Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿಡಿ ಪ್ರಕರಣ ನಮ್ಮ ಮೇಲೆ ಯಾವುದೇ ಪರಿಣಾಮ ಬೀರಲ್ಲ.. ಕುಟುಂಬ ಚುನಾವಣೆ ಸ್ಪರ್ಧೆ ಮಾಡ್ತಿಲ್ಲ, ಪಕ್ಷ ಮಾಡುತ್ತಿದೆ’

ಸಿಡಿ ಪ್ರಕರಣ ನಮ್ಮ ಮೇಲೆ ಯಾವುದೇ ಪರಿಣಾಮ ಬೀರಲ್ಲ. ಇದೊಂದು ಅವಕಾಶ ನನಗೆ ಸಿಕ್ಕಿದೆ, ನನಗೆ ಖುಷಿ ಇದೆ. ಯಮಕನಮರಡಿ ಕ್ಷೇತ್ರದ ಜನ ಈಗ ಬೆಂಬಲ ಕೊಟ್ಟಿದ್ದಾರೆ ಎಂದು ‘ಕೈ’ ಅಭ್ಯರ್ಥಿ ಸತೀಶ್ ಜಾರಕಿಹೊಳಿ‌ ಹೇಳಿದರು.

‘ಸಿಡಿ ಪ್ರಕರಣ ನಮ್ಮ ಮೇಲೆ ಯಾವುದೇ ಪರಿಣಾಮ ಬೀರಲ್ಲ.. ಕುಟುಂಬ ಚುನಾವಣೆ ಸ್ಪರ್ಧೆ ಮಾಡ್ತಿಲ್ಲ, ಪಕ್ಷ ಮಾಡುತ್ತಿದೆ’
ಸತೀಶ್ ಜಾರಕಿಹೊಳಿ‌ (ಸಂಗ್ರಹ ಚಿತ್ರ)
Follow us
KUSHAL V
|

Updated on:Mar 26, 2021 | 7:10 PM

ಏ.17ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸೋಮವಾರ ನಾಮಪತ್ರ ಸಲ್ಲಿಸುತ್ತೇನೆ ಎಂದು ‘ಕೈ’ ಅಭ್ಯರ್ಥಿ ಸತೀಶ್ ಜಾರಕಿಹೊಳಿ‌ ಹೇಳಿದ್ದಾರೆ. ಚುನಾವಣೆ ಸ್ಪರ್ಧೆಗೆ ಆಸಕ್ತಿ ಇಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಮಾನಸಿಕವಾಗಿ ನಾನು ಉಪಚುನಾವಣೆಗೆ ತಯಾರಾಗಿದ್ದೇನೆ. ಅನುಕಂಪ ಎಷ್ಟರ ಮಟ್ಟಿಗೆ ಕೆಲಸ ಮಾಡಲಿದೆ ನೋಡಬೇಕು. ನರೇಂದ್ರ ಮೋದಿ ಸರ್ಕಾರ ಎಲ್ಲಾ ರಂಗದಲ್ಲಿ ವಿಫಲವಾಗಿದೆ. ಇದನ್ನ ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚು ಬಿಜೆಪಿ ಶಾಸಕರಿದ್ದಾರೆ. ಈಗಿನ ವಿಷಯ ಬೇರೆ ಇದೆ, ಆಗಿನ ವಿಚಾರ ಬೇರೆ ಇದೆ ಎಂದು ಸತೀಶ್​ ಜಾರಕಿಹೊಳಿ ಹೇಳಿದರು.

‘ಸಿಡಿ ಪ್ರಕರಣ ನಮ್ಮ ಮೇಲೆ ಯಾವುದೇ ಪರಿಣಾಮ ಬೀರಲ್ಲ’ ಸಿಡಿ ಪ್ರಕರಣ ನಮ್ಮ ಮೇಲೆ ಯಾವುದೇ ಪರಿಣಾಮ ಬೀರಲ್ಲ. ಇದೊಂದು ಅವಕಾಶ ನನಗೆ ಸಿಕ್ಕಿದೆ, ನನಗೆ ಖುಷಿ ಇದೆ. ಯಮಕನಮರಡಿ ಕ್ಷೇತ್ರದ ಜನ ಈಗ ಬೆಂಬಲ ಕೊಟ್ಟಿದ್ದಾರೆ ಎಂದು ‘ಕೈ’ ಅಭ್ಯರ್ಥಿ ಸತೀಶ್ ಜಾರಕಿಹೊಳಿ‌ ಹೇಳಿದರು. ಕಾಂಗ್ರೆಸ್, ಬಿಜೆಪಿ ನಡುವೆ ನೇರಾ ಹಣಾಹಣಿ ಏರ್ಪಡಲಿದೆ. ಸಿಡಿ ಪ್ರಕರಣ ಪ್ರಸ್ತಾಪದಿಂದ ಲಾಭ ಆಗಲಿದೆ ಎಂದು ಅನಿಸಲ್ಲ. ಕೇಂದ್ರ, ರಾಜ್ಯ ಸರ್ಕಾರದ ವೈಫಲ್ಯ ಮುಂದಿಟ್ಟು ಚುನಾವಣೆ ನಡೆಸುತ್ತೇವೆ ಎಂದು ಹೇಳಿದರು.

