ಗುಜರಾತ್​ ಫಲಿತಾಂಶ: ಇದೇನೂ ಮೋದಿ ಮ್ಯಾಜಿಕ್ ಅಲ್ಲ, ಅಭಿವೃದ್ಧಿ ಮ್ಯಾಜಿಕ್​ ಕೂಡ ಅಲ್ಲ ಎಂದ ಸತೀಶ್ ಜಾರಕಿಹೊಳಿ

| Updated By: ಗಂಗಾಧರ​ ಬ. ಸಾಬೋಜಿ

Updated on: Dec 09, 2022 | 3:09 PM

ಗುಜರಾತ್​ನಲ್ಲಿ ಕಾಂಗ್ರೆಸ್​ಗೆ ಹೀನಾಯ ಸೋಲುಂಟಾಗಿದೆ. ಇದೇನೂ ಮೋದಿ ಮ್ಯಾಜಿಕ್ ಅಲ್ಲ, ಅಭಿವೃದ್ಧಿ ಮ್ಯಾಜಿಕ್​ ಕೂಡ ಅಲ್ಲ. ಗುಜರಾತ್‌ನಲ್ಲಿ ಆಮ್ ಆದ್ಮಿ ಪಕ್ಷ ಶೇ.13ರಷ್ಟು ವೋಟ್ ಪಡೆದಿದೆ.

ಗುಜರಾತ್​ ಫಲಿತಾಂಶ: ಇದೇನೂ ಮೋದಿ ಮ್ಯಾಜಿಕ್ ಅಲ್ಲ, ಅಭಿವೃದ್ಧಿ ಮ್ಯಾಜಿಕ್​ ಕೂಡ ಅಲ್ಲ ಎಂದ ಸತೀಶ್ ಜಾರಕಿಹೊಳಿ
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
Follow us on

ಬೆಳಗಾವಿ: ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ (Gujarat And Himachal Pradesh Elections Results 2022) ನಿನ್ನೆ (ಡಿ. 8)ರಂದು ಪ್ರಕಟವಾಗಿದ್ದು, ಗುಜರಾತ್​ನಲ್ಲಿ ಬಿಜೆಪಿ (BJP) ಅಧಿಕಾರಕ್ಕೇರಿದರೆ, ಹಿಮಾಚಲದಲ್ಲಿ ಕಾಂಗ್ರೆಸ್ (Congress)​ ಗೆಲುವಿನ ನಗೆ ಬೀರಿದೆ. ಗುಜರಾತ್​ನಲ್ಲಿ ಕಾಂಗ್ರೆಸ್​ಗೆ ಹೀನಾಯ ಸೋಲುಂಟಾಗಿದೆ. ಈ ಕುರಿತಾಗಿ ಬೆಳಗಾವಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಇದೇನೂ ಮೋದಿ ಮ್ಯಾಜಿಕ್ ಅಲ್ಲ, ಅಭಿವೃದ್ಧಿ ಮ್ಯಾಜಿಕ್​ ಕೂಡ ಅಲ್ಲ. ಗುಜರಾತ್‌ನಲ್ಲಿ ಆಮ್ ಆದ್ಮಿ ಪಕ್ಷ ಶೇ.13ರಷ್ಟು ವೋಟ್ ಪಡೆದಿದೆ. ಆಮ್​ ಪಡೆದಿರುವ 13% ಮತಗಳು ಕಾಂಗ್ರೆಸ್​ನದ್ದು. ಇದರಿಂದಾಗಿ ಪಕ್ಷಕ್ಕೆ ನೇರವಾಗಿ ನಮಗೆ ಹೊಡೆತ ಬಿದ್ದಿದೆ. ಗುಜರಾತ್‌ನಲ್ಲಿ ಕಾಂಗ್ರೆಸ್ ಪಕ್ಷ 60-70 ಕ್ಷೇತ್ರಗಳಲ್ಲಿ ಗೆಲ್ಲಬೇಕಿತ್ತು ಎಂದರು.

ಆಮ್ ಆದ್ಮಿ ಪಕ್ಷದಿಂದ ಬಹಳಷ್ಟು ಸೀಟ್ ನಾವು ಕಳೆದುಕೊಂಡಿದ್ದೇವೆ. ಮತ ವಿಭಜನೆ ಆಗಿರುವುದರಿಂದ ಬಿಜೆಪಿ ಗೆದ್ದಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ತವರು ರಾಜ್ಯದಲ್ಲಿ ನಾವು ಗೆದ್ದಿದ್ದೇವೆ. ಹಿಮಾಚಲ ಪ್ರದೇಶದಲ್ಲಿ ಖರ್ಗೆ, ಪ್ರಿಯಾಂಕಾ ಪ್ರಚಾರ ಮಾಡಿದ್ದರು ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಇದನ್ನೂ ಓದಿ: ಪ್ರತಿ ಕ್ಷೇತ್ರದಿಂದ 5-10 ಜನ ಅರ್ಜಿ ಸಲ್ಲಿಕೆ, ಸರ್ವೆ ಮಾಡಿದ ಬಳಿಕ ಟಿಕೆಟ್ ನಿರ್ಧಾರ: ಸತೀಶ್ ಜಾರಕಿಹೊಳಿ

