ಬೆಳಗಾವಿ: 545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಯಲ್ಲಿ ಹಗರಣಕ್ಕೆ (PSI Recruitment Scam) ಸಂಬಂಧಿಸಿದಂತೆ ಪ್ರಾಮಾಣಿಕ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಲಾಗಿದೆ. ಸುವರ್ಣಸೌಧದ ಬಸ್ತವಾಡ ಬಳಿ PSI ಅಭ್ಯರ್ಥಿಗಳಿಂದ ಪ್ರತಿಭಟನೆ ಮಾಡಲಾಗಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳಿಂದ ಹೋರಾಟ ಮಾಡಲಾಗಿದೆ. ಇದೇ ವೇಳೆ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಗೃಹಸಚಿವ ಆರಗ ಜ್ಞಾನೇಂದ್ರ ಮನವಿ ಸ್ವೀಕರಿಸಿದರು. ಬಳಿಕ ಮಾತನಾಡಿ, PSI ಪರೀಕ್ಷೆ ಪಾಸ್ ಆಗಿದ್ದ ವಿದ್ಯಾರ್ಥಿಗಳ ಮನವಿ ಸ್ವೀಕರಿಸಿದ್ದೇನೆ. ಓರ್ವ ಗೃಹಸಚಿವನಾಗಿ ನನಗೆ ಹೇಳಲು ಕಷ್ಟ ಆಗುತ್ತೆ. ಪ್ರಕರಣ ಸದ್ಯ ಕೋರ್ಟ್ನಲ್ಲಿದೆ. ಸಿಐಡಿ ವರದಿ ಬಂದ ಬಳಿಕ ಕೋರ್ಟ್‌ನಲ್ಲಿ ವಿವಾದ ಡಿಸ್ಚಾರ್ಜ್ ಆದ ಬಳಿಕ ಸರ್ಕಾರ ತನ್ನ ನಿಲುವು ಪ್ರಕಟಿಸುತ್ತೆ ಎಂದು ಹೇಳಿದರು.
ಇನ್ನು ಇತ್ತೀಚೆಗೆ ಕಿಂಗ್ಪಿನ್ ರುದ್ರಗೌಡ ಪಾಟೀಲ್ ಮನೆಗೆ ಸಿಐಡಿ ಅಧಿಕಾರಿಗಳು ಭೇಟಿ ನೀಡಿದ್ದರು. 2 ದಿನಗಳ ಹಿಂದೆ ಷರತ್ತುಬದ್ಧ ಜಾಮೀನಿನ ಮೇಲೆ ರುದ್ರಗೌಡ ಪಾಟೀಲ್ ಹೊರಬಂದಿದ್ದರು. ಜೈಲಿನಿಂದ ಹೊರಬಂದ ಬೆನ್ನಲ್ಲೇ ಜಾಮೀನು ಷರತ್ತು ಉಲ್ಲಂಘನೆ ಮಾಡಿದ್ದರು. ಹಾಗಾಗಿ ರುದ್ರಗೌಡ ಪಾಟೀಲ್ ಮನೆಗೆ ಸಿಐಡಿ ಪೊಲೀಸರು ಭೇಟಿ ನೀಡಿದ್ದರು. ಜೊತೆಗೆ ರುದ್ರಗೌಡ ಪಾಟೀಲ್ ಕುಟುಂಬಸ್ಥರಿಗೆ ನೋಟಿಸ್ ಜಾರಿಮಾಡಿದ್ದರು. ಕೋರ್ಟ್ ನಿಗದಿತ ವಿಳಾಸದ ಮನೆಯಲ್ಲಿರಬೇಕೆಂದು ಷರತ್ತು ವಿಧಿಸಿತ್ತು. ಕೋರ್ಟ್, ತನಿಖಾಧಿಕಾರಿಗೆ ನೀಡಿರುವ ಮೊಬೈಲ್ ನಂಬರ್ನಲ್ಲಿ ಲಭ್ಯವಾಗಿದೆ. ಜಾಮೀನಿನ ಮೇಲೆ ಹೊರಬಂದ ನಂತರ ಸಾಕ್ಷ್ಯನಾಶ ಮಾಡಬಾರದು. ಮೊಬೈಲ್ ನಂಬರ್, ವಿಳಾಸ ಬದಲಿಸಿದರೆ ಗಮನಕ್ಕೆ ತರಬೇಕು ಎಂದು ಕಲಬುರಗಿ ಹೈಕೋರ್ಟ್ ರುದ್ರಗೌಡ ಪಾಟೀಲ್ಗೆ ಷರತ್ತು ವಿಧಿಸಿತ್ತು.
