AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಅಧಿವೇಶನದಲ್ಲಿ ಇಂದಿನಿಂದ ಅಸಲಿ ಕದನ: 20 ಸಾವಿರ ರೈತರೊಂದಿಗೆ ಸುವರ್ಣಸೌಧ ಮುತ್ತಿಗೆಗೆ ಬಿಜೆಪಿ ಸಜ್ಜು

Karnataka Winter Session; ಬೆಳಗಾವಿ ಅಧಿವೇಶನದಲ್ಲಿ ಬಿಜೆಪಿ ರೈತರ ಸಮಸ್ಯೆಗಳ ಮುಂದಿಟ್ಟುಕೊಂಡು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬೃಹತ್ ಪ್ರತಿಭಟನೆಗೆ ಮುಂದಾಗಿದೆ. ಉತ್ತರ ಕರ್ನಾಟಕದ ಅಭಿವೃದ್ಧಿ, ಬೆಳೆಹಾನಿ ಪರಿಹಾರಕ್ಕೆ ಆಗ್ರಹಿಸಿ 20 ಸಾವಿರ ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಸಿದ್ಧತೆ ನಡೆಸಿದೆ. ದೊಡ್ಡ ಮಟ್ಟದ ಹೋರಾಟದ ನಿರೀಕ್ಷೆಯಿದೆ.

ಬೆಳಗಾವಿ ಅಧಿವೇಶನದಲ್ಲಿ ಇಂದಿನಿಂದ ಅಸಲಿ ಕದನ: 20 ಸಾವಿರ ರೈತರೊಂದಿಗೆ ಸುವರ್ಣಸೌಧ ಮುತ್ತಿಗೆಗೆ ಬಿಜೆಪಿ ಸಜ್ಜು
ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಭಟನಾ ಸಮಾವೇಶದ ಸ್ಥಳ ಪರಿಶೀಲಿಸಿದರು.
Sahadev Mane
| Edited By: |

Updated on:Dec 09, 2025 | 8:42 AM

Share

ಬೆಳಗಾವಿ, ಡಿಸೆಂಬರ್ 9: ಚಳಿಯ ನಡುವೆಯೂ ಬೆಳಗಾವಿ ಅಧಿವೇಶನದಲ್ಲಿ (Belagavi Session) ಇವತ್ತಿನಿಂದ ಕಾವು ಏರುವ ಸಾಧ್ಯತೆ ಇದೆ. ಸೋಮವಾರ ವಿಧಾನಪರಿಷತ್‌ನಲ್ಲಿ ಬೇರೆ ಬೇರೆ ವಿಚಾರಗಳು ಸ್ವಲ್ಪ ಸದ್ದು ಮಾಡಿದವು. ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಷ್ಟೇ ವಿಧಾನಸಭೆ ಕಲಾಪ ಸೀಮಿತವಾಗಿತ್ತು. ಆದರೆ ಇಂದಿನಿಂದ ಅಸಲಿ ಚರ್ಚೆ ಶುರುವಾಗಲಿದೆ. ಅದರಲ್ಲೂ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷ ಬಿಜೆಪಿ ರೈತಾಸ್ತ್ರ ಬಿಡಲು ಮುಂದಾಗಿದೆ.

