ಸತೀಶ್ ಜಾರಕಿಹೊಳಿ ಶಕ್ತಿ ಪ್ರದರ್ಶನ: ಬೆಳಗಾವಿಯಿಂದ ಡಿಕೆ ಶಿವಕುಮಾರ್ ನಿರ್ಗಮಿಸುತ್ತಿದ್ದಂತೆ ಜಿಲ್ಲೆಗೆ ಆಗಮಿಸಿದ ಕಾಂಗ್ರೆಸ್ ಶಾಸಕರು

ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಮೂಗು ತೂರಿಸುತ್ತಿರುವುದು ಸಚಿವ ಸತೀಶ್ ಜಾರಕಿಹೊಳಿ ಮುನಿಸಿಗೆ ಕಾರಣವಾಗಿದೆ. ಜಿಲ್ಲೆಗೆ ಸ್ವತಃ ಡಿಸಿಎಂ ಬಂದಿದ್ದರೂ ಯಾವೊಬ್ಬ ಕೈ ಶಾಸಕನೂ ಸ್ವಾಗತ ಕೋರಲು ಬಂದಿರಲಿಲ್ಲ. ಹೀಗಾಗಿ ಶಿವಕುಮಾರ್ ಅವರು ಏಕಾಂಗಿಯಾಗಿ ಪ್ರವಾಸ ಮಾಡಿ ನಿರ್ಗಮಿಸಿದ ನಂತರ ಎಲ್ಲಾ ಶಾಸಕರು ಪ್ರತ್ಯಕ್ಷಗೊಂಡಿದ್ದಾರೆ.

ಸತೀಶ್ ಜಾರಕಿಹೊಳಿ ಶಕ್ತಿ ಪ್ರದರ್ಶನ: ಬೆಳಗಾವಿಯಿಂದ ಡಿಕೆ ಶಿವಕುಮಾರ್ ನಿರ್ಗಮಿಸುತ್ತಿದ್ದಂತೆ ಜಿಲ್ಲೆಗೆ ಆಗಮಿಸಿದ ಕಾಂಗ್ರೆಸ್ ಶಾಸಕರು
ಡಿಕೆ ಶಿವಕುಮಾರ್ ಮತ್ತು ಸತೀಶ್ ಜಾರಕಿಹೊಳಿ
Follow us
Sahadev Mane
| Updated By: Rakesh Nayak Manchi

Updated on:Oct 20, 2023 | 2:43 PM

ಬೆಳಗಾವಿ, ಅ.20: ಜಿಲ್ಲಾ ರಾಜಕಾರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಮೂಗು ತೂರಿಸುತ್ತಿರುವುದು ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಮುನಿಸಿಗೆ ಕಾರಣವಾಗಿದೆ. ಜಿಲ್ಲೆಗೆ ಸ್ವತಃ ಡಿಸಿಎಂ ಬಂದಿದ್ದರೂ ಸತೀಶ್ ಜಾರಕಿಹೊಳಿ ಜಿಲ್ಲೆಯಿಂದ ಆಚೆ ಉಳಿದಿದ್ದಾರೆ. ಇತರೆ ಕೈ ಶಾಸಕರೂ ಸಾಥ್ ನೀಡಿದ್ದು, ಡಿಕೆ ಶಿವಕುಮಾರ್ ಸ್ವಾಗತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಯಾರೊಬ್ಬರೂ ಆಗಮಿಸಿಲ್ಲ. ಆದರೆ ಏಕಾಂಗಿಯಾಗಿ ಜಿಲ್ಲಾ ಪ್ರವಾಸ ಮಾಡಿದ ಶಿವಕುಮಾರ್ ಇಂದು ನಿರ್ಗಮಿಸುತ್ತಿದ್ದಂತೆ ಎಲ್ಲಾ ಶಾಸಕರು ಜಿಲ್ಲೆಯಲ್ಲಿ ಪ್ರತ್ಯಕ್ಷಗೊಂಡಿದ್ದಾರೆ.

ಸತೀಶ್ ಜಾರಕಿಹೊಳಿ ಅಸಮಾಧಾನದ ನಡುವೆ ಬೆಳಗಾವಿಯಲ್ಲಿ ಎರಡು ದಿನ ಡಿಸಿಎಂ ಡಿಕೆ ಶಿವಕುಮಾರ್ ಪ್ರವಾಸದಲ್ಲಿದ್ದರೂ ಸ್ವಪಕ್ಷದ ಯಾವೊಬ್ಬ ಶಾಸಕರು ಹಾಗೂ ಜಿಲ್ಲಾ ಘಟಕದ ಅಧ್ಯಕ್ಷರು ಜಿಲ್ಲೆಯಲ್ಲಿ ಕಾಣಿಸಿಲ್ಲ. 11 ಶಾಸಕರಲ್ಲಿ ಕೇವಲ ಓರ್ವ ಶಾಸಕರು ಮಾತ್ರ ಡಿಸಿಎಂ ಭೇಟಿಗೆ ಬಂದಿದ್ದರು.