ಇದನ್ನೂ ಓದಿ: PSI Scam Case: ಜಾಮೀನು ಪಡೆದು ಜೈಲಿನಿಂದ ಬಂದ ಮಹಾಂತೇಶ್ ಪಾಟೀಲ್ಗೆ ಕಾಂಗ್ರೆಸ್ ನಾಯಕರಿಂದ ಸತ್ಕಾರ
ಹಗರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಮತ್ತು ಮಹಾಂತೇಶ್ ಪಾಟೀಲ್ಗೆ ಕಲಬುರಗಿ ಹೈಕೋರ್ಟ್ ಪೀಠದಿಂದ ಜಾಮೀನು ಮಂಜೂರು ಮಾಡಲಾಗಿದೆ. ಜಿಲ್ಲೆಯ ಚೌಕ್ ಠಾಣೆಯಲ್ಲಿ ದಾಖಲಾಗಿದ್ದ ಕೇಸ್ನಲ್ಲಿ ಜಾಮೀನು ನೀಡಲಾಗಿದೆ. ಪ್ರಕರಣದಲ್ಲಿ ಕಿಂಗ್ ಪಿನ್ ರುದ್ರಗೌಡ ಪಾಟೀಲ್ನ್ನು ಈ ಹಿಂದೆ ಅರೆಸ್ಟ್ ಮಾಡಲಾಗಿತ್ತು. ಸಹಚರರಿಬ್ಬರಿಗ ರುದ್ರಗೌಡ ಜೊತೆ ಮಧ್ಯವರ್ತಿಗಳಾಗಿ ಕೆಲಸ ಮಾಡುತ್ತಿದ್ದ. ಬಂಧಿತ ಆರೋಪಿಗಳು ಬ್ಲೂಟೂತ್ಗಳನ್ನು ಸರಬರಾಜು ಮಾಡುತ್ತಿದ್ದರು. ಜೊತೆಗೆ, ರುದ್ರಗೌಡ ಪಾಟೀಲ್ ಜೊತೆ ಸೇರಿ ಅಭ್ಯರ್ಥಿಗಳ ಜೊತೆ ಡೀಲ್ ಮಾಡುತ್ತಿದ್ದರು. ಅಕ್ರಮವಾಗಿ ಪರೀಕ್ಷೆ ಬರೆಯಲು ಸಿದ್ದರಿದ್ದವರನ್ನು ಹುಡುಕಿ ರುದ್ರಗೌಡ ಪಾಟೀಲ್ಗೆ ಭೇಟಿ ಮಾಡಿಸುತ್ತಿದ್ದರು.
ಇದನ್ನೂ ಓದಿ: PSI Recruitment Scam: ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಮೊದಲ ರ‍್ಯಾಂಕ್ ಪಡೆದಿದ್ದ ಜೇವರ್ಗಿಯ ಸುಪ್ರಿಯಾ ಬಂಧನ
ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಆರೋಪಿಗೆ ಹಾಗೂ ಪರೀಕ್ಷೆಯಲ್ಲಿ ಮೊದಲ ರ‍್ಯಾಂಕ್ ಪಡೆದ ಅಭ್ಯರ್ಥಿಗೆ ನ್ಯಾಯಾಲಯವು ಇತ್ತೀಚೆಗೆ ಜಾಮೀನು ಮಂಜೂರು ಮಾಡಿದೆ. ಪಿಎಸ್ಐ ಹಗರಣದ ಎ1 ಜಾಗೃತ್ ಹಾಗೂ ಮಹಿಳಾ ಕೋಟಾದಲ್ಲಿ ಪ್ರಥಮ ರ‍್ಯಾಂಕ್ ಪಡೆದಿದ್ದ ರಚನಾಗೆ ಜಾಮೀನು ನೀಡಲಾಗಿದೆ. ಆರೋಪಿಗಳ ಪರ ವಕೀಲ ಶ್ಯಾಮ್ಸುಂದರ್ ಅವರು ವಾದ ಮಾಡಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.