AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

400 ಕೋಟಿ ರೂ. ದರೋಡೆ ಪ್ರಕರಣದ ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಬಂಧನ

ಚೋರ್ಲಾ ಘಾಟ್​ನಲ್ಲಿ 400 ಕೋಟಿ ರೂ. ರದ್ದಾದ ನೋಟುಗಳ ದರೋಡೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಕಿಶೋರ್ ಸಾಳ್ವೆಯನ್ನು ಬಂಧಿಸಲಾಗಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಪ್ರಕರಣದ ಗಂಭೀರತೆ ಪರಿಗಣಿಸಿ ಮಹಾರಾಷ್ಟ್ರ ಸರ್ಕಾರ ಎಸ್‌ಐಟಿ ತನಿಖೆಯನ್ನು ಕಟ್ಟುನಿಟ್ಟಾಗಿ ಮುಂದುವರೆಸುವಂತೆ ಸೂಚಿಸಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಸತ್ಯಾಂಶಗಳು ಹೊರಬೀಳುವ ನಿರೀಕ್ಷೆಯಿದೆ.

400 ಕೋಟಿ ರೂ. ದರೋಡೆ ಪ್ರಕರಣದ ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಬಂಧನ
ಸಾಂದರ್ಭಿಕ ಚಿತ್ರImage Credit source: TV9 Network
ಸಹದೇವ್​ ಮಾನೆ
| Edited By: |

Updated on: Feb 01, 2026 | 9:21 AM

Share

ಬೆಳಗಾವಿ, ಫೆಬ್ರವರಿ 1: ಕರ್ನಾಟಕ-ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟ್‌ನಲ್ಲಿ ಎರಡು ಕಂಟೇನರ್‌ಗಳಲ್ಲಿದ್ದ ಅಂದಾಜು 400 ಕೋಟಿ ರೂ. ಮೌಲ್ಯದ ರದ್ದಾದ ನೋಟುಗಳ ದರೋಡೆ (400 Crore Robbery Case) ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಕಿಶೋರ್ ಸಾಳ್ವೆಯನ್ನು ಬಂಧಿಸಲಾಗಿದೆ. ಇದರೊಂದಿಗೆ, ಪ್ರಕರಣ ಸಂಬಂಧ ಮತ್ತಷ್ಟು ಮಾಹಿತಿ ಹೊರಬೀಳುವ ಸಾಧ್ಯತೆ ಇದೆ. ಕಿಶೋರ್ ಸಾಳ್ವೆ, ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಘೋಟಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ನಂತರ ಆತನನ್ನು ಬಂಧಿಸಲಾಗಿದೆ.

ಕಿಶೋರ್ ಸಾಳ್ವೆ ಬಂಧನದೊಂದಿಗೆ ದರೋಡೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಪ್ರಕರಣದ ಗಂಭೀರತೆಯನ್ನು ಮನಗಂಡಿರುವ ಮಹಾರಾಷ್ಟ್ರ ಸರ್ಕಾರ, ತನಿಖೆಯನ್ನು ಕಟ್ಟುನಿಟ್ಟಾಗಿ ಮುಂದುವರೆಸಲು ಸೂಚನೆ ನೀಡಿದೆ.

ಈ ಪ್ರಕರಣದಲ್ಲಿ ದೂರುದಾರರಾಗಿರುವ ಸಂದೀಪ್ ಪಾಟೀಲ್ ಅವರ ಕಿಡ್ನ್ಯಾಪ್ ಮತ್ತು 400 ಕೋಟಿ ರೂ. ದರೋಡೆ ಸಂಬಂಧಿತ ಅಂಶಗಳ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ವೈರಲ್ ಆಗಿರುವ ಆಡಿಯೋ ಸಂಭಾಷಣೆಗಳನ್ನೂ ಎಸ್‌ಐಟಿ ಪರಿಶೀಲನೆಗೆ ತೆಗೆದುಕೊಂಡಿದೆ.