ಅದಾಗ್ಯೂ, ಎರಡು ದಿನಗಳ ಕಾಲ ಏಕಾಂಗಿಯಾಗಿ ಜಿಲ್ಲಾ ಪ್ರವಾಸ ನಡೆಸಿದ ಡಿಕೆ ಶಿವಕುಮಾರ್ ಅವರು ನಿನ್ನೆ ಬೆಳಗಾವಿಯಿಂದ ನಿರ್ಗಮಿಸಿದ್ದಾರೆ. ಇಂದು ಶಾಸಕರೆಲ್ಲರೂ ಪ್ರತ್ಯಕ್ಷಗೊಂಡಿದ್ದಾರೆ. ಶಾಸಕರಾದ ಆಸೀಫ್ ಸೇಠ್, ರಾಜು ಕಾಗೆ, ಬಾಬಾಸಾಹೇಬ್ ಪಾಟೀಲ್ ಅವರು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದಾರೆ. ಮೈಸೂರು ಪ್ರವಾಸಕ್ಕೆ ಹೋಗಿದ್ದರಿಂದ ಡಿಸಿಎಂ ಭೇಟಿಯಾಗಿಲ್ಲ ಎಂದು ಹೇಳುವ ಮೂಲಕ ಮೂವರು ಶಾಸಕರು ಸಬೂಬು ನೀಡಿದ್ದಾರೆ.

ಇದನ್ನೂ ಓದಿ: ಡಿಕೆ ಶಿವಕುಮಾರ್ ಬೆಳಗಾವಿ ಪ್ರವಾಸ: ಸತೀಶ್ ಜಾರಕಿಹೊಳಿ ಸೈಲೆಂಟ್ ಸ್ಕೆಚ್‌‌!

ನಾನಾ ಕಾರ್ಯಕ್ರಮಗಳ ನಿಮಿತ್ತ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು (ಅಕ್ಟೋಬರ್ 18) ಬೆಳಗಾವಿಗೆ ಬಂದಿದ್ದರು. ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಸಭೆಯನ್ನೂ ನಡೆಸಿದ್ದರು. ಆದರೆ ತವರು ಜಿಲ್ಲೆಗೆ ಡಿಕೆ ಶಿವಕುಮಾರ್ ಬಂದರೂ ಜಾರಕಿಹೊಳಿ ಅಂತರ ಕಾಪಾಡಿಕೊಂಡಿದ್ದರು.

ಆ ಮೂಲಕ ಡಿಸಿಎಂಗೆ ತಮ್ಮ ಪ್ರಭಾವದ ಟ್ರೈಲರ್ ತೋರಿಸಿ, ಅಭಿಬಿ ಪಿಕ್ಚರ್ ಹೈ ಎನ್ನುವ ಪರೋಕ್ಷ ಸಂದೇಶ ರವಾನಿಸಿದ್ದಾರೆ. ತಮ್ಮ ಬೆಂಬಲಗರನ್ನು ಸಹ ಡಿಕೆ ಶಿವಕುಮಾರ್ ಕಾರ್ಯಕ್ರಮಗಳಿಂದ ದೂರ ಇಡುವ ಮೂಲಕ ಸತೀಶ್ ಜಾರಕಿಹೊಳಿ, ಇಡೀ ಬೆಳಗಾವಿ ಜಿಲ್ಲೆ ತಮ್ಮ ಹಿಡಿತದಲ್ಲಿದೆ ಎನ್ನುವುದನ್ನು ಶಿವಕುಮಾರ್​ಗೆ ಮನವರಿಕೆ ಮಾಡಿಕೊಟ್ಟಂತಿದೆ. ಒಟ್ಟಿನಲ್ಲಿ ಮೈತ್ರಿ ಸರ್ಕಾರವಿದ್ದಾಗ ರಮೇಶ್ ಜಾರಕಿಹೊಳಿ ಕಾಂಗ್ರೆಸ್​ಗೆ ತಲೆನೋವು ಆಗಿದ್ದರು. ಇದೀಗ ಸತೀಶ್ ಜಾರಕಿಹೊಳಿ ಅಸಮಾಧಾನ ಕಾಂಗ್ರೆಸ್​ ಗೆ ದೊಡ್ಡ ಟೆನ್ಷನ್ ತಂದೊಡ್ಡಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:41 pm, Fri, 20 October 23

Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