Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್​ ಜೊತೆ ಹೊಂದಾಣಿಕೆ ಆಗುವ ಪ್ರಶ್ನೆಯೇ ಇಲ್ಲ: ಸತೀಶ್ ಜಾರಕಿಹೊಳಿ

ಡಿಸಿಎಂ ಡಿಕೆ ಶಿವಕುಮಾರ್ ನಮ್ಮ ನಿವಾಸಕ್ಕೆ ಹಲವು ಬಾರಿ ಬಂದಿದ್ದಾರೆ. ಪಕ್ಷದ ವಿಚಾರ ಮತ್ತು ಅಭಿವೃದ್ಧಿ ವಿಚಾರದ ಕುರಿತು ಚರ್ಚೆ ಆಗಿದೆ. ಮೈಸೂರಿಗೆ ಹೋಗುವ ಉದ್ದೇಶ ಬೇರೆ, ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ಉದ್ದೇಶವೇ ಬೇರೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಡಿಕೆ ಶಿವಕುಮಾರ್​ ಜೊತೆ ಹೊಂದಾಣಿಕೆ ಆಗುವ ಪ್ರಶ್ನೆಯೇ ಇಲ್ಲ: ಸತೀಶ್ ಜಾರಕಿಹೊಳಿ
ಡಿಕೆ ಶಿವಕುಮಾರ್ & ಸತೀಶ್ ಜಾರಕಿಹೊಳಿ
Follow us
TV9 Web
| Updated By: Ganapathi Sharma

Updated on: Nov 11, 2023 | 1:31 PM

ಬೆಳಗಾವಿ, ನವೆಂಬರ್ 11: ಬೆಳಗಾವಿ ರಾಜಕಾರಣದಲ್ಲಿ (Belagavi Politics) ಹೊರಗಿನವರ ಹಸ್ತಕ್ಷೇಪದ ಬಗ್ಗೆ ಮುನಿಸಿಕೊಂಡಿರುವ ಸಚಿವ ಸತೀಶ್​ ಜಾರಕಿಹೊಳಿ (Satish Jarkiholi) ಇದೀಗ ಮತ್ತೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಡಿಕೆ ಶಿವಕುಮಾರ್​ ಜೊತೆ ಹೊಂದಾಣಿಕೆ ಆಗುವ ಪ್ರಶ್ನೆಯೇ ಇಲ್ಲ. ಪಕ್ಷದ ಹಂತದಲ್ಲಿ ಚರ್ಚೆ ಆಗಬೇಕೇ ವಿನಃ ನಮ್ಮ ಹಂತದಲ್ಲಿ ಏನೂ ಇಲ್ಲ. ನಾನು ಯಾವುದೇ ಹುದ್ದೆಗೆ ಬೇಡಿಕೆ ಇಟ್ಟಿಲ್ಲ ಎಂದು ಹೇಳಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ನಮ್ಮ ನಿವಾಸಕ್ಕೆ ಹಲವು ಬಾರಿ ಬಂದಿದ್ದಾರೆ. ಪಕ್ಷದ ವಿಚಾರ ಮತ್ತು ಅಭಿವೃದ್ಧಿ ವಿಚಾರದ ಕುರಿತು ಚರ್ಚೆ ಆಗಿದೆ. ಮೈಸೂರಿಗೆ ಹೋಗುವ ಉದ್ದೇಶ ಬೇರೆ, ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ಉದ್ದೇಶವೇ ಬೇರೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಅಡ್ಜಸ್ಟ್​ಮೆಂಟ್ ಎನ್ನುವ ಪ್ರಶ್ನೆ ಇಲ್ಲ. ಲೋಕಸಭೆ ಚುನಾವಣೆಯಾದ ಬಳಿಕ ಚರ್ಚೆಗೆ ಬರಬಹುದು. ಚುನಾವಣೆ ಬಳಿಕ ಯಾವ ಹೊಸ ವಿಚಾರ ಬರುತ್ತವೆಂದು ಕಾದು ನೋಡೋಣ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಸತೀಶ್ ಅವರು ಶಾಸಕರನ್ನು ಕರೆದುಕೊಂಡು ಮೈಸೂರು ಪ್ರವಾಸಕ್ಕೆ ಹೊರಡಲು ಮುಂದಾಗಿದ್ದ ವಿಚಾರ ಇತ್ತೀಚೆಗೆ ಕಾಂಗ್ರೆಸ್​ನ ಆಂತರಿಕ ವಲಯದಲ್ಲಿ ತಲ್ಲಣಕ್ಕೆ ಕಾರಣವಾಗಿತ್ತು. ನಂತರ ಹೈಕಮಾಂಡ್ ಮಧ್ಯ ಪ್ರವೇಶಿಸಿ ಪ್ರವಾಸ ರದ್ದಾಗುವಂತೆ ಮಾಡಿತ್ತು. ಆ ನಂತರವೂ, ಸತೀಶ್ ಜಾರಕಿಹೊಳಿ ಶಾಸಕರ ಜತೆ ದುಬೈಗೆ ಪ್ರವಾಸ ಹೋಗಲಿದ್ದಾರೆ ಎಂದೆಲ್ಲ ವದಂತಿ ಹಬ್ಬಿದ್ದವು. ಖುದ್ದು ಸಿಎಂ ಸಿದ್ದರಾಮಯ್ಯ ಅವರೇ, ಶಾಸಕರು ಅವರ ದುಡ್ಡಲ್ಲಿ ಪ್ರವಾಸ ಹೋದರೆ ನಮಗೇನು, ಸರ್ಕಾರದ ದುಡ್ಡಿನಲ್ಲಿ ಹೋಗುವುದಲ್ಲವಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಜೊತೆ ಯಾವುದೇ ವೈಮನಸ್ಸಿಲ್ಲ ಅಂತ ಸಾರ್ವಜನಿಕವಾಗಿ ತೋರುವ ಪ್ರಯತ್ನ ಡಿಕೆ ಶಿವಕುಮಾರ್ ಮಾಡುತ್ತಿದ್ದಾರೆಯೇ?

ಈ ಎಲ್ಲ ಬೆಳವಣಿಗೆಗಳು ಕಾಂಗ್ರೆಸ್​ನಲ್ಲಿ ಇನ್ನೂ ಅಸಮಾಧಾನದ ಹೊಗೆಯಾಡುತ್ತಲೇ ಇದೆ ಎಂಬುದನ್ನು ನಿರೂಪಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು