AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈನಿಕ ಶಾಲೆ ಪ್ರವೇಶ ಪರೀಕ್ಷೆಯಲ್ಲಿ ಐವರಿಗೆ ಪ್ರತ್ಯೇಕ ವ್ಯವಸ್ಥೆಯ ಗೊಂದಲ: ಪೋಷಕರ ಆಕ್ರೋಶ

ಸರ್ಕಾರದ ಹಿರಿಯ ಅಧಿಕಾರಿಯೊಬ್ಬರ ಪುತ್ರಿಯೂ ಸೇರಿದಂತೆ ಇತರ ಸರ್ಕಾರಿ ನೌಕರರ ಐವರು ಮಕ್ಕಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಅವಧಿಗೂ ಮುನ್ನವೇ ಪ್ರಶ್ನಪತ್ರಿಕೆ ನೀಡಲಾಗಿತ್ತು ಎಂದು ಪೋಷಕರು ದೂರಿದರು.

ಸೈನಿಕ ಶಾಲೆ ಪ್ರವೇಶ ಪರೀಕ್ಷೆಯಲ್ಲಿ ಐವರಿಗೆ ಪ್ರತ್ಯೇಕ ವ್ಯವಸ್ಥೆಯ ಗೊಂದಲ: ಪೋಷಕರ ಆಕ್ರೋಶ
ಬೆಳಗಾವಿಯಲ್ಲಿ ಪೋಷಕರ ಪ್ರತಿಭಟನೆ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jan 09, 2022 | 6:13 PM

Share

ಬೆಳಗಾವಿ: ಸೈನಿಕ ಶಾಲೆ ಪ್ರವೇಶಕ್ಕೆ ಭಾನುವಾರ (ಜ.9) ನಡೆದ ಪರೀಕ್ಷೆಯಲ್ಲಿ ಗೋಲ್​ಮಾಲ್ ನಡೆದಿದೆ ಎಂದು ಹಲವು ಪೋಷಕರು ದೂರಿದ್ದಾರೆ. ಸರ್ಕಾರದ ಹಿರಿಯ ಅಧಿಕಾರಿಯೊಬ್ಬರ ಪುತ್ರಿಯೂ ಸೇರಿದಂತೆ ಇತರ ಸರ್ಕಾರಿ ನೌಕರರ ಐವರು ಮಕ್ಕಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಅವಧಿಗೂ ಮುನ್ನವೇ ಪ್ರಶ್ನಪತ್ರಿಕೆ ನೀಡಲಾಗಿತ್ತು ಎಂದು ಪೋಷಕರು ಪರೀಕ್ಷಾ ಕೇಂದ್ರ ನಿರ್ವಹಣೆಯ ಜವಾಬ್ದಾರಿ ಹೊತ್ತಿದ್ದ ಖಾಸಗಿ ಶಾಲೆಯ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿಯ ಜೈನ್ ಹೆರಿಟೇಜ್ ಶಾಲೆಯಲ್ಲಿ ಪ್ರವೇಶ ಪರೀಕ್ಷೆ ನಡೆಯುತ್ತಿದ್ದಾಗಲೇ ಕೆಲ ಪೋಷಕರು ಪ್ರತಿಭಟನೆ ನಡೆಸಿ, ಶಾಲಾ ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಾಡಾ ಆಡಳಿತಾಧಿಕಾರಿ ಶಶಿಧರ್ ಕುರೇರ್ ಅವರ ಪುತ್ರಿ ಸೇರಿ ಐವರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ ಎಂದು ದೂರಿ, ಪ್ರಾಂಶುಪಾಲರನ್ನು ತರಾಟೆಗೆ ತೆಗೆದುಕೊಂಡರು. ಈ ಆರೋಪಗಳನ್ನು ಕೆಎಎಸ್ ಅಧಿಕಾರಿ ಶಶಿಧರ್ ಕುರೇರ್ ತಳ್ಳಿಹಾಕಿದರು.

ಶಾಲೆಯ ಗೇಟ್ ಎದುರು ಹಲವು ಪಾಲಕರು ಘೋಷಣೆಗಳನ್ನು ಕೂಗಿದರು. ಈ ವೇಳೆ ಮಾತನಾಡಿದ ಕೆಎಎಸ್ ಅಧಿಕಾರಿ ಶಶಿಧರ್ ಕುರೇರ್, ಮಗಳಿಗೆ ಕೊವಿಡ್ ಗುಣಲಕ್ಷಣವಿತ್ತು ಹೀಗಾಗಿ ಒಂದು ಗಂಟೆ ಮುಂಚೆ ಬಂದು, ಕೊವಿಡ್ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಿರುವ ಬಗ್ಗೆ ವಿಚಾರಿಸಿದ್ದೆ. ಅದನ್ನು ಪಾಲಕರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ಸಮಜಾಯಿಷಿ ನೀಡಿದರು.

