಲಬುರಗಿ ಹೈಕೋರ್ಟ್​ ಪೀಠದಿಂದ ಜಾಮೀನು ಮಂಜೂರು ಮಾಡಲಾಗಿದೆ. ಜಿಲ್ಲೆಯ ಚೌಕ್ ಠಾಣೆಯಲ್ಲಿ ದಾಖಲಾಗಿದ್ದ ಕೇಸ್​ನಲ್ಲಿ ಜಾಮೀನು ನೀಡಲಾಗಿದೆ. ಪ್ರಕರಣದಲ್ಲಿ ಕಿಂಗ್ ಪಿನ್ ರುದ್ರಗೌಡ ಪಾಟೀಲ್​ನ್ನು ಈ ಹಿಂದೆ ಅರೆಸ್ಟ್ ಮಾಡಲಾಗಿತ್ತು. ಸಹಚರರಿಬ್ಬರಿಗ ರುದ್ರಗೌಡ ಜೊತೆ ಮಧ್ಯವರ್ತಿಗಳಾಗಿ ಕೆಲಸ ಮಾಡುತ್ತಿದ್ದ. ಬಂಧಿತ ಆರೋಪಿಗಳು ಬ್ಲೂಟೂತ್ಗಳನ್ನು ಸರಬರಾಜು ಮಾಡುತ್ತಿದ್ದರು. ಜೊತೆಗೆ, ರುದ್ರಗೌಡ ಪಾಟೀಲ್ ಜೊತೆ ಸೇರಿ ಅಭ್ಯರ್ಥಿಗಳ ಜೊತೆ ಡೀಲ್ ಮಾಡುತ್ತಿದ್ದರು. ಅಕ್ರಮವಾಗಿ ಪರೀಕ್ಷೆ ಬರೆಯಲು ಸಿದ್ದರಿದ್ದವರನ್ನು ಹುಡುಕಿ ರುದ್ರಗೌಡ ಪಾಟೀಲ್​ಗೆ ಭೇಟಿ ಮಾಡಿಸುತ್ತಿದ್ದರು.

ಇದನ್ನೂ ಓದಿ: PSI Recruitment Scam: ಪಿಎಸ್​ಐ ನೇಮಕಾತಿ ಪರೀಕ್ಷೆಯಲ್ಲಿ ಮೊದಲ ರ‍್ಯಾಂಕ್ ಪಡೆದಿದ್ದ ಜೇವರ್ಗಿಯ ಸುಪ್ರಿಯಾ ಬಂಧನ

ಎಸ್​ಐ ಹಗರಣದ ಪ್ರಮುಖ ಆರೋಪಿಗೆ ಜಾಮೀನು

ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಆರೋಪಿಗೆ ಹಾಗೂ ಪರೀಕ್ಷೆಯಲ್ಲಿ ಮೊದಲ ರ‍್ಯಾಂಕ್ ಪಡೆದ ಅಭ್ಯರ್ಥಿಗೆ ನ್ಯಾಯಾಲಯವು ಇತ್ತೀಚೆಗೆ ಜಾಮೀನು ಮಂಜೂರು ಮಾಡಿದೆ. ಪಿಎಸ್​ಐ ಹಗರಣದ ಎ1 ಜಾಗೃತ್ ಹಾಗೂ ಮಹಿಳಾ ಕೋಟಾದಲ್ಲಿ ಪ್ರಥಮ ರ‍್ಯಾಂಕ್‌ ಪಡೆದಿದ್ದ ರಚನಾಗೆ ಜಾಮೀನು ನೀಡಲಾಗಿದೆ. ಆರೋಪಿಗಳ ಪರ ವಕೀಲ ಶ್ಯಾಮ್​ಸುಂದರ್​ ಅವರು ವಾದ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.