ಬೆಳಗಾವಿ-ಗೋವಾ ಸಂಪರ್ಕ ಕಲ್ಪಿಸುವ ರಸ್ತೆ ಬಂದ್! ಬದಲಿ ಮಾರ್ಗ ಸೂಚಿಸಿದ ಆಯುಕ್ತರು
ನಿರಂತರ ಮಳೆಯಿಂದ ನಿರಂತರ ಮಳೆಯಿಂದ ಕಾರವಾರದಂತೆಯೇ ಗೋವಾದಲ್ಲಿಯೂ ಭೂಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಬೆಳಗಾವಿಯಿಂದ ಗೋವಾ ಸಂಚರಿಸುವ ಭಾರಿ ವಾಹನಗಳ ಚಾಲಕರಿಗೆ ಬದಲಿ ಮಾರ್ಗ ಸೂಚಿಸಿದ್ದಾರೆ.
ಬೆಳಗಾವಿ, ಜುಲೈ 20: ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ (Rain) ಬೆಳಗಾವಿಯ (Belagavi) ಜಾಂಬೋಟಿ, ಚೋರ್ಲಾದಲ್ಲಿ ಹಲವು ಸೇತುವೆಗಳು ಶಿಥಿಲಗೊಂಡವೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯಿಂದ ಗೋವಾ (Belagavi-Goa) ಸಂಚರಿಸುವ ಭಾರಿ ವಾಹನಗಳ ಚಾಲಕರಿಗೆ ಬದಲಿ ಮಾರ್ಗ ಸೂಚಿಸಲಾಗಿದೆ. ಬೆಳಗಾವಿಯಿಂದ ತೆರಳುವವರು ಪೀರನವಾಡಿಯಿಂದ ಎಡಕ್ಕೆ ತಿರುವು ಪಡೆದುಕೊಂಡು, ಖಾನಾಪುರ ಮಾರ್ಗವಾಗಿ ಗೋವಾಗೆ ಹೋಗುವಂತೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಸೂಚನೆ ನೀಡಿದ್ದಾರೆ.
ನಿರಂತರ ಮಳೆಯಿಂದ ಕಾರವಾರದಂತೆಯೇ ಗೋವಾದಲ್ಲಿಯೂ ಭೂಕುಸಿತ ಉಂಟಾಗಿದೆ. ದೂಧ್ ಸಾಗರ ದೇವಸ್ಥಾನದ ಸಮೀಪವಿರಿವ ಅನ್ಮೋದ್ ಘಾಟ್ನಲ್ಲಿ ಭಾರಿ ಭೂಕುಸಿತ ಉಂಟಾಗಿದ್ದು, ಬೆಳಗಾವಿ-ಗೋವಾ ಮಾರ್ಗದಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಇಡೀ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ರಸ್ತೆ ಮೇಲೆ ಬಿದ್ದ ಬಂಡೆ ಮತ್ತು ಮಣ್ಣು ತೆರವು ಕಾರ್ಯ ನಡೆಯುತ್ತಿದೆ.
ಮಹಾರಾಷ್ಟ್ರ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಅಬ್ಬರ ಮುಂದುವರೆದ ಹಿನ್ನೆಲೆಯಲ್ಲಿ ನಿಪ್ಪಾಣಿ ತಾಲೂಕಿನ ಹಲವು ಗ್ರಾಮಗಳಿಗೆ ನೆರೆಯ ಆತಂಕ ಶುರುವಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ದೂದಗಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕಾರದಗಾ ಗ್ರಾಮ ಹೊರವಲಯದಲ್ಲಿರುವ ಬಂಗಾಲಿಬಾಬಾ ದರ್ಗಾವನ್ನು ನೀರು ಸುತ್ತುವರೆದಿದೆ. ನೀರು ಇನ್ನೂ ಏರಿಕೆಯಾದರೆ ನದಿ ನೀರು ಗ್ರಾಮಕ್ಕೆ ನುಗ್ಗುವ ಸಾಧ್ಯತೆ. ಹೀಗಾಗಿ ಕಾರದಗಾ ಗ್ರಾಮದ ಜನರು ಪ್ರವಾಹದ ಭೀತಿಯಲ್ಲಿದ್ದಾರೆ.
ಇದನ್ನೂ ಓದಿ: ಮಳೆಗೆ ಕುಸಿದ ಮನೆ, 2 ಇಟ್ಟಿಗೆಗಳಿಂದ ಸಾವಿನ ದವಡೆಯಿಂದ ಪಾರಾದ ಕುಟುಂಬ
ಬೆಳಗಾವಿಯ ಹೊಲ ಗದ್ದೆಗಳಿಗೆ ಬಳ್ಳಾರಿ ನಾಲೆ ನುಗ್ಗಿ ಅವಾಂತರ ಸೃಷ್ಟಿಸಿಯಾಗಿದೆ. ಭತ್ತ ಕಬ್ಬು, ಮೆಕ್ಕೆಜೋಳ ಬೆಳೆಗಳು ನೀರಲ್ಲಿ ತೇಲುತ್ತಿವೆ. ಪ್ರತಿ ವರ್ಷವೂ ಬಳ್ಳಾರಿ ನೆಲೆಯಿಂದ ಸಾವಿರಾರು ಎಕರೆ ಪ್ರದೇಶಕ್ಕೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗುತ್ತದೆ. ಬಳ್ಳಾರಿ ನಾಲಾ ನೀರು ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿರುವುದರಿಂದ ಬೆಳಗಾವಿ ನಗರಕ್ಕೆ ಹೊಂದಿಕೊಂಡಿರುವ ವಡಗಾಂವ್, ಅನಗೋಳ, ಶಹಾಪುರ್, ಹಳೆ ಬೆಳಗಾವಿಗೆ ಬಳ್ಳಾರಿ ನಾಲಾ ನೀರು ನುಗ್ಗುವ ಸಾಧ್ಯತೆ ಇದ್ದು, ಜನರಲ್ಲಿ ಆತಂಕ ಹೆಚ್ಚಿದೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಪಟ್ಟಿಹಾಳ ಗ್ರಾಮದಲ್ಲಿ ನಿರಂತರ ಮಳೆಗೆ ತಡರಾತ್ರಿ ಮನೆ ಕುಸಿದು ಬಿದ್ದಿದೆ. ಮನೆ ಕುಸಿಯುತ್ತಿದ್ದಂತೆ ಮನೆಯ ಸದಸ್ಯರು ಹೊರ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಬಸಪ್ಪ ಹಡಪದ ಎಂಬುವವರಿಗೆ ಸೇರಿದ ಮನೆ ಕುಸಿತವಾಗ್ತಿದ್ದಂತೆ ಐದು ಜನ ಸದಸ್ಯರು ಹೊರ ಬಂದಿದ್ದಾರೆ. ಮನೆಯ ಸಾಮಾಗ್ರಿ ಸೇರಿದಂತೆ ಎಲ್ಲವನ್ನೂ ಕಳೆದುಕೊಂಡು ಕುಟುಂಬ ಬೀದಿ ಪಾಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