Belagavi: ಕಾಂಗ್ರೆಸ್ ನಾಲ್ಕನೇ ಗ್ಯಾರಂಟಿ 3,000 ರೂ. ನಿರುದ್ಯೋಗ ಭತ್ಯೆ; ರಾಹುಲ್ ಗಾಂಧಿ ಘೋಷಣೆ

ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಯುವ ನಿಧಿ ಹೆಸರಿನಲ್ಲಿ ಪ್ರತಿ ತಿಂಗಳು ನಿರುದ್ಯೋಗ ಭತ್ಯೆಯಾಗಿ ಪದವೀಧರರಿಗೆ 3,000 ರೂ, ಡಿಪ್ಲೊಮಾ ಪದವೀಧರರಿಗೆ 1500 ರೂ, ನೀಡಲಾಗುವುದು ಎಂದು ರಾಹುಲ್ ಗಾಂಧಿ ಘೋಷಣೆ ಮಾಡಿದರು.

Follow us
Ganapathi Sharma
|

Updated on:Mar 20, 2023 | 6:41 PM

ಬೆಳಗಾವಿ: ಕಾಂಗ್ರೆಸ್ (Congress) ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಯುವ ನಿಧಿ (Yuva Nidhi) ಹೆಸರಿನಲ್ಲಿ ಪ್ರತಿ ತಿಂಗಳು ನಿರುದ್ಯೋಗ ಭತ್ಯೆಯಾಗಿ ಪದವೀಧರರಿಗೆ 3,000 ರೂ, ಡಿಪ್ಲೊಮಾ ಪದವೀಧರರಿಗೆ 1500 ರೂ, ನೀಡಲಾಗುವುದು ಎಂದು ರಾಹುಲ್ ಗಾಂಧಿ (Rahul Gandhi) ಘೋಷಣೆ ಮಾಡಿದರು. ಬೆಳಗಾವಿಯ ಸಿಪಿಎಡ್​ ಮೈದಾನದಲ್ಲಿ ನಡೆದ ಯುವ ಕ್ರಾಂತಿ ಸಮಾವೇಶದಲ್ಲಿ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ನಾಲ್ಕನೇ ಗ್ಯಾರಂಟಿ ಕಾರ್ಡ್ ಅನ್ನು ಸೋಮವಾರ ಬಿಡುಗಡೆ ಮಾಡಿದರು. ಗೃಹಲಕ್ಷ್ಮೀ ಯೋಜನೆ ಮೂಲಕ ಬಡ ಕುಟುಂಬಗಳ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ, ಬಡವರಿಗೆ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ಹಾಗೂ 10 ಕೆಜಿ ಅಕ್ಕಿಯನ್ನು ನೀಡುವುದಾಗಿ ಕಾಂಗ್ರೆಸ್ ಈಗಾಗಲೇ ಘೋಷಿಸಿವೆ. ಅಧಿಕಾರಕ್ಕೆ ಬಂದರೆ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು 3,000 ರೂ. ನೀಡುವುದಾಗಿ ಕೆಲವು ದಿನಗಳ ಹಿಂದಷ್ಟೇ ಆಮ್​ ಆದ್ಮಿ ಪಕ್ಷ ಘೋಷಣೆ ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಕೂಡ ನಿರುದ್ಯೋಗ ಭತ್ಯೆಯ ಭರವಸೆ ನೀಡಿದೆ.

ಇದು ಅದಾನಿ ಭಾರತವಲ್ಲ, ರೈತರ ಭಾರತ; ರಾಹುಲ್ ಗಾಂಧಿ

ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇದು ಉದ್ಯಮಿ ಅದಾನಿಯ ಭಾರತವಲ್ಲ, ಇದು ರೈತರ, ಯುವಕರ ಭಾರತ. ದೇಶದಲ್ಲಿ ಇಂದು ದ್ವೇಷದ ಭಾವನೆ ಬಿತ್ತಲಾಗುತ್ತಿದೆ. ಕರ್ನಾಟಕ ಸರ್ಕಾರ ಯುವಕರಿಗೆ ಉದ್ಯೋಗ ನೀಡುತ್ತಿಲ್ಲ. ಕರ್ನಾಟಕ ಸರ್ಕಾರ ಭ್ರಷ್ಟಾಚಾರದಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ. ಕರ್ನಾಟಕದಲ್ಲಿ ಗುತ್ತಿಗೆದಾರರ ಬಳಿ 40% ಕಮಿಷನ್ ಪಡೆಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದರೂ ಈವರೆಗೆ ಅವರು ಕ್ರಮ ಕೈಗೊಂಡಿಲ್ಲ ಎಂದು ರಾಹುಲ್ ಗಾಂಧಿ ಟೀಕಿಸಿದರು.