ಬೆಳಗಾವಿಯ ಮಾಲಿನಿ ಸಿಟಿ ಮೈದಾನದಲ್ಲಿ ಬಿಜೆಪಿ ಪ್ರತಿಭಟನೆ ನಡೆಯಲಿದೆ. ಬೃಹತ್ ಪ್ರತಿಭಟನೆ ನಡೆಸುವ ಮೂಲಕ 20 ಸಾವಿರ ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ತಯಾರಿ ಮಾಡಿಕೊಂಡಿದೆ. ಉತ್ತರ ಕರ್ನಾಟಕ ಬಗ್ಗೆ ಚರ್ಚೆಗೆ ಪಟ್ಟುಹಿಡಿದಿರುವ ಬಿಜೆಪಿ, ಸೋಮವಾರ ಬಿಎಸಿ ಸಭೆಯಲ್ಲಿ ನಿಲುವಳಿ ನೋಟಿಸ್ ನೀಡಿದೆ. ಕಬ್ಬು ಬೆಳೆಗಾರರು, ಮೆಕ್ಕೆಜೋಳ, ಭತ್ತ, ತೊಗರಿ ಬೆಳೆಗಾರರಿಗೆ ಅನ್ಯಾಯವಾಗಿದೆ. ಪ್ರವಾಹ ಪರಿಹಾರ, ಅಭಿವೃದ್ಧಿಯಲ್ಲಿ ಉತ್ತರ ಕರ್ನಾಟಕ ಕಡೆಗಣನೆ ಹೀಗೆ ಹಲವು ವಿಚಾರ ಮುಂದಿಟ್ಟು ಸದನದ ಒಳಗೆ ಮತ್ತು ಹೊರಗೂ ಹೋರಾಟಕ್ಕೆ ಕರೆಕೊಟ್ಟಿದೆ.

ಸೋಮವಾರ ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಭಟನಾ ಸಮಾವೇಶದ ಸ್ಥಳ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಸಿ. ಟಿ. ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್‌, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಶಾಸಕ ವಿಠ್ಠಲ ಹಲಗೇಕರ್, ಅಭಯ್ ಪಾಟೀಲ್ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ಮಾಜಿ ಶಾಸಕ ಸಂಜಯ್ ಪಾಟೀಲ್, ಬೆಳಗಾವಿ ಜಿಲ್ಲಾಧ್ಯಕ್ಷೆ ಗೀತಾ ಸುತಾರ, ಬೆಳಗಾವಿ ಗ್ರಾಮಾಂತರ ಅಧ್ಯಕ್ಷ ಶ್ರೀ ಸುಭಾಷ್ ಪಾಟೀಲ್ ಮತ್ತು ಪ್ರಮುಖರು ಉಪಸ್ಥಿತರಿದ್ದರು.

ನಂತರ ಮಾತನಾಡಿದ ಅಶೋಕ್, ರಾಜ್ಯದಲ್ಲಿ 2400 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಜಾನೆ ಖಾಲಿ ಖಾಲಿಯಾಗಿದೆ. ಕಾಂಗ್ರೆಸ್‌​ನವರು ಜಾಲಿ ಜಾಲಿ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ, ಸುವರ್ಣಸೌಧಕ್ಕೆ ಮುತ್ತಿಗೆ ಹಾಕುತ್ತೇವೆ. ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಅನ್ನಭಾಗ್ಯ ಅಕ್ಕಿ ದುಬೈನಲ್ಲಿ ಮಾರಾಟವಾಗುತ್ತಿದ್ಯಾ? ಕಾಂಗ್ರೆಸ್-ಬಿಜೆಪಿ ಜಟಾಪಟಿ

ಮತ್ತೊಂದೆಡೆ, ಬಿಜೆಪಿ ನಾಯಕರ ಈ ಹೋರಾಟಕ್ಕೆ ಕಾಂಗ್ರೆಸ್ ನಾಯಕರು ತಿರುಗೇಟುಕೊಟ್ಟಿದ್ದಾರೆ. ಮೊದಲು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ ಎಂದಿದ್ದಾರೆ.

ರೈತರೊಂದಿಗೆ ಬಿಜೆಪಿ ಪ್ರತಿಭಟನೆ ವೇಳೆ ದೊಡ್ಡ ಹಂಗಾಮವೇ ನಡೆಯುವ ಸಾಧ್ಯತೆಯಿದೆ. ಮುಂಜಾಗ್ರತಾ ಕ್ರಮವಾಗಿ ವ್ಯಾಪಕ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:41 am, Tue, 9 December 25

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್