ಸೈನಿಕ ಶಾಲೆಗಳಲ್ಲಿ ಬಾಲಕಿಯರಿಗೂ ಅವಕಾಶ: ಮೋದಿ ಘೋಷಣೆ ಕಳೆದ ಆಗಸ್ಟ್ 15ರಂದು ದೆಹಲಿ ಕೆಂಪುಕೋಟೆ ಮೇಲೆ ಧ್ವಜಾರೋಹಣ ನಡೆಸಿ ದೇಶವನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಇನ್ನು ಮುಂದೆ ದೇಶದ ಎಲ್ಲ ಸೈನಿಕ ಶಾಲೆಗಳಲ್ಲಿ ಹೆಣ್ಣುಮಕ್ಕಳ ಪ್ರವೇಶಕ್ಕೆ ಅವಕಾಶ ಇದೆ ಎಂದಿದ್ದರು. ಸದ್ಯ ದೇಶದ ಕೆಲವೇ ಸೈನಿಕ ಶಾಲೆಗಳಲ್ಲಿ ಬಾಲಕಿಯರಿಗೂ ಪ್ರವೇಶಕ್ಕೆ ಅವಕಾಶ ಇದೆ. ಇನ್ನುಳಿದಂತೆ ಗಂಡುಮಕ್ಕಳಿಗೆ ಮಾತ್ರ ಅಲ್ಲಿ ಅವಕಾಶ ಇರುತ್ತದೆ. ಮುಂದಿನ ದಿನಗಳಲ್ಲಿ ಯಾವುದೇ ಸೈನಿಕ ಶಾಲೆಗೆ ಹೆಣ್ಣುಮಕ್ಕಳೂ ಪ್ರವೇಶ ಪಡೆಯಲು ಅವಕಾಶ ಸಿಕ್ಕಿದೆ. ‘ನನಗೆ ಅನೇಕ ಹೆಣ್ಣುಮಕ್ಕಳು ಪತ್ರ ಬರೆದು, ಸೈನಿಕ ಶಾಲೆಗಳಲ್ಲಿ ನಮಗೂ ಅವಕಾಶ ಕೊಡಬೇಕು ಎಂದು ಮನವಿ ಮಾಡಿದ್ದರು. ಅದರಂತೆ ನಮ್ಮ ಸರ್ಕಾರ ಅನುಮತಿ ನೀಡಿದೆ’ ಎಂದು ಮೋದಿ ಹೇಳಿದ್ದರು.

ವಾಯುಪಡೆ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ; ಖಾಲಿ ಇರುವ ಹುದ್ದೆಗಳು 334 ಭಾರತೀಯ ವಾಯು ಸೇನೆ (IAF) ವಾಯುಪಡೆಯ ಸಾಮಾನ್ಯ ಪ್ರವೇಶ ಪರೀಕ್ಷೆ (AFCAT)-2ಗೆ ಅರ್ಜಿ ಆಹ್ವಾನಿಸಿದೆ. ಹಾರಾಟ ವಿಭಾಗ ಮತ್ತು ಭೂ ವಿಭಾಗ ಎರಡೂ ಕಡೆಗಳಲ್ಲಿ ಖಾಲಿ ಇರುವ ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಸಂಬಂಧ ಈ ಅಧಿಸೂಚನೆ ಹೊರಡಿಸಿದೆ. ಆನ್​ಲೈನ್​ನಲ್ಲಿ ನೋಂದಣಿ ಪ್ರಕ್ರಿಯೆ ಜೂ.1ರಿಂದ ಶುರುವಾಗಲಿದ್ದು, ಜೂನ್ 30ರವರೆಗೆ ಅವಕಾಶ ಇರುತ್ತದೆ. ಆಸಕ್ತಿ ಇರುವ ಅರ್ಹರು afcat.cdac.in. ಗೆ ಭೇಟಿ ನೀಡಬೇಕು. ಯಾವ ವಿಭಾಗದಲ್ಲಿ ಆಸಕ್ತಿ ಇದೆಯೋ ಅದನ್ನು ನಮೂದಿಸಿ ಅರ್ಜಿ ಸಲ್ಲಿಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ: ಸೈನಿಕ ಶಾಲೆ ಪ್ರವೇಶ ಪರೀಕ್ಷೆ ವೇಳೆ ಅಧಿಕಾರಿಗಳ ಎಡವಟ್ಟು: ಅಭ್ಯರ್ಥಿಗಳಿಗೆ ನೀಡಿದ ಪ್ರಶ್ನೆಪತ್ರಿಕೆ, OMR ಶೀಟ್ ಅದಲು ಬದಲು ಇದನ್ನೂ ಓದಿ: ಹೊಸತಾಗಿ 100 ಸೈನಿಕ ಶಾಲೆ, 750 ಏಕಲವ್ಯ ಮಾದರಿ ವಸತಿ ಶಾಲೆ ಅಭಿವೃದ್ಧಿಗೆ ಯೋಜನೆ

Published On - 6:12 pm, Sun, 9 January 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!