ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ (Satish Jarkiholi) ಹಿಂದೂ ಧರ್ಮದ ಬಗ್ಗೆ ಮಾತಾಡಿದ್ದು ತಪ್ಪು ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ (D K Shivakumar) ಬೆಳಗಾವಿಯಲ್ಲಿ ಹೇಳಿದ್ದಾರೆ. ಕಿತ್ತೂರಿನಲ್ಲಿ ಇಂದು (ನ.7) ಏರ್ಪಡಿಸಲಾಗಿದ್ದ ಮಾಜಿ ಸಚಿವ ವಿನಯ ಕುಲಕರ್ಣಿಯವರ ಜನ್ಮದಿನದ ಕಾರ್ಯಕ್ರಕ್ಕೆಂದು ತೆರಳಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸತೀಶ್ ಜಾರಕಿಹೊಳಿ ಅವರು ತಮ್ಮ ಹೇಳಿಕೆಯನ್ನು ಹಿಂಪಡೆಯುವಂತೆ ಕೆಪಿಸಿಸಿ ಅಧ್ಯಕ್ಷನಾಗಿ ಸೂಚಿಸುತ್ತೇನೆ. ಸತೀಶ್ ಜಾರಕಿಹೊಳಿ ಯಾವ ಅರ್ಥದಲ್ಲಿ ಹೇಳಿದ್ದಾರೆಂದು ಗೊತ್ತಿಲ್ಲ. ನಮ್ಮ ದೇಶದಲ್ಲಿ ಹಿಂದೂ ಧರ್ಮ ಮೂಲತಃವಾದ ಧರ್ಮವಾಗಿದೆ. ಹಿಂದೂ ಧರ್ಮದ ಬಗ್ಗೆ ಮಾತನಾಡುವ ಹಕ್ಕು ಯಾರಿಗೂ ಇಲ್ಲ ಎಂದು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