ಗೋಕಾಕ್​ನ ಸಮಾವೇಶದಲ್ಲಿ ಸತೀಶ್ ಜಾರಕಿಹೊಳಿ ಬಗ್ಗೆ ಮಾತನಾಡಿದ್ರೆ ವೇದಿಕೆಗೆ ನುಗ್ಗಿ ಹೊಡೆಯುತ್ತೇವೆ: ಶಾಸಕ ಯತ್ನಾಳ್​​ಗೆ ಸತೀಶ್ ಬೆಂಬಲಿಗರ ಎಚ್ಚರಿಕೆ

ಸಮಾವೇಶಕ್ಕೆ ಆಗಮಿಸುತ್ತಿರುವ ಯತ್ನಾಳ್‌ಗೆ ಸತೀಶ್ ಜಾರಕಿಹೊಳಿ ಬೆಂಬಲಿಗರು ಎಚ್ಚರಿಕೆ ಸಂದೇಶ ನೀಡಿದ್ದಾರೆ. ಹೋರಾಟದ ಹೊರತುಪಡಿಸಿ ಸತೀಶ್ ಜಾರಕಿಹೊಳಿ ಕುರಿತು ಮಾತನಾಡಿದ್ರೆ ವೇದಿಕೆಗೆ ನುಗ್ಗಿ ಹೊಡೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಗೋಕಾಕ್​ನ ಸಮಾವೇಶದಲ್ಲಿ ಸತೀಶ್ ಜಾರಕಿಹೊಳಿ ಬಗ್ಗೆ ಮಾತನಾಡಿದ್ರೆ ವೇದಿಕೆಗೆ ನುಗ್ಗಿ ಹೊಡೆಯುತ್ತೇವೆ: ಶಾಸಕ ಯತ್ನಾಳ್​​ಗೆ ಸತೀಶ್ ಬೆಂಬಲಿಗರ ಎಚ್ಚರಿಕೆ
ಸತೀಶ್ ಜಾರಕಿಹೊಳಿ ಬೆಂಬಲಿಗರು
Follow us
TV9 Web
| Updated By: ಆಯೇಷಾ ಬಾನು

Updated on:Nov 13, 2022 | 10:00 AM

ಬೆಳಗಾವಿ: ಗೋಕಾಕ್​ನಲ್ಲಿ ನಡೆಯುವ ಬೃಹತ್​ ಸಮಾವೇಶದಲ್ಲಿ ಸತೀಶ್ ಜಾರಕಿಹೊಳಿ ಬಗ್ಗೆ ಮಾತನಾಡಿದ್ರೆ ವೇದಿಕೆಗೆ ನುಗ್ಗಿ ಹೊಡೆಯುತ್ತೇವೆ ಎಂದು ಶಾಸಕ ಯತ್ನಾಳ್​​ಗೆ ಸತೀಶ್ ಜಾರಕಿಹೊಳಿ ಬೆಂಬಲಿಗರು ಎಚ್ಚರಿಕೆ ನೀಡಿದ್ದಾರೆ. 2ಎ ಮೀಸಲಾತಿಗೆ ಪಂಚಮಸಾಲಿ ಸಮುದಾಯ ಹೋರಾಟ ವಿಚಾರಕ್ಕೆ ಸಂಬಂಧಿಸಿ ಜಿಲ್ಲೆಯ ಗೋಕಾಕ್​ ನಗರದ ನ್ಯೂ ಇಂಗ್ಲಿಷ್​ ಶಾಲಾ ಆವರಣದಲ್ಲಿ ಇಂದು ಮಧ್ಯಾಹ್ನ 1ಕ್ಕೆ ಬೃಹತ್ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಬಸವ ಜಯಮೃತ್ಯುಂಜಯಶ್ರೀ ನೇತೃತ್ವದಲ್ಲಿ ಈ ಸಮಾವೇಶ ನಡೆಯಲಿದ್ದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಯತ್ನಾಳ್, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​, ವಿನಯ್ ಕುಲಕರ್ಣಿ ಸೇರಿ ಹಲವರು ಭಾಗಿಯಾಗಲಿದ್ದಾರೆ.