ಎಸ್‌ಐಟಿ ತನಿಖೆಯ ವಿರುದ್ಧವೇ ದೂರುದಾರ ಸಂದೀಪ್ ಪಾಟೀಲ್ ಇತ್ತೀಚೆಗೆ ಆರೋಪಗಳನ್ನು ಮಾಡಿದ್ದರು. ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದ ಅವರು, ತನಿಖೆಯಲ್ಲಿ ಪಾರದರ್ಶಕತೆ ಇಲ್ಲ. ಒತ್ತಡ ಮತ್ತು ಏಕಪಕ್ಷೀಯ ತನಿಖೆ ನಡೆಯುತ್ತಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಕರ್ನಾಟಕದಲ್ಲಿ ದೂರು ನೀಡುವ ಬಗ್ಗೆಯೂ ಚಿಂತನೆ ನಡೆಸಿದ್ದಾರೆ ಎಂದು ವರದಿಯಾಗಿತ್ತು.

400 ಕೋಟಿ ರೂ. ದರೋಡೆ ಹಿನ್ನೆಲೆ

ಬೆಳಗಾವಿ ಜಿಲ್ಲೆಯ ಚೋರ್ಲಾ ಘಾಟ್ ಪ್ರದೇಶದಲ್ಲಿ 2025 ರ ಅಕ್ಟೋಬರ್ 25 ರಂದು ಎರಡು ಕಂಟೇನರ್‌ಗಳಲ್ಲಿದ್ದ ಸುಮಾರು 400 ಕೋಟಿ ರೂ. ಹಣವನ್ನು ದರೋಡೆ ಮಾಡಲಾಗಿತ್ತು ಎಂದು ಮಹಾರಾಷ್ಟ್ರದ ನಾಸಿಕ್ ಮೂಲದ ಉದ್ಯಮಿ ಸಂದೀಪ್ ದತ್ತಾ ಪಾಟೀಲ್ ಇತ್ತೀಚೆಗೆ ಮಹಾರಾಷ್ಟ್​ರ ಪೊಲೀಸರಿಗೆ ದೂರು ನೀಡಿದ್ದರು. ಅದರೊಂದಿಗೆ, ಪ್ರಕರಣ ಬೆಳಕಿಗೆ ಬಂದಿದ್ದು ದೇಶದಾದ್ಯಂತ ಸಂಚಲನ ಮೂಡಿಸಿತ್ತು. ದೂರುದಾರರ ಪ್ರಕಾರ, ದರೋಡೆಯಾದ ಹಣವು ಗುಜರಾತ್ ಮೂಲದ ಬಿಲ್ಡರ್ ಕಿಶೋರ್ ಸವಲಾ ಸೇಠ್‌ ಅವರಿಗೆ ಸೇರಿದ್ದು, ಅದರಲ್ಲಿ ರದ್ದಾದ 2,000 ರೂ. ಮುಖಬೆಲೆಯ ನೋಟುಗಳೂ ಇದ್ದವು ಎನ್ನಲಾಗಿದೆ.

ಇದನ್ನೂ ಓದಿ: 400 ಕೋಟಿ ದರೋಡೆ ಪ್ರಕರಣಕ್ಕೆ ಸಿಗುತ್ತಾ ಮತ್ತೊಂದು ಟ್ವಿಸ್ಟ್? ಕರ್ನಾಟಕದಲ್ಲಿ ದೂರು ದಾಖಲಿಸಲು ಮುಂದಾದ ಸಂದೀಪ್ ಪಾಟೀಲ್

ಸದ್ಯ ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಬಂಧನದ ಹಿನ್ನೆಲೆ, ಮುಂದಿನ ದಿನಗಳಲ್ಲಿ ಇನ್ನಷ್ಟು ಸತ್ಯಾಂಶಗಳು ಹೊರಬೀಳುವ ನಿರೀಕ್ಷೆಯಿದೆ. ತನಿಖಾಧಿಕಾರಿಗಳು ಎಲ್ಲಾ ಆಯಾಮಗಳಿಂದಲೂ ಪ್ರಕರಣವನ್ನು ಪರಿಶೀಲಿಸುತ್ತಿದ್ದಾರೆ ಎಂದು ಎಸ್​ಐಟಿ ಮೂಲಗಳು ತಿಳಿಸಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’