ರಮೇಶ್ ಜಾರಕಿಹೊಳಿ‌ ವಿರುದ್ಧ ಸಿಡಿ ಲೇಡಿ ದೂರು ನೀಡುರುವುದು ಬೆಳಗಾವಿ ಲೋಕಸಭಾ ಬೈಎಲೆಕ್ಷನ್ ಮೇಲೆ ಪ್ರಭಾವ ಬೀರಲ್ಲ. ನಮ್ಮ ಪಕ್ಷದ ಮೇಲೆ ಪ್ರಭಾವ ಬೀರುವ ಸಂಬಂಧ ಬರಲ್ಲ ಎಂದು ಕಾಂಗ್ರೆಸ್​ ಅಭ್ಯರ್ಥಿ ಸತೀಶ್​ ಅಭಿಪ್ರಾಯಪಟ್ಟಿದ್ದಾರೆ. ಕುಟುಂಬ ಚುನಾವಣೆ ಸ್ಪರ್ಧೆ ಮಾಡ್ತಿಲ್ಲ, ಪಕ್ಷ ಮಾಡುತ್ತಿದೆ. ಪ್ರಚಾರ ವೇಳೆ ಸಿಡಿ ವಿಚಾರ ಪ್ರಸ್ತಾಪ ಪ್ರಯೋಜನ ಆಗಲ್ಲ. ಸದನದಲ್ಲಿ ಸರ್ಕಾರಕ್ಕೆ ಏನು ಹೇಳಬೇಕಿತ್ತೋ ಪಕ್ಷ ಹೇಳಿದೆ. ಈಗ ಹೇಳುವುದರಿಂದ ನಮಗೆ ಲಾಭ ಆಗುತ್ತೆ ಅನಿಸಲ್ಲ. ನೋಡೋಣ ವರಿಷ್ಠರ ಜೊತೆ ನಾನು ಚರ್ಚೆ ಮಾಡುತ್ತೇನೆ ಎಂದು ‘ಕೈ’ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಹೇಳಿದರು.

ಉಪಚುನಾವಣೆಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ ಉಪಚುನಾವಣೆಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆಯಾಗಿದೆ. ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ನಾಮಪತ್ರ ಸಲ್ಲಿಕೆ, ಮನೆಮನೆ ಪ್ರಚಾರಕ್ಕೆ ಮಾರ್ಗಸೂಚಿ ಬಿಡುಗಡೆಯಾಗಿದೆ. ಪ್ರಚಾರದ ವೇಳೆ ಕಡ್ಡಾಯವಾಗಿ ಮಾಸ್ಕ್​ ಧರಿಸಿರಬೇಕು. ವ್ಯಕ್ತಿಯಿಂದ ವ್ಯಕ್ತಿಗೆ 2 ಮೀಟರ್​​​ ಅಂತರ ಪಾಲಿಸಬೇಕು. ನಾಮಪತ್ರ ಸಲ್ಲಿಕೆ ವೇಳೆ ಕೇವಲ ಇಬ್ಬರಿಗೆ ಮಾತ್ರ ಅವಕಾಶ ನೀಡಲಾಗುವುದು. ಚುನಾವಣೆಯ ಸಂದರ್ಭದಲ್ಲಿ ಪ್ರತಿಯೊಂದು ಹಾಲ್, ಕೊಠಡಿಗಳಲ್ಲಿ 6 ಅಡಿ ದೈಹಿಕ ಅಂತರ ಕಾಯ್ದುಕೊಳ್ಳಬೇಕು. ಸ್ಕ್ರೀನಿಂಗ್, ಸ್ಯಾನಿಟೇಷನ್‌ ಕಡ್ಡಾಯವಾಗಿ ಮಾಡಬೇಕು ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಶಹಪುರ್ ಟೋಲ್​​ಗೇಟ್​​ನಲ್ಲಿ AEE ಮೇಲೆ ಹಲ್ಲೆ ಪ್ರಕರಣ: 14 ಜನರ ಬಂಧನ

Published On - 7:07 pm, Fri, 26 March 21

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು