ಬೆಳಗಾವಿಯಲ್ಲಿ ಮತ್ತೊಂದು ಭೀಕರ ಅಪಘಾತ; ಸ್ಥಳದಲ್ಲೇ ಐವರು ದುರ್ಮರಣ
ಬೆಳಗಾವಿ ಜಿಲ್ಲೆಯ ಯರಗಟ್ಟಿ (Yaragatti) ತಾಲೂಕಿನ ಕುರಬಗಟ್ಟಿ ಬಳಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿತ್ತು. ಇದೀಗ ರಾಯಬಾಗ ತಾಲೂಕಿನ ಮುಗಳಖೋಡ ಬಳಿಯ ಜತ್ತ-ಜಾಂಬೋಟಿ ರಸ್ತೆಯಲ್ಲಿ ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಳಗಾವಿ, ಫೆ.23: ಅಪಘಾತ ಕುರಿತು ಸಂಚಾರ ಪೊಲೀಸರು ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರು ಇದಕ್ಕೆ ಬ್ರೇಕ್ ಹಾಕಲಾಗುತ್ತಿಲ್ಲ. ಅದರಂತೆ ಇದೀಗ ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ (Raybag) ತಾಲೂಕಿನ ಮುಗಳಖೋಡ ಕಾಲುವೆ ಬಳಿ ಜತ್ತ-ಜಾಂಬೋಟಿ ರಸ್ತೆಯಲ್ಲಿ ಸಂಭವಿಸಿದೆ. ಗುರ್ಲಾಪುರದ ಮಲ್ಲಿಕಾರ್ಜುನ ಮರಾಠೆ(16), ಲಕ್ಷ್ಮೀ ಮರಾಠೆ(19 ), ಆಕಾಶ್ ಮರಾಠೆ(19), ಬೈಕ್ ಸವಾರರಾದ ನಿಪನಾಳ ಗ್ರಾಮದ ಶ್ರೀಕಾಂತ್ ಪಡತರಿ(22) ಹಾಗೂ ಮುಗಳಖೋಡ ನಿವಾಸಿ ನಾಗಪ್ಪ ಯಡವನ್ನವರ್(48) ಮೃತರು. ಬೈಕ್‌ಗೆ ಡಿಕ್ಕಿಯಾದ ಬಳಿಕ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದೆ. ಈ ಕುರಿತು ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್, ಕಾರು ನಡುವೆ ಅಪಘಾತ; ಇಬ್ಬರು ಸಾವು
ಮೈಸೂರು: ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿದ ಘಟನೆ ಮೈಸೂರು ತಾಲೂಕಿನ ಹೊಸಹುಂಡಿ ಬಳಿ ನಡೆದಿದೆ. ಮಂಜುನಾಥ್(50) ಹಾಗೂ ವೆಂಕಟೇಶ್(48) ಮೃತ ರ್ದುದೈವಿಗಳು. ಟಿ ನರಸೀಪುರದ ಕಡೆಯಿಂದ ಬರುತ್ತಿದ್ದ ಬೈಕ್‌ಗೆ ಹಿಂದಿನಿಂದ ಬಂದ ಡಿಕ್ಕಿ ಹೊಡೆದಿದೆ. ಈ ಹಿನ್ನಲೆ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮೈಸೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಬೆಳಗಾವಿ: ಎರಡು ಕಾರುಗಳ ನಡುವೆ ಡಿಕ್ಕಿ;ಮೂವರು ಸ್ಥಳದಲ್ಲೇ ಸಾವು
ಪ್ರದಕ್ಷಿಣೆ ಹಾಕುವಾಗ ಹೃದಯಾಘಾತದಿಂದ ವಿದೇಶಿಗ ಸಾವು
ಉತ್ತರ ಕನ್ನಡ: ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರ ದೇಗುಲದಲ್ಲಿ ಪ್ರದಕ್ಷಿಣೆ ಹಾಕುವಾಗ ಹೃದಯಘಾತದಿಂದ ವಿದೇಶಿ ಪ್ರಜೆ ಸಾವನ್ನಪ್ಪಿದ್ದಾನೆ. ರಷ್ಯಾ ಮೂಲದ ಅಲೆಗ್ಸಾಂಡರ್ ತನೆಗಾ(71) ಮೃತ ರ್ದುದೈವಿ. ಮೂವರು ಸ್ನೇಹಿತರೊಂದಿಗೆ ಗೋವಾ, ಮುರ್ಡೇಶ್ವರ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ದುರ್ಘಟನೆ ನಡೆದಿದೆ. ಈ ಕುರಿತು ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:57 pm, Fri, 23 February 24