ಇನ್ನು ಸಮಾವೇಶಕ್ಕೆ ಆಗಮಿಸುತ್ತಿರುವ ಯತ್ನಾಳ್‌ಗೆ ಸತೀಶ್ ಜಾರಕಿಹೊಳಿ ಬೆಂಬಲಿಗರು ಎಚ್ಚರಿಕೆ ಸಂದೇಶ ನೀಡಿದ್ದಾರೆ. ಹೋರಾಟದ ಹೊರತುಪಡಿಸಿ ಸತೀಶ್ ಜಾರಕಿಹೊಳಿ ಕುರಿತು ಮಾತನಾಡಿದ್ರೆ ವೇದಿಕೆಗೆ ನುಗ್ಗಿ ಹೊಡೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮಾನಸಿಕ ಅಸ್ವಸ್ಥ ಯತ್ನಾಳ್, ಯಡಿಯೂರಪ್ಪ, ವಿಜಯೇಂದ್ರ ಬಗ್ಗೆ ಮಾತನಾಡಿದ ಹಾಗೇ ಇಲ್ಲಿ ಏನಾದ್ರೂ ಗೋಕಾಕ್​ನಲ್ಲಿ ಮಾತನಾಡಿದರೆ ಗೋಕಾಕ್ ಬಿಟ್ಟು ಹೋಗುವುದು ಕಠಿಣ ಆಗುತ್ತೆ ಎಂದಿದ್ದಾರೆ.

ಇದನ್ನೂ ಓದಿ: ಮಗ ಮನೆಬಿಟ್ಟು ಹೋಗಿ ದಶಕಗಳಾದರೂ ಕೈಯಲ್ಲಿ ಮಗನ ಪೋಟೋ ಹಿಡಿದುಕೊಂಡು ಊರೂರು ಸುತ್ತುತ್ತಿರುವ ತಂದೆ

2ಎ ಮೀಸಲಾತಿಗೆ ನಮ್ಮ ಸಂಪೂರ್ಣ ಬೆಂಬಲ ಇದೆ. ನೀನು ಬಂದೆ ಪುಟ್ಟ ಹೋದೆ ಪುಟ್ಟ ಅಷ್ಟೇ ಇರಬೇಕು. ಅದನ್ನ ಬಿಟ್ಟು ಮಾತನಾಡಿದ್ರೇ ವೇದಿಕೆಗೆ ನುಗ್ಗಿ ಹೊಡೆಯುತ್ತೇವೆ. ನಮ್ಮ ಸಾಹುಕಾರ್ ಹೆಸರು ವೇದಿಕೆ ಮೇಲೆ ತೆಗೆದ್ರೇ ಇದು ನಿನಗೆ ಓಪನ್ ಚಾಲೆಂಜ್. ಧಮ್ ಇದ್ರೇ, ತಾಕತ್ ಇದ್ರೇ ನಮ್ಮ ಸಾಹುಕಾರ್ ಹೆಸರು ವೇದಿಕೆಯಲ್ಲಿ ತೆಗೆ ಆಮೇಲೆ ಇದೆ ನಿನಗೆ ಎಂದು ಸತೀಶ್ ಜಾರಕಿಹೊಳಿ ಬೆಂಬಲಿಗರು ಯತ್ನಾಳ್‌ಗೆ ನೇರವಾಗಿ ಚಾಲೆಂಜ್ ಹಾಕಿದ್ದಾರೆ.

ಅರಭಾವಿ ಆಯ್ತು, ಹುಕ್ಕೇರಿ ಆಯ್ತು ಇಂದು ಗೋಕಾಕ್‌ನಲ್ಲಿ ಪಂಚಮಸಾಲಿ ಸಮಾವೇಶಕ್ಕೆ ಸಿದ್ಧತೆ ನಡೆದಿದೆ. ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಡಿಸೆಂಬರ್ 12ರಂದು 25 ಲಕ್ಷ ಜನ ಸೇರಿಸಿ ಬೆಂಗಳೂರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ. ಇದರ ಪೂರ್ವಭಾವಿಯಾಗಿ ತಾಲೂಕು ಮಟ್ಟದಲ್ಲಿ ಬೃಹತ್ ಪಂಚಮಸಾಲಿ ಸಮಾವೇಶಕ್ಕೆ ಚಿಂತಿಸಿದ್ದು ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮೀಜಿ ಗೋಕಾಕ್ ತಾಲೂಕಿನ ಪ್ರತಿ ಹಳ್ಳಿ ಹಳ್ಳಿಗಳಿಗೆ ಭೇಟಿ ನೀಡಿದ್ದಾರೆ.

Published On - 10:00 am, Sun, 13 November 22