ಗುಜರಾತ್ ಬಿಜೆಪಿ​​ ಮಾದರಿ ಮೆಚ್ಚಿದ ಸತೀಶ್ ಜಾರಕಿಹೊಳಿ

ಇನ್ನು ಗುಜರಾತ್ ಬಿಜೆಪಿ​​ ಮಾದರಿಯನ್ನು ಸತೀಶ್ ಜಾರಕಿಹೊಳಿ ಮೆಚ್ಚಿದ್ದು, ಅದೇ​ ರೀತಿಯಲ್ಲೇ ರಾಜ್ಯ ಕಾಂಗ್ರೆಸ್​ನಲ್ಲಿ ಟಿಕೆಟ್ ಹಂಚಬೇಕು. ಸ್ಟ್ರ್ಯಾಟಜಿ ಮಾಡದೆ ರಾಜ್ಯದಲ್ಲಿ ನಾವು ಚುನಾವಣೆ ಗೆಲ್ಲಲು ಆಗಲ್ಲ. ಗುಜರಾತ್​ ಚುನಾವಣೆಯಲ್ಲಿ ಬಿಜೆಪಿ ಹೊಸಬರಿಗೆ ಟಿಕೆಟ್ ನೀಡಿದೆ. ಹಿಂದಿನ 3 ಚುನಾವಣೆಗಳಲ್ಲಿ 30-40 ಹೊಸಬರಿಗೆ ಟಿಕೆಟ್ ಹಂಚಿಕೆ ಮಾಡಲಾಗಿದೆ. ಆದರೆ ನಮ್ಮಲ್ಲಿ ಸೋಲುತ್ತಾರೆ ಎಂದು ಗೊತ್ತಿದ್ರೂ ಟಿಕೆಟ್ ನೀಡುತ್ತಾರೆ. ಸೀನಿಯರ್​ ಅಂತಾ ಟಿಕೆಟ್ ನೀಡುತ್ತೇವೆ. ಗೆಲ್ಲುವ ಹಾಗೆ ಇದ್ದರೆ ಮಾತ್ರ ಹಿರಿಯರಿಗೆ ಟಿಕೆಟ್ ನೀಡಲಿ. ಜಾತಿ ಯುಗ ಮುಗಿದಿದೆ, ಕೆಲಸ ಮಾಡುವುದನ್ನು ಜನ ನೋಡ್ತಾರೆ. ರಾಜ್ಯ ಕಾಂಗ್ರೆಸ್​​​​ ಪಕ್ಷದಲ್ಲಿ ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ತಿಳಿಸಿದರು.

ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಅಂತಾ ಜನ ಕಾಯುತ್ತಿದ್ದಾರೆ

ಬೆಳಗಾವಿ ಮತ್ತು ಇಡೀ ರಾಜ್ಯಕ್ಕೆ ಬದಲಾವಣೆ ಮಾಡಬೇಕು ಅಂತಾ ನನ್ನ ಅನಿಸಿಕೆ. ಇದರಿಂದ 20 ಸೀಟ್ ಹೆಚ್ಚು ಗೆಲ್ಲಬಹುದು. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಅಂತಾ ಜನ ನೋಡ್ತಿದ್ದಾರೆ. ಸಿದ್ದರಾಮಯ್ಯ ಕಾಲದ ಸಾಕಷ್ಟು ಯೋಜನೆ ಸ್ಥಗಿತ ಮಾಡಿದ್ದು ಜನರಿಗೆ ಗೊತ್ತಿದೆ. ಕುಟುಂಬಸ್ಥರಿಗೆ ಟಿಕೆಟ್ ನೀಡುವಂತೆ ಹಲವು ನಾಯಕರ ಅರ್ಜಿ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದು, ಕುಟುಂಬ ರಾಜಕಾರಣದಲ್ಲಿ ಗೆಲ್ಲುವ ಕೆಪ್ಯಾಸಿಟಿ ಇದ್ರೇ ಕೊಡಬಹುದು. ಅವರು ಗೆಲ್ತಾರೆ ಅಂದ್ರೇ ಒಂದೇ ಕುಟುಂಬಕ್ಕೆ ಎರಡು ಮೂರು ಟಿಕೆಟ್ ಕೊಡಬಹುದು. 2023ರಲ್ಲಿ ದಲಿತ ಸಿಎಂ ಆಗಬೇಕಾ ಎಂದು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದು, ದಲಿತ ಸಿಎಂ ಆಗಬೇಕು ಎಂಬುದು ಗುರಿಯಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದರು ಸತೀಶ್ ಜಾರಕಿಹೊಳಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 3:04 pm, Fri, 9 December 22