ಪದವೀಧರ ಪ್ರತಿ ಯುವಕರಿಗೆ ನಾವು 3 ಸಾವಿರ ರೂ. ನಿರುದ್ಯೋಗ ಭತ್ಯೆ ನೀಡಲಿದ್ದೇವೆ. 2 ವರ್ಷಗಳ ಕಾಲ ಪ್ರತಿ ತಿಂಗಳು ಪದವೀಧರ ಯುವಕರಿಗೆ 3 ಸಾವಿರ ರೂ. ನೀಡಲಿದ್ದೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾತ್ರ ಇದು ಸಾಧ್ಯ ಎಂದು ಅವರು ಹೇಳಿದರು.

ಇದನ್ನೂ ಓದಿ: Karnataka polls: ಎಎಪಿ ಅಧಿಕಾರಕ್ಕೆ ಬಂದರೆ ನಿರುದ್ಯೋಗಿ ಯುವಕರಿಗೆ ಸಿಗಲಿದೆ ಪ್ರತಿ ತಿಂಗಳು ಹಣ; ಪ್ರಣಾಳಿಕೆಯಲ್ಲಿ ಏನೇನಿದೆ ನೋಡಿ

ಕರ್ನಾಟಕದ ಮೂಲಕ ಭಾರತ್ ಜೋಡೋ ಯಾತ್ರೆ ಹಾದುಹೋಗಿತ್ತು. ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಯುವಕರು, ವೃದ್ಧರು ಎಲ್ಲರೂ ಭಾಗಿಯಾಗಿದ್ದರು ಎಂದು ರಾಹುಲ್ ನೆನಪಿಸಿಕೊಂಡರು.

ಬೆಳಗಾವಿಯಲ್ಲಿ 18 ಸ್ಥಾನ ಗೆಲ್ಲುತ್ತೇವೆ; ಖರ್ಗೆ

ಈಗ ಚುನಾವಣೆ ಸಮೀಪಿಸುತ್ತಿದೆ. ಇದು ಕರ್ನಾಟಕ ರಾಜ್ಯಕ್ಕೆ ಬಹಳ ಮಹತ್ವದ ಚುನಾವಣೆಯಾಗಿದೆ. ಇಡೀ ದೇಶಕ್ಕೂ ಒಂದು ಸಂದೇಶ ಕೊಡುವ ಚುನಾವಣೆಯಾಗಲಿದೆ. ಒಗ್ಗಟ್ಟಿನಿಂದ ಈ ಚುನಾವಣೆಯನ್ನು ನಾವೆಲ್ಲರೂ ಎದುರಿಸಬೇಕಾಗಿದೆ. ಎಐಸಿಸಿ ಅಧ್ಯಕ್ಷರಾದ ಮೇಲೆ ಮೊದಲ ಬಾರಿಗೆ ನಾನು ಇಲ್ಲಿಗೆ ಬಂದಿದ್ದೇನೆ. ಬೆಳಗಾವಿ ಕಾಂಗ್ರೆಸ್‌ಗೆ ಒಂದು ಪವಿತ್ರವಾದ ಭೂಮಿಯಾಗಿದೆ. ಕಾಂಗ್ರೆಸ್ ಅಧಿವೇಶನದಲ್ಲಿ ಅಧ್ಯಕ್ಷರಾಗಿ ಮಹಾತ್ಮ ಗಾಂಧೀಜಿ ಬೆಳಗಾವಿಯಲ್ಲಿ ನಡೆದ ಸಮಾವೇಶದಲ್ಲಿ ಭಾಗಿಯಾಗಿದ್ದರು. ಇಂದು ಅದೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷನ್ನಾಗಿ ನನ್ನನ್ನು ಕುಳ್ಳಿರಿಸಿದ್ದೀರಿ. ಒಂದು ಕಾಲದಲ್ಲಿ ಬೆಳಗಾವಿ ಕಾಂಗ್ರೆಸ್​​ನ ಶಕ್ತಿಶಾಲಿ ಜಿಲ್ಲೆಯಾಗಿತ್ತು. ಹದಿನೆಂಟರಲ್ಲಿ ಹದಿನೈದು ಹದಿನಾರು ಸ್ಥಾನ ಗೆಲ್ಲುತ್ತಿದ್ದೆವು. ಇಂದು ಆ ಪರಿಸ್ಥಿತಿ ಇದೆ, ಖಂಡಿತವಾಗಿ ಹದಿನೆಂಟು ಸ್ಥಾನವನ್ನು ಬೆಳಗಾವಿಯಲ್ಲಿ ಗೆಲ್ಲುತ್ತೇವೆ ಎಂದು ಮಲ್ಲಿಕಾರ್ಜುನ ಖರ್ಗೆ ಭರವಸೆ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:05 pm, Mon, 20 March 